ತೋಟಗಾರಿಕೆ ಇಲಾಖೆ ಮೂಲಕವೇ ನಂದಿಗಿರಿಧಾಮದ ನಿರ್ವಹಣೆ : ಸಚಿವ ನಾರಾಯಣಗೌಡ ಸ್ಪಷ್ಟನೆ
Team Udayavani, Oct 14, 2020, 3:58 PM IST
ಚಿಕ್ಕಬಳ್ಳಾಪುರ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ವಿಶ್ವ ವಿಖ್ಯಾತ ನಂದಿಗಿರಿಧಾಮವನ್ನು ಮೇಲ್ದರ್ಜೆಗೆ ಏರಿಸಿ ಅಭಿವೃಧ್ಧಿಗೊಳಿಸಲು ಯೋಜನೆಯನ್ನು ರೂಪಿಸಿ ಪ್ರವಾಸೋದ್ಯಮದ ಇಲಾಖೆಯ ಬದಲಿಗೆ ತೋಟಗಾರಿಕೆ ಇಲಾಖೆಯ ಮೂಲಕವೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದು ತೋಟಗಾರಿಕೆ ಇಲಾಖೆ ಮೂಲಕವೇ ನಿರ್ವಹಣಾ ಮಾಡಲು ನಿರ್ಧರಿಸಿದ್ದೇವೆ ಎಂದು ರಾಜ್ಯ ತೋಟಗಾರಿಕೆ, ರೇಷ್ಮೆ ಹಾಗೂ ಪೌರಾಡಳಿತ ಸಚಿವ ನಾರಾಯಣಗೌಡ ತಿಳಿಸಿದರು.
ಜಿಲ್ಲೆಯ ನಂದಿಗಿರಿಧಾಮಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡುವುದರಿಂದ ವಾಣಿಜ್ಯಕರಣವಾಗಿ ಪರಿಸರಕ್ಕೆ ಧಕ್ಕೆ ಆಗುತ್ತದೆ ಎಂದು ಸ್ಥಳೀಯ ರೈತರು ವಿರೋದ ವ್ಯಕ್ತಪಡಿಸಿದ್ದಾರೆ ಹೀಗಾಗಿ ನಂದಿಗಿರಿಧಾಮವನ್ನು ತೋಟಗಾರಿಕೆ ಇಲಾಖೆಯಲ್ಲಿ ಮುಂದುವರೆಸಲು ಮುಖ್ಯ ಮಂತ್ರಿಗಳ ಮನವಿ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ :ರಿಕ್ಷಾದಲ್ಲಿ ಮಹಿಳೆ ಬಿಟ್ಟುಹೋದ 50 ಸಾವಿರ ರೂ. ಹಿಂದಿರುಗಿಸಿ ಮಾನವೀಯತೆ ಮೆರೆದ ರಿಕ್ಷಾ ಚಾಲಕ
ರಾಜ್ಯದಲ್ಲಿ ತೋಟಗಾರಿಕೆ ಇಲಾಖೆಯಿಂದ ಅನೇಕ ರೀತಿಯ ಅಭಿವೃದ್ದಿ ಆಗುತ್ತದೆ ಆದರೆ ಮಹಾತ್ಮ ಗಾಂಧೀಜಿ ಅವರು ವಿಶ್ರಾಂತಿ ಪಡೆದು ಆಯುರ್ವೇದಿಕ್ ಪದ್ದತಿ ಮೂಲಕ ಚಿಕಿತ್ಸೆ ಪಡೆದುಕೊಂಡು ಆರೋಗ್ಯವನ್ನು ಸುಧಾರಿಸಿಕೊಂಡು ಹೋಗಿದ್ದಾರೆ ಜೊತೆಗೆ ಔಷಧಿಯ ಗಿಡ ಮೂಲಿಕೆಗಳನ್ನು ಹೊಂದಿರುವ ನಂದಿಗಿರಿಧಾಮದ ಸೌಂದರ್ಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಜೊತೆಗೆ ತೋಟಗಾರಿಕೆ ವಸತಿ ಮತ್ತು ಅತಿಥಿ ಗೃಹಗಳನ್ನು ಮೇಲ್ದರ್ಜೆಗೆ ಏರಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಂದಿಗಿರಿಧಾಮದಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸಿ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಂಡು ಪ್ರಾಕೃತಿಕ ಸೌಂದರ್ಯವನ್ನು ತನ್ನ ಮಡಿಲಲ್ಲಿ ಇಟ್ಟುಕೊಂಡಿರುವ ನಂದಿಗಿರಿಧಾಮವನ್ನು ಯಾವುದೇ ಕಾರಣಕ್ಕೂ ತೋಟಗಾರಿಕೆ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವುದಿಲ್ಲ ತೋಟಗಾರಿಕೆ ಇಲಾಖೆಯ ನಿವೃತ್ತ ಅಧಿಕಾರಿಗಳು, ಪರಿಸರ ಪ್ರೇಮಿಗಳು ಮತ್ತು ಸ್ಥಳೀಯ ರೈತರು ಮತ್ತು ಪ್ರವಾಸಿಗರ ಸಲಹೆ ಸೂಚನೆಗಳನ್ನು ಪಡೆದು ನಂದಿಗಿರಿಧಾಮವನ್ನು ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ; ಕೋವಿಡ್ ಸೋಂಕು: ಮೂಡಬಿದಿರೆ ಶಿಕ್ಷಕಿಗೆ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ: ಸುರೇಶ್ ಕುಮಾರ್
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು:ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಸಹ ಅಭ್ಯರ್ಥಿಗಳ ಪರವಾಗಿ ಮತಯಾಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್, ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಡಿವೈಎಸ್‍ಪಿ ರವಿಶಂಕರ್, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.