Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

ಥೈ ಚೈನೀಸ್‌ ಸಮುದಾಯದವರಿಂದ ನವರಾತ್ರಿಯನ್ನು ನಂಬಿಕೆ, ಭಕ್ತಿ ರೂಪಕವಾಗಿ ಆಚರಣೆ

Team Udayavani, Oct 5, 2024, 2:35 PM IST

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

ನವದೇವಿಯರನ್ನು ಆರಾಧಿಸುವ ನವರಾತ್ರಿ ಹಬ್ಬಕ್ಕೆ ಜಗದಲೆಲ್ಲ ಖ್ಯಾತಿಯಿದೆ. ಒಂಬತ್ತು ದಿನಗಳು ದೇವಿಯ ಒಂದೊಂದು ಸ್ವರೂಪವನ್ನು ಆರಾಧಿಸಲಾಗುತ್ತದೆ. ವಿವಿಧ ದೇವಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಕೇವಲ ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ನೆಲೆಸಿರುವ ಹಲವು ಭಾರತೀಯ ಸಮುದಾಯದವರು ನವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ವಿವಿಧ ದೇಶಗಳಲ್ಲಿ ನವರಾತ್ರಿ ಆಚರಣೆ ಹೇಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ನ್ಯೂಜಿಲ್ಯಾಂಡ್‌
ದುರ್ಗಾಪೂಜೆ ಮಾಡುವ ಮೂಲಕ ಇಲ್ಲಿನ ಅನಿವಾಸಿ ಭಾರತೀಯರು 9 ದಿನಗಳ ಕಾಲ ಶ್ರದ್ಧಾ-ಭಕ್ತಿಯಿಂದ ನವರಾತ್ರಿಯನ್ನು ಆಚರಿಸುತ್ತಾರೆ. ಅಕ್‌ಲ್ಯಾಂಡ್‌ ನಗರದ ಭಾರತೀಯ ಮಂದಿರ, ಮಹಾತ್ಮ ಗಾಂಧಿ ಸೆಂಟರ್‌, ಶಿರಿಡಿ ಸಾಯಿ ಮಂದಿರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿಜೃಂಭಣೆಯಿಂದ ಹಬ್ಬವು ನಡೆಯುತ್ತದೆ. ಇಡೀ ಒಂಬತ್ತು ದಿನವೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತವೆ.

ಥೈಲ್ಯಾಂಡ್‌
ಪ್ರಾಚೀನ ಕಾಲದಿಂದಲೂ ಥೈಲ್ಯಾಂಡ್‌ ಜನರ ಮೇಲೆ ಹಿಂದೂ ಧರ್ಮ ಪ್ರಭಾವ ಬೀರಿರುವುದರಿಂದ ದಕ್ಷಿಣ ಭಾರತದಿಂದ ವಲಸೆ ಬಂದ ಭಾರತೀಯರಲ್ಲಿ ಥೈಲ್ಯಾಂಡ್‌ ಜನರು ದೇವಿ ಪಾರ್ವತಿ ರೂಪವನ್ನು ಕಂಡಿದ್ದರು. ರಾಜ ರಾಮಾ ವಿ ( 1868-1910) ಆಳ್ವಿಕೆಯ ಸಂದರ್ಭದಲ್ಲಿ ಬ್ಯಾಂಕಾಕ್‌ನ ಸಿಲೋಮ್‌ ರಸ್ತೆಯಲ್ಲಿ ಕಟ್ಟಿಸಿದ್ದ ಶ್ರೀ ಮಹಾ ಮರಿಯಮ್ಮನ್‌ ದೇವಸ್ಥಾನ ಸೇರಿದಂತೆ ವಿವಿಧ ಹಿಂದೂ ದೇವಸ್ಥಾಗಳಲ್ಲಿ ಥೈ ಇಂಡಿಯನ್‌, ಥೈ ಚೈನೀಸ್‌ ಸಮುದಾಯದವರಿಂದ ನವರಾತ್ರಿಯನ್ನು ನಂಬಿಕೆ, ಭಕ್ತಿ ರೂಪಕವಾಗಿ ಆಚರಿಸಲಾಗುತ್ತದೆ.

ಮಲೇಶಿಯಾ
ಇಲ್ಲಿ 1920ರಿಂದಲೂ ನವರಾತ್ರಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಒಂಬತ್ತು ದಿನಗಳ ಕಾಲ ಹೆಚ್ಚು ಜನರು ಸೇರುವ ಮೂಲಕ ದುರ್ಗಾ, ಲಕ್ಷ್ಮೀ ಮತ್ತು ಸರಸ್ವತಿ ದೇವಿಗಳಿಗೆ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಾರೆ. ರಥೋತ್ಸವದ ಸಂದರ್ಭದಲ್ಲಿ ದಾರಿಯುದ್ದಕ್ಕೂ ಭಜನೆ, ಸಂಗೀತ ಕಾರ್ಯಕ್ರಮಗಳು ನಡೆಯುತ್ತವೆ.

ನೈಜೀರಿಯಾ
ಇಲ್ಲಿ 200 ಅಧಿಕ ಬಂಗಾಲಿ ಕುಟುಂಬದವರು ನೆಲೆಸಿರುವ ಕಾರಣ 1981ರಿಂದ ನವರಾತ್ರಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. 2023ರಲ್ಲಿ ಕಾಳಿ ದೇಗುಲವನ್ನು ನಿರ್ಮಿಸಿ ದಿನನಿತ್ಯವೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ.

ಅಮೆರಿಕ
ಅಮೆರಿಕದಲ್ಲಿ 1970ರಿಂದ ದುರ್ಗಾ ಪೂಜೆಗಳು ಆರಂಭಗೊಂಡಿತು. ಅಮೆರಿಕದಲ್ಲಿ ನವರಾತ್ರಿಯನ್ನು ಹೆಚ್ಚಾಗಿ ಭಾರತೀಯ ವಲಸಿಗರು ಆಚರಿಸುತ್ತಾರೆ. ಅನೇಕ ಸಮುದಾಯ ಕೇಂದ್ರಗಳು ಮತ್ತು ದೇವಾಲಯಗಳು ಗರ್ಬಾ ಮತ್ತು ದಾಂಡಿಯಾ ರಾಸ್‌ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಅವರ ಸಂಸ್ಕೃತಿ ಮತ್ತು ಪರಂಪರೆಯನ್ನು ಆಚರಿಸುವ ಜನರನ್ನು ಒಟ್ಟುಗೂಡಿಸಿ ಈ ಹಬ್ಬವನ್ನು ಆಚರಿಸುತ್ತಾರೆ.

ಇಂಗ್ಲೆಂಡ್‌
ಇಂಗ್ಲೆಂಡಿನಲ್ಲಿ ಲಂಡನ್‌, ಲೀಸೆಸ್ಟರ್‌ ಮತ್ತು ಬರ್ಮಿಂಗ್‌ಹ್ಯಾಮ್‌ ನಗರಗಳಲ್ಲಿ ನವರಾತ್ರಿಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ವಿವಿಧ ಸಾಂಸ್ಕೃತಿಕ ಗುಂಪುಗಳು ಕಾರ್ಯಕ್ರಮಗಳು ಮತ್ತು ಗರ್ಬಾ ಪಾರ್ಟಿಗಳನ್ನು ಆಯೋಜಿಸುತ್ತಾರೆ. ಈ ಹಬ್ಬಗಳು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ.

ನೇಪಾಲ
ನೇಪಾಲದಲ್ಲಿ ನವರಾತ್ರಿಯನ್ನು ದಶೈನ್‌ ಎಂದು ಕರೆಯುತ್ತಾರೆ. ಇದು ವರ್ಷದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದ್ದು, 15 ದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಈ ಸಮಯದಲ್ಲಿ ಜನರು ದುರ್ಗಾದೇವಿಯನ್ನು ವಿವಿಧ ರೂಪದಲ್ಲಿ ಪೂಜಿಸುತ್ತಾರೆ. ಇಲ್ಲಿನ ವಿಶೇಷವೆಂದರೆ “ಜಮರ’ ಆಚರಣೆ. ಇದರ ಭಾಗವಾಗಿ ಬಾರ್ಲಿ ಬೀಜವನ್ನು ಮಡಿಕೆಯಲ್ಲಿ ಬಿತ್ತಲಾಗುತ್ತದೆ. ಮೊಳಕೆಯೊಡೆದ ಈ ಬೀಜಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ ಮತ್ತು ಅಕ್ಕಪಕ್ಕದವರೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತದೆ.

ಆಸ್ಟ್ರೇಲಿಯಾ
ಆಸ್ಟ್ರೇಲಿಯಾದಲ್ಲಿ 1974ರಲ್ಲಿ, ನ್ಯೂ ಸೌತ್‌ ವೇಲ್ಸನ್‌ ಭಾರತೀಯ ಸಮುದಾಯದ ಜನರು ಒಟ್ಟಾಗಿ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಸಾಂಸ್ಕೃತಿಕ ತಂಡಗಳಿಂದ ದಾಂಡಿಯಾ ರಾಸ್‌ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಸ್ಥಳಗಳನ್ನು ವರ್ಣರಂಜಿತವಾಗಿ ಅಲಂಕರಿಸಲಾಗುತ್ತದೆ. ಉತ್ಸಾಹಭರಿತ ಸಂಗೀತಗಳು ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತವೆ.

ಬಾಂಗ್ಲಾದೇಶ
ಬಾಂಗ್ಲಾದ ಢಾಕಾದಲ್ಲಿರುವ ಢಾಕೇಶ್ವರ ದೇವಸ್ಥಾನದಲ್ಲಿ ನವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ದುರ್ಗಾದೇವಿ ದೇವಸ್ಥಾನವು ಜನರಿಂದ ತುಂಬಿ ತುಳುಕುತ್ತಿರುತ್ತದೆ. ಬಾಂಗ್ಲಾದಲ್ಲಿ ನೆಲೆಸಿರುವ ಬಹುಪಾಲು ಬಂಗಾಲಿಯರು ಈ ಹಬ್ಬವನ್ನು ಆಚರಿಸುತ್ತಾರೆ.

(ಸಂಗ್ರಹ ಮಾಹಿತಿ)

ಟಾಪ್ ನ್ಯೂಸ್

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.