ಡಿಕೆಶಿ ಹೇಳಿಕೆ ಟೂಲ್‌ಕಿಟ್ ಪ್ರಕರಣದ ಮುಂದುವರಿದ ಭಾಗ: ನಳಿನ್ ಕುಮಾರ್ ಕಟೀಲ್
Team Udayavani, Feb 9, 2022, 9:27 PM IST
ಬೆಂಗಳೂರು: ಭಾರತದ ತ್ರಿವರ್ಣ ಧ್ವಜ ಕೆಳಕ್ಕಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು. ಕಾಂಗ್ರೆಸ್ ಪಕ್ಷದ್ ಟೂಲ್‌ಕಿಟ್ ಭಾಗದ ಅನುಗುಣವಾಗಿ ದೇಶದೊಳಗೆ ಮತ್ತು ಪ್ರಪಂಚದಲ್ಲಿ ಭಾರತದ ಕುರಿತು ತಪ್ಪು ಅಭಿಪ್ರಾಯ ಮೂಡಿಸುವ ಕುತ್ಸಿತ ಮನೋಭಾವವನ್ನು ಇದು ಅನಾವರಣಗೊಳಿಸಿದೆ. ಇದು ಕೋಮು ಸೌಹಾರ್ದತೆ ಕದಡುವ ವ್ಯವಸ್ಥಿತ ಹುನ್ನಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಖಾಲಿ ಇದ್ದ ಧ್ವಜಸ್ತಂಭದಲ್ಲಿ ಓಂಕಾರ ಧ್ವಜವನ್ನು ಹಾರಿಸಲಾಗಿದೆ. ತ್ರಿವರ್ಣ ಧ್ವಜವನ್ನು ಇಳಿಸಿ ಈ ಧ್ವಜ ಹಾರಿಸಿಲ್ಲ. ತ್ರಿವರ್ಣ ಧ್ವಜದ ಗೌರವ ಹೆಚ್ಚಳಕ್ಕಾಗಿ ಬಿಜೆಪಿ ಹಗಲಿರುಳೆನ್ನದೆ ಕೆಲಸ ಮಾಡುತ್ತಿದೆ. 20 ವರ್ಷಗಳ ಹಿಂದೆಯೇ ಈ ಸವಾಲನ್ನು ನಾವು ಸ್ವೀಕರಿಸಿ ಲಾಲ್ ಚೌಕ್‌ನಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ್ದೇವೆ. ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ಬಲಿದಾನ ಮಾಡಿದ ಪಕ್ಷ ನಮ್ಮದು ಎಂದು ಅವರು ಹೇಳಿದ್ದಾರೆ.
ಕಳೆದ 70 ವರ್ಷಗಳಿಂದ ಕಾಂಗ್ರೆಸ್ ದೇಶದಲ್ಲಿ ಒಡೆದು ಆಳುವ ನೀತಿ, ಮತೀಯ ಭಾವನೆಯನ್ನು ಕೆರಳಿಸುವ ಹಾಗೂ ಜನರಲ್ಲಿ ಅಭದ್ರತೆ ಮೂಡಿಸುವ ಕಾರ್ಯ ಮಾಡುತ್ತಿದೆ. ರಾಜಕೀಯ ಕಾರಣ ಮತ್ತು ಸ್ವಾರ್ಥಕ್ಕಾಗಿ ದೇಶದ ಗೌರವವನ್ನು ಜಗತ್ತಿನ ಮುಂದೆ ಕಡಿಮೆಗೊಳಿಸುವ ಹುನ್ನಾರ ಇದರ ಹಿಂದಿದೆ ಹಾಗೂ ಇದನ್ನು ಬಿಟ್ಟು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಂದ ಬೇರೆ ಏನನ್ನು ಅಪೇಕ್ಷಿಸಲು ಸಾಧ್ಯ? ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನೆ ಮಾಡಿದ್ದಾರೆ.
ಸಮಾಜ ಒಡೆಯುವ ಕೆಲಸಕ್ಕೆ ಕೆಪಿಸಿಸಿ ಅಧ್ಯಕ್ಷರು ಸ್ವಯಂ ಪ್ರೇರಣೆಯಿಂದ ಭಾಗಿಯಾಗಿರುವುದು ಸ್ಪಷ್ಟಗೊಂಡಿದೆ. ಇದು ಅತ್ಯಂತ ಆತಂಕಕಾರಿ ವಿಚಾರ. ತಿರಂಗ ಧ್ವಜವನ್ನು ಇಳಿಸಲಾಗಿದೆ ಎಂಬ ಸುಳ್ಳು ಹೇಳಿಕೆಯು ರಾಜ್ಯದ ವಿದ್ಯಾರ್ಥಿ ಸಮುದಾಯವನ್ನು ಉದ್ರೇಕಿಸುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಸುಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದು, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾತನಾಡುವಾಗ ಹತ್ತು ಬಾರಿ ಯೋಚಿಸಬೇಕಾಗುತ್ತದೆ. ರಾಜ್ಯದಲ್ಲಿ ವಿದ್ಯಾರ್ಥಿ ಸಮುದಾಯ ಎದ್ದು ನಿಂತ ಸಂದರ್ಭದಲ್ಲಿ ನಾವಾಡುವ ಪ್ರತಿ ಮಾತಿಗೂ ಸೂಕ್ಷ್ಮತೆ ಇರಬೇಕಾಗುತ್ತದೆ. ಆದರೆ, ಕೆಪಿಸಿಸಿ ಅಧ್ಯಕ್ಷರು ಈ ಲಕ್ಷ್ಮಣರೇಖೆಯನ್ನು ದಾಟಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.