Infosys Founder’s ಸ್ವತಃ ನಾರಾಯಣಮೂರ್ತಿ ವಾರಕ್ಕೆ 90 ಗಂಟೆ ದುಡಿಯುತ್ತಾರೆ

ಪತಿಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಸುಧಾಮೂರ್ತಿ

Team Udayavani, Oct 30, 2023, 8:11 PM IST

Infosys Founder’s ಸ್ವತಃ ನಾರಾಯಣಮೂರ್ತಿ ವಾರಕ್ಕೆ 90 ಗಂಟೆ ದುಡಿಯುತ್ತಾರೆ

ನವದೆಹಲಿ: ಇತ್ತೀಚಿಗೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅವರು, “ಭಾರತದ ಒಟ್ಟಾರೆ ಉತ್ಪಾದಕತೆಯನ್ನು ಹೆಚ್ಚಿಸಲು ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಿರಬೇಕು’ ಎಂದು ಹೇಳಿದ್ದರು.

ಈ ಕುರಿತು ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಆರಂಭವಾದ ಬೆನ್ನಲ್ಲೇ ಅವರ ಹೇಳಿಕೆಯನ್ನು ಅವರ ಪತ್ನಿ, ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ಸಮರ್ಥಿಸಿಕೊಂಡಿದ್ದಾರೆ.

“ಸ್ವತಃ ನಾರಾಯಣಮೂರ್ತಿ ಅವರೇ ವಾರಕ್ಕೆ 80ರಿಂದ 90 ಗಂಟೆಗಳು ದುಡಿಯುತ್ತಾರೆ. ಇದನ್ನೇ ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ಕಠಿಣ ಪರಿಶ್ರಮದ ಬಗ್ಗೆ ಅವರಿಗೆ ಬಹಳ ನಂಬಿಕೆಯಿದೆ. ಅವರು ಏನು ನಂಬಿದ್ದಾರೋ ಅದನ್ನೇ ಪ್ರತಿಪಾದಿಸಿದ್ದಾರೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.

ಇದೇ ವೇಳೆ, “ನಾರಾಯಣಮೂರ್ತಿ ಅವರ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಗಮನಿಸಿದೆ. ಕೇವಲ ಕಂಪನಿಯ ಕೆಲಸದ ಸಮಯದ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ನಾನು ನಂಬುತ್ತೇನೆ. ಇದು ನಿಮ್ಮ ಸ್ವಂತಕ್ಕೆ ಹಾಗೂ ದೇಶಕ್ಕೆ ಮೀಸಲಿರಿಸಬೇಕಾದ ಸಮಯ. 70 ಗಂಟೆಗಳಲ್ಲಿ-ಕಂಪನಿಗಾಗಿ 40 ಗಂಟೆಗಳು ಹಾಗೂ ಸ್ವಂತ ಏಳಿಗೆಗಾಗಿ 30 ಗಂಟೆಗಳು’ ಎಂದು ಟೆಕ್‌ ಮಹೀಂದ್ರಾ ಸಿಇಒ ಸಿ.ಪಿ.ಗುರ್ನಾನಿ ಅಭಿಪ್ರಾಯಪಟ್ಟಿದ್ದಾರೆ.

“ಒಂದು ವಿಷಯದ ಮೇಲೆ ನೀವು 10,000 ಗಂಟೆಗಳನ್ನು ಹೂಡಿದರೆ, ನೀವು ಅದರ ಮೇಲೆ ಪ್ರಾಬಲ್ಯ ಹೊಂದುತ್ತೀರಿ. ಕಠಿಣ ಶ್ರಮ ವಹಿಸಿದರೆ, ನಿಮ್ಮ ಕ್ಷೇತ್ರದಲ್ಲಿ ತಜ್ಞರಾಗುತ್ತೀರಿ. 70 ಗಂಟೆಗಳ ಕೆಲಸವು ನಿಮ್ಮಲ್ಲಿ ಬದಲಾವಣೆ ತರುವ ಜತೆಗೆ ದೇಶದ ಏಳ್ಗೆಗೂ ಸಹಕಾರಿಯಾಗಲಿದೆ’ ಎಂದು ಗುರ್ನಾನಿ ಪ್ರತಿಪಾದಿಸಿದ್ದಾರೆ.

ಇನ್ನೊಂದೆಡೆ, “ಕಚೇರಿಗಳು ಮತ್ತು ಮನೆಗಳ ನಡುವೆ, ಅನೇಕ ಭಾರತೀಯ ಮಹಿಳೆಯರು ಭಾರತವನ್ನು (ತಮ್ಮ ಕೆಲಸದ ಮೂಲಕ) ಮತ್ತು ಮುಂದಿನ ಪೀಳಿಗೆಯ ಭಾರತೀಯರನ್ನು (ತಮ್ಮ ಮಕ್ಕಳು) ನಿರ್ಮಿಸಲು ವಾರಕ್ಕೆ 70 ಗಂಟೆಗಳಿಗಿಂತಲೂ ಹೆಚ್ಚು ಅವಧಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಖುಷಿಯಿಂದ ಮಾಡುತ್ತಿದ್ದಾರೆ. ಅಲ್ಲದೇ ಯಾವುದೇ ಬೇಡಿಕೆಯಿಲ್ಲದೆ ಹೆಚ್ಚುವರಿ ಅವಧಿಗೆ ದುಡಿಯುತ್ತಿದ್ದಾರೆ. ಆದರೆ ತಮಾಷೆಯೆಂದರೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇದುವರೆಗೂ ಯಾರೂ ಚರ್ಚೆ ಮಾಡಿಲ್ಲ’ ಎಂದು ಎಡೆಲ್ವಿಸ್‌ ಮ್ಯೂಚುಯಲ್‌ ಫಂಡ್ ಸಿಇಒ, ಎಂಡಿ ರಾಧಿಕಾ ಗುಪ್ತ ಟ್ವೀಟ್‌(ಎಕ್ಸ್‌) ಮಾಡಿದ್ದಾರೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.