NEET-UG Paper Leak: ನೀಟ್ ಮರು ಪರೀಕ್ಷೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್
ಮತ್ತೆ ಪರೀಕ್ಷೆ ನಡೆಸಿದರೆ 20ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ
Team Udayavani, Jul 23, 2024, 6:40 PM IST
ನವದೆಹಲಿ : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET-UG 2024) ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪರೀಕ್ಷೆ ಪ್ರಕ್ರಿಯೆ ರದ್ದುಗೊಳಿಸಿ, ಮರು ಪರೀಕ್ಷೆಗೆ ಆದೇಶಿಸುವಷ್ಟು ಪೂರಕ ಸಾಕ್ಷ್ಯಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬಯಲಾದ ಹಿನ್ನೆಲೆ ಮೇ 5 ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಅಮಾನ್ಯ ಎಂದು ಘೋಷಿಸಿ ಮರು ಪರೀಕ್ಷೆಗೆ ಆದೇಶ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಹೊಸದಾಗಿ ಮತ್ತೆ ಪರೀಕ್ಷೆ ನಡೆಸುವುದು 20ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಕ್ರಮ ದೇಶವ್ಯಾಪಿ ನಡೆದಿಲ್ಲ ಎಂದರು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಪ್ರಕಾರ ಮರು ಪರೀಕ್ಷೆಯನ್ನು ನಡೆಸುವ ಆದೇಶವು 23.33 ಲಕ್ಷ ಮಹತ್ವಾಕಾಂಕ್ಷಿ ವೈದ್ಯಕೀಯ ವೃತ್ತಿಪರರ ಮೇಲೆ ದೊಡ್ಡ ಪರಿಣಾಮ ಉಂಟು ಮಾಡುತ್ತದೆ. ಸದ್ಯದ ಹಂತದಲ್ಲಿ ಇಡೀ ವ್ಯವಸ್ಥೆ ಹಾಳು ಮಾಡಲಾಗಿದೆ ಅಥವಾ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆ ತಂದಿದೆ ಎಂಬ ತೀರ್ಮಾನಕ್ಕೆ ಬರುವುದು ಕಷ್ಟ” ಎಂದು ಅಭಿಪ್ರಾಯಪಟ್ಟಿದೆ.
ಇನ್ನು ಮೂರು ದಿನಗಳ ಹಿಂದೆಯಷ್ಟೇ ನೀಟ್ ಪರೀಕ್ಷೆಗಳ ಫಲಿತಾಂಶಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ, ನಗರ ಮತ್ತು ಕೇಂದ್ರವಾರು ಪ್ರಕಟವಾಗಿತ್ತು. ನೀಟ್ ಯುಜಿ 2024 ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್ ಸೂಚನೆ ನೀಡಿತ್ತು.
ಏನಿದು ಪ್ರಕರಣ?
ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದರು. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್ ಮೈಂಡ್ ಅಮಿತ್ ಆನಂದ್ ಸೇರಿ ಹಲವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
MUST WATCH
ಹೊಸ ಸೇರ್ಪಡೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Mother: ತಾಯಿಯ ಮಡಿಲು ನೆಮ್ಮದಿಯ ನೆರಳು
Mannagudda: ಗುಜರಿ ಕಾರುಗಳ ಪಾರ್ಕಿಂಗ್; ಸಾರ್ವಜನಿಕರಿಗೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.