Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Team Udayavani, Dec 27, 2024, 7:20 AM IST
ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣ ಸಂಧಾನ ಮಾಡಿಸಲು ನಾನು ಸಿದ್ಧ. ಇಬ್ಬರಿಗೂ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದೇವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಇಬ್ಬರೂ ನನ್ನ ಮಾತಿಗೆ ಗೌರವ ಕೊಟ್ಟರೆ ಪ್ರಕರಣ ಇಲ್ಲಿಗೇ ಮುಗಿಸುತ್ತೇನೆ. ಈಗಾಗಲೇ ಈ ಬಗ್ಗೆ ಹೇಳಿದ್ದೇನೆ. ಶುಕ್ರವಾರ ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಿಐಡಿ ತನಿಖೆ ಆದೇಶ ವಿಚಾರವಾಗಿ ಬೆಳಗಾವಿ ಪೊಲೀಸ್ ಆಯುಕ್ತರು ನನಗೆ ಪತ್ರ ಬರೆದಿದ್ದಾರೆ. ಅದನ್ನು ನಮ್ಮ ಕಾರ್ಯದರ್ಶಿಗೆ ಕಳುಹಿಸಿದ್ದೇನೆ. ಯಾವ ರೀತಿಯ ಪಂಚನಾಮೆ ಮಾಡುತ್ತಾರೆ ಎನ್ನುವುದನ್ನು ಮೊದಲು ತಿಳಿಸಲಿ. ಅನಂತರ ನಾವು ನಿರ್ಧಾರ ಮಾಡುತ್ತೇವೆ.
ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ವಿಶೇಷ ಸಂದರ್ಭಗಳಲ್ಲಿ ಪೊಲೀಸರಿಗೆ ಸಹಕರಿಸಬೇಕೆಂದಿದೆ. ಆದರೆ ಅವರಿಗೆ ನನ್ನನ್ನು ಪ್ರಶ್ನೆ ಮಾಡಲು ಬರುವುದಿಲ್ಲ. ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕಾನೂನು ಕಾರ್ಯದರ್ಶಿ, ನಮ್ಮ ಕಾರ್ಯದರ್ಶಿ ಜತೆ ಚರ್ಚಿಸಿದ್ದೇನೆ ಎಂದರು.
ಕೆಮರಾದಲ್ಲಿ ಏನೂ ದಾಖಲಾಗಿಲ್ಲ
ಸಿ.ಟಿ. ರವಿ ಅವರು ಲಕ್ಷ್ಮೀ ಹೆಬ್ಬಾಳಕರ್ಗೆ ನಿಂದನೆ ಮಾಡಿದ್ದರ ಬಗ್ಗೆ ಪರಿಷತ್ನ ಕೆಮರಾದಲ್ಲಿ ಏನೂ ಸಿಕ್ಕಿಲ್ಲ. ಖಾಸಗಿಯವರು ಕೆಲವೆಡೆ ತೋರಿಸಿದ್ದಾರೆ. ಹೊರಗಿನವರ ಕೆಮರಾದಲ್ಲಿ ಬಂದ ಆ ವೀಡಿಯೋಗಳನ್ನು ನಮಗೆ ಕೊಟ್ಟರೆ ಎಫ್ಎಸ್ಎಲ್ಗೆ ಕಳುಹಿಸುತ್ತೇವೆ. ಅದರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೊದಲ ಬಾರಿಗೆ ಈ ರೀತಿ ಘಟನೆ ನಡೆದಿದೆ. ಇದೊಂದು ವಿಚಿತ್ರ ಘಟನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.