ಹನುಮ ಭಕ್ತರಿಗೆ ಮೋದಿ ಅಪಮಾನ: ಬೇಷರತ್‌ ಕ್ಷಮೆಗೆ ಕಾಂಗ್ರೆಸ್‌ ಆಗ್ರಹ

Team Udayavani, May 4, 2023, 7:05 AM IST

ಹನುಮ ಭಕ್ತರಿಗೆ ಮೋದಿ ಅಪಮಾನ: ಬೇಷರತ್‌ ಕ್ಷಮೆಗೆ ಕಾಂಗ್ರೆಸ್‌ ಆಗ್ರಹ

ಉಡುಪಿ/ಮಂಗಳೂರು: ಹನುಮಂತ ದೇವರು ಮತ್ತು ಬಜರಂಗದಳವನ್ನು ಸಮೀಕರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಬೇಷರತ್‌ ಕ್ಷಮೆ ಯಾಚಿಸಬೇಕು ಎಂದು ಎಐಸಿಸಿ ವಕ್ತಾರ ಪ್ರೊ| ಗೌರವ್‌ ವಲ್ಲಭ್‌ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವ ಕುರಿತು ಉಲ್ಲೇಖೀಸಲಾಗಿದೆ. ಹಾಗಾದರೆ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕುವುದು ತಪ್ಪೇ ಎಂದು ಪ್ರಶ್ನಿಸಿದರು.

ಪ್ರಧಾನಿಯವರು ಕರ್ನಾಟಕಕ್ಕೆ ಬಂದ ಸಂದರ್ಭಗಳಲ್ಲಿ ಇಲ್ಲಿನ ಸರಕಾರದ ಶೇ. 40 ಕಮಿಷನ್‌, ಮುಖ್ಯಮಂತ್ರಿಯವರು ಕಮಿಷನ್‌ ಏಜೆಂಟ್‌ ಆಗಿರುವುದು, ನೇಮಕಾತಿ ಹಗರಣಗಳ ಬಗ್ಗೆ ಮಾತನಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅದ್ಯಾವುದನ್ನು ಮಾತನಾಡದೇ ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದರು.

ಕನ್ನಡಿಗರಿಗೆ ಅವಮಾನವಾದ ಸಂದರ್ಭದಲ್ಲಿ ಏನೂ ಮಾತನಾಡಿಲ್ಲ, ನಂದಿನಿ ಹಾಲಿನ ವಿವಾದದ ಬಗ್ಗೆಯೂ ಚಕಾರ ಎತ್ತಿಲ್ಲ. ಅಭಿವೃದ್ಧಿ, ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆಯೂ ಪ್ರಸ್ತಾವಿಸಿಲ್ಲ. ಕಾಂಗ್ರೆಸ್‌ನ ಪ್ರಣಾಳಿಕೆ ಬಗ್ಗೆ ವಿವಾದ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಮತದಾರರು ಮೇ 10ರಂದು ಸೂಕ್ತ ಉತ್ತರ ನೀಡಲಿದ್ದಾರೆ ಎಂದರು.

ಬಜರಂಗದಳದ ಕಾರ್ಯಕರ್ತನೊಬ್ಬ ಕರ್ನಾಟಕದಲ್ಲಿ ದಲಿತ ಯುವಕನ ಕೊಲೆ ಮಾಡಿದ ನಿದರ್ಶನವಿದೆ. ದಲಿತರು ಹಿಂದೂಗಳಲ್ಲವೇ? ಈ ಬಗ್ಗೆ ಮೋದಿ ಮೌನವಾಗಿರುವುದು ಏಕೆ? ಅವರ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ ಏಕೆ ಎಂದು ಪ್ರಶ್ನಿಸಿದರು.

ಎಐಸಿಸಿ ವಕ್ತಾರ ಚರಣ್‌ ಸಿಂಗ್‌ ಸಪ್ರಾ, ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಪ್ರಮುಖ ರಾದ ವಿನಯ್‌ ರಾಜ್‌, ಎಂ.ಎ. ಗಫ‌ೂರ್‌, ರಮೇಶ್‌ ಕಾಂಚನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.