Nepal: ಹೊಸ ಪ್ರಧಾನಿಯಾಗಿ ಓಲಿ ಜು.15ರಂದು ಪ್ರಮಾಣ ಸ್ವೀಕಾರ
Team Udayavani, Jul 13, 2024, 8:09 PM IST
ಕಠ್ಮಂಡು: ನೇಪಾಳದ ಪ್ರಚಂಡ ನೇತೃತ್ವದ ಸರ್ಕಾರ ಪತನಗೊಂಡ ಬೆನ್ನಲ್ಲೇ ಸಿಪಿಎನ್-ಯುಎಂಎಲ್ ನಾಯಕ ಕೆ.ಪಿ.ಶರ್ಮಾ ಓಲಿ ಅವರು ಸರ್ಕಾರ ರಚನೆ ಪ್ರಕ್ರಿಯೆ ಆರಂಭಿಸಿದ್ದು, ಸೋಮವಾರವೇ (ಜು.15) ಅವರು ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕ ರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಓಲಿ ಅವರು ಮಿತ್ರಪಕ್ಷ ನೇಪಾಳಿ ಕಾಂಗ್ರೆಸ್‌ನೊಂದಿಗೆ ಸೇರಿ ಸರ್ಕಾರ ರಚಿಸಲಿದ್ದು, ಶನಿವಾರ ಹೊಸ ಸಚಿವರ ಪಟ್ಟಿಯನ್ನು ತಯಾರಿಸಿದ್ದಾರೆ. ಭಾನುವಾರ ಮಧ್ಯಾಹ್ನ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರು ಎನ್‌ಸಿ-ಯುಎಂಎಲ್ ಮೈತ್ರಿಕೂಟದ ಪ್ರಧಾನಿಯಾಗಿ ಓಲಿ ಅವರನ್ನು ನೇಮಕ ಮಾಡುವ ನಿರೀಕ್ಷೆಯಿದೆ. ಸೋಮವಾರ ಬೆಳಗ್ಗೆ ಓಲಿ ಮತ್ತು ಸಚಿವ ಸಂಪುಟದ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಶುಕ್ರವಾರವಷ್ಟೇ ಸಂಸತ್‌ನಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಕಾರಣ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ನೇತೃತ್ವದ ಸರ್ಕಾರ ಪತನಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Missile Strike: ಉಕ್ರೇನ್ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.