Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
ಮಹಾವಿಕಾಸ್ ಅಘಾಡಿ ಮೈತ್ರಿ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.
Team Udayavani, Nov 25, 2024, 2:53 PM IST
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ಮಹಾವಿಕಾಸ್ ಅಘಾಡಿ (MVA) ಹೀನಾಯ ಸೋಲನ್ನು ಅನುಭವಿಸಿದ ಪರಿಣಾಮ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸೋಮವಾರ (ನ.25) ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 103 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಮಾತ್ರ ಕೇವಲ 16 ಸ್ಥಾನಗಳಲ್ಲಿ. ನಾನಾ ಪಟೋಲೆ ಕೂಡಾ ಸಾಕೋಲಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 208 ಮತಗಳ ಅಂತರದಿಂದ ಜಯಗಳಿಸಿದ್ದರು.
2021ರಲ್ಲಿ ಬಾಳಾಸಾಹೇಬ್ ಥೋರಟ್ ಅವರ ಬದಲು ಪಟೋಲೆ ಅವರನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಕಾಗ್ರೆಸ್ 17 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಮಹಾವಿಕಾಸ್ ಅಘಾಡಿ ಮೈತ್ರಿ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 50ಕ್ಕಿಂತಲೂ ಕಡಿಮೆ ಸ್ಥಾನಕ್ಕೆ ಕುಸಿದಿದ್ದು, ಬಿಜೆಪಿ ಮೈತ್ರಿಯ ಮಹಾಯುತಿ ಬರೋಬ್ಬರಿ 232 ಸ್ಥಾನ ಗಳಿಸಿ ಸ್ಪಷ್ಟ ಬಹುಮತ ಪಡೆದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು…ಈ ಬಾರಿ ಕೇವಲ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿ ಮುಖಭಂಗ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.