NEET Online: ಎನ್‌ಟಿಎಗೆ ವಿಶ್ರಾಂತ ಕುಲಪತಿಗಳ ಮನವಿ
ದ್ವಿತೀಯ ಪಿಯುಸಿಯ ಶೇ. 50 ಅಂಕ ಪರಿಗಣನೆಗೆ ಆಗ್ರಹ
Team Udayavani, Jul 15, 2024, 12:39 AM IST
ಬೆಂಗಳೂರು: ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ನಿಟ್ಟಿನಲ್ಲಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯನ್ನು ಆಫ್ಲೈನ್ ಬದಲು ಆನ್‌ಲೈನ್‌ನಲ್ಲಿ ನಡೆಸಬೇಕು. ನೀಟ್ ಫಲಿತಾಂಶ ಅಥವಾ ರ್‍ಯಾಂಕಿಂಗ್ ನೀಡುವಾಗ ದ್ವಿತೀಯ ಪಿಯುಸಿಯ ಶೇ. 50 ಅಂಕಗಳನ್ನು ಪರಿಗಣಿಸಬೇಕು ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಸಲಹೆ ನೀಡಿದೆ.
ಈ ಸಂಬಂಧ ವೇದಿಕೆಯ ಅಧ್ಯಕ್ಷ ಡಾ. ಎಸ್. ಚಂದ್ರಶೇಖರ ಶೆಟ್ಟಿ, ನೀಟ್ ಪರೀಕ್ಷೆ ನಡೆಸುವ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯ ಸುಧಾರಣ ಸಮಿತಿ ಅಧ್ಯಕ್ಷ ಡಾ. ಕೆ. ರಾಧಾಕೃಷ್ಣ ಅವರಿಗೆ ಪತ್ರ ಬರೆದಿದ್ದಾರೆ.
ಸರಕಾರವು ಕೋಚಿಂಗ್ ಉದ್ದಿಮೆ ಮತ್ತು ಕೆಲವು ಖಾಸಗಿ ಸಂಸ್ಥೆಗಳ ಲಾಬಿಯನ್ನು ನಿಯಂತ್ರಿಸಿ ಉನ್ನತ ಶಿಕ್ಷಣದ ವಿಶ್ವಾಸಾರ್ಹತೆ ಮತ್ತು ಪಾವಿತ್ರ್ಯವನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಪರೀಕ್ಷೆಯ ಮೂಲ ಉದ್ದೇಶ ಈಡೇರಿತ್ತಿಲ್ಲ. ಗ್ರಾಮೀಣ ವಿದ್ಯಾರ್ಥಿಗಳು ಮೆಡಿಕಲ್ ಕಾಲೇಜ್ ಪ್ರವೇಶದಿಂದ ವಂಚಿತಗೊಳ್ಳುತ್ತಿದ್ದಾರೆ.
ಇದು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಲಾಭ ತರುತ್ತಿರುವುದರ ಜತೆಗೆ ವೈದ್ಯಕೀಯ ಶಿಕ್ಷಣವನ್ನು ವಾಣಿಜ್ಯೀಕರಣಗೊಳಿಸಿದೆ. ಶೇ. 35 ಅಂಕ ಪಡೆದವರಿಗೂ ಎಂಬಿಬಿಎಸ್‌ಗೆ ಪ್ರವೇಶ ಪಡೆಯುವ ಅವಕಾಶ ಸೃಷ್ಟಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.