Naxal Vikram Gowda: ಮನೆಯವರಿಂದ ಶವ ಸ್ವೀಕಾರ; ಮನೆ ಪಕ್ಕದಲ್ಲೇ ಅಂತ್ಯಸಂಸ್ಕಾರ

ಮನೆಯ ಕೃಷಿ ಭೂಮಿಯಲ್ಲಿ ಶವಸಂಸ್ಕಾರ

Team Udayavani, Nov 21, 2024, 7:21 AM IST

Vikram-Naxal

ಹೆಬ್ರಿ: ವಿಕ್ರಂ ಗೌಡನ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದ ಕುಟುಂಬಿಕರ ಮನವೊಲಿಸುವಲ್ಲಿ ಅಧಿಕಾರಿಗಳು ಸಫ‌ಲರಾಗಿದ್ದು, ಬುಧವಾರ ಮಧ್ಯಾಹ್ನ ಕೂಡ್ಲುವಿನ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಕುಟುಂಬದವರು, ಊರಿನವರ ಸಹಿತ ಸುಮಾರು 150ಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ವಿಕ್ರಂ ಗೌಡನ ಸಹೋದರ ಸುರೇಶ್‌ ನೇತೃತ್ವ, ತಂಗಿ ಸುಗುಣಾ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.

ನಿರಾಕರಣೆ ಬಳಿಕ ಒಪ್ಪಿಗೆ
ಎನ್‌ಕೌಂಟರ್‌ ನಡೆದ ಮಾಹಿತಿ ದೊರೆತ ಆರಂಭದಲ್ಲಿ ಸಹೋದರ ಹೊರತು ಪಡಿಸಿ ತಂಗಿ, ಕುಟುಂಬಿಕರು ಯಾರೂ ಘಟನೆ ನಡೆದ ಸ್ಥಳ ಹಾಗೂ ಶವವಿರಿಸಿದ್ದ ಆಸ್ಪತ್ರೆಗೆ ತೆರಳಿರಲಿಲ್ಲ. ಆರಂಭದಲ್ಲಿ ಶವಸಂಸ್ಕಾರ ನಡೆಸಲು ಹಿಂದೇಟು ಹಾಕಿದ್ದರು. ಅನಂತರದಲ್ಲಿ ಪೊಲೀಸರ ಮನವಿಗೆ ಸ್ಪಂದಿಸಿ ಶವಸಂಸ್ಕಾರ ಮನೆಯ ಕೃಷಿ ಭೂಮಿಯಲ್ಲಿ ನಡೆಸಲು ನಿರ್ಧರಿಸಲಾಯಿತು. ಅದಕ್ಕೂ ಮೊದಲು ಉಡುಪಿಯ ಬೀಡಿನಗುಡ್ಡೆಯಲ್ಲಿ ಶವಸಂಸ್ಕಾರ ನಡೆಸುವ ಬಗ್ಗೆಯೂ ನಿರ್ಧರಿಸಲಾಗಿತ್ತು.

ಮರಣೋತ್ತರ ಪರೀಕ್ಷೆ
ವಿಕ್ರಂ ಗೌಡನ ಮೃತದೇಹವನ್ನು ಮಂಗಳವಾರ ಸಂಜೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ತರಲಾಗಿತ್ತು. ತಡರಾತ್ರಿ 12 ಗಂಟೆ ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಆರಂಭಗೊಂಡು ಬುಧವಾರ ಬೆಳಗ್ಗಿನ ಜಾವ 5 ಗಂಟೆ ತನಕವೂ ಮುಂದುವರಿದಿತ್ತು ಎಂದು ಮೂಲಗಳು ತಿಳಿಸಿವೆ. ಶವಾಗಾರಕ್ಕೆ ಆಗಮಿಸಿದ್ದ ವಿಕ್ರಂ ಗೌಡ ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರಿಗೆ ಮೃತದೇಹವನ್ನು ತೋರಿಸಿ ಪೊಲೀಸರ ಸರ್ಪಗಾವಲಿನ ನಡುವೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾ ಯಿತು. ಮೃತದೇಹವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು.

ಮನೆಯಲ್ಲಿ ಅಣ್ಣ ಮಾಡಿದ ಜಾಗವಿದೆ. ನಾವು ಮೂವರು ಹುಟ್ಟಿ ಬೆಳೆದ ಮನೆ ಅದು. ನಾವೆಲ್ಲರೂ ಇರುವಾಗ ಅನಾಥ ಶವವಾಗಿ ಯಾಕೆ ಸುಟ್ಟು ಹಾಕಬೇಕು? ಯೌವ್ವನದಲ್ಲಿ ಹೇಗೋ ನಮ್ಮ ಜತೆಗೆ ಇರಲಿಲ್ಲ. ಕೊನೆ ಗಳಿಗೆಯಲ್ಲಿ ಮೋಕ್ಷ ನೀಡಬೇಕಾಗಿದೆ. ಪೊಲೀಸರು ನಮ್ಮನ್ನು ಕರೆದಿದ್ದು, ಅದರಂತೆ ಮನೆ ಪರಿಸರದಲ್ಲೇ ಅಂತ್ಯಸಂಸ್ಕಾರ ಪ್ರಕ್ರಿಯೆ ನಡೆಸಲಿದ್ದೇವೆ. – ಸುಗುಣಾ, ವಿಕ್ರಂ ಗೌಡ ಸಹೋದರಿ

ಟಾಪ್ ನ್ಯೂಸ್

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

UP-Puttige

Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.