ಗೋಡ್ಸೆ ಸಮರ್ಥನೆ,ರಾಜೀವ್ ನಿಂದನೆ; ಸಂಸದ ನಳೀನ್ ಕ್ಷಮೆಯಾಚನೆ
ಟ್ವೀಟ್ ಹಿಂಪಡೆದಿದ್ದೇನೆ,ಚರ್ಚೆ ಇಲ್ಲಿಗೆ ಮುಗಿಸೋಣ
Team Udayavani, May 17, 2019, 12:22 PM IST
ಮಂಗಳೂರು: ನಾಥುರಾಮ್ ಗೋಡ್ಸೆ ಸಮರ್ಥಿಸಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿ ಮಾಡಿದ್ದ ಟ್ವೀಟ್‌ಗಳವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಕ್ಷಮೆ ಯಾಚಿಸಿದ್ದಾರೆ. ವಿವಾದಕ್ಕೆ ಕಾರಣವಾದ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ.
”ನನ್ನ ಕೊನೆಯ ಎರಡು ಟ್ವೀಟ್ ಗಳಿಗೆ ಟೀಕೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ. ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನೋವಾಗಿದೆಯೆಂದು ತಿಳಿದ ತಕ್ಷಣ ಟ್ವೀಟ್ ಹಿಂಪಡೆದಿದ್ದೇನೆ. ಚರ್ಚೆ ಇಲ್ಲಿಗೆ ಮುಗಿಸೋಣ.” ಎಂದು ಬರೆದಿದ್ದಾರೆ.
ನಳೀನ್ ಕುಮಾರ್ ಕಟೀಲ್ ಅವರ ಟ್ವೀಟ್ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದ್ದು, ಭಾರೀ ಚರ್ಚೆಗೆ ಗುರಿಯಾಗಿದೆ. ಕಾಂಗ್ರೆಸ್ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು.
ವಿವಾದಕ್ಕೆ ಗುರಿಯಾದ ಟ್ವೀಟ್ ನಲ್ಲೇನಿತ್ತು?
ನಾಥುರಾಮ್ ಗೋಡ್ಸೆ ಕೊಂದವರ ಸಂಖ್ಯೆ 1
ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72
ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000
ಈಗ ನೀವೆ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು ? ಎಂದು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.