ವಸತಿ ಯೋಜನೆ ಅವ್ಯವಹಾರ ತಡೆಗೆ ಹೊಸ ಕ್ರಮ: ಸೋಮಣ್ಣ
Team Udayavani, Jan 8, 2020, 11:55 PM IST
ಮಂಗಳೂರು: ವಸತಿ ಯೋಜನೆಗಳಲ್ಲಿ ಅವ್ಯಹಾರ ಆಗದಂತೆ ತಡೆಯುವ ಸಲುವಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಒಪ್ಪಿಗೆ ನೀಡಿದ ಮನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಪಂ ಕಾರ್ಯನಿರ್ವಹಣಾ ಧಿಕಾರಿಗಳು, ಪಿಡಿಒ ಗಳು ಹಾಗೂ ಸ್ಥಳೀಯ ಶಾಸಕರು ಸೇರಿ ಹಂಚಿಕೆಯಾದ ಮನೆಗಳನ್ನು ಪರಿಶೀಲಿಸಿ ಅವರಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಜಿಪಂ ಸಿಇಒಗೆ ಕಳು ಹಿಸಲು ನಿರ್ದೇಶಿಸಲಾಗಿದೆ. ಸಿಇಒ ಒಪ್ಪಿಗೆ ದೊರೆತ ಮನೆಗಳಿಗೆ ಅನುದಾನ ನೀಡಲಾಗುವುದು. ಮುಂದಿನ 15 ದಿನಗಳೊಳಗೆ ಈ ಪ್ರಕ್ರಿಯೆ ನಡೆಯಬೇಕು ಎಂದು ಸೂಚನೆ ನೀಡಿರುವುದಾಗಿ ಹೇಳಿದರು.
ವಸತಿ ಯೋಜನೆಗೆ ಆ್ಯಪ್: ಮನೆ ಹಂಚಿಕೆಯಾದ ಪ್ರದೇಶ, ಅವುಗಳ ನಿರ್ಮಾಣ ಹಂತ ಸೇರಿದಂತೆ ಪ್ರತಿಯೊಂದನ್ನು ತಿಳಿಯುವ ನಿಟ್ಟಿನಲ್ಲಿ ವಸತಿ ಯೋಜನೆಯನ್ನು ಆ್ಯಪ್ ಮೂಲಕ ನಿರ್ವಹಿಸುವ ಉದ್ದೇಶವಿದೆ. ಇದರ ಅನುಷ್ಠಾನದ ಜವಾಬ್ದಾರಿಯನ್ನು ನಗರದಲ್ಲಿ ಜಿಲ್ಲಾಧಿಕಾರಿ, ಗ್ರಾಮಾಂತ ರದಲ್ಲಿ ಜಿಪಂ ಸಿಇಒಗೆ ವಹಿಸಲು ನಿರ್ಧರಿಸಿದ್ದು, ಮಾರ್ಚ್ ವೇಳೆಗೆ ಯೋಜನೆ ರೂಪುಗೊಳ್ಳಲಿದೆ ಎಂದರು.
2.50 ಲಕ್ಷ ರೂ. ಬೇಡಿಕೆ: ಪ್ರಸ್ತುತ ವಿವಿಧ ವಸತಿ ಯೋಜನೆಗಳಿಂದ ಪ್ರತಿ ಮನೆಗೆ ರಾಜ್ಯದ 70 ಸಾವಿರ ರೂ. ಹಾಗೂ ಕೇಂದ್ರದ 50 ಸಾವಿರ ರೂ. ಸೇರಿ ಒಟ್ಟು 1.20 ಲಕ್ಷ ರೂ. ನೀಡಲಾಗುತ್ತಿದೆ. ಈ ಮೊತ್ತ ಸಾಲದು ಎಂದು ಮನಗಂಡು ಪ್ರತಿ ಮನೆಗಳಿಗೆ ಕನಿಷ್ಠ 2.5 ಲಕ್ಷ ರೂ. ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗುವುದು. ಪ್ರಸ್ತುತ 4 ಕಂತುಗಳಲ್ಲಿ ಬಿಡುಗಡೆಯಾಗುವ ಹಣವನ್ನು 2 ಕಂತುಗಳಿಗೆ ಇಳಿಸುವ ಉದ್ದೇಶವಿದೆ ಎಂದು ಸಚಿವ ಸೋಮಣ್ಣ ತಿಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.