ಕರಾವಳಿಯಲ್ಲಿ ಹೊಸ ಉದ್ದಿಮೆ : 1,050 ಎಕರೆ ಭೂಸ್ವಾಧೀನ: ಸಚಿವ ಜಗದೀಶ್ ಶೆಟ್ಟರ್
Team Udayavani, Jul 6, 2021, 7:30 AM IST
ಕಾಪು/ ಪಡುಬಿದ್ರಿ: ಕರಾವಳಿಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬೇಡಿಕೆ ಹೆಚ್ಚುತ್ತಿದ್ದು, ಕೈಗಾರಿಕಾ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆಯಿದೆ. ಉಲ್ಲಾಸ್ ಕಾಮತ್ ನೇತೃತ್ವದಲ್ಲಿ ರಚಿಸಲಾಗಿರುವ ಟಾಸ್ಕ್ಫೋರ್ಸ್‌ನ ವರದಿ ತರಿಸಿಕೊಂಡು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪೂರಕ ಚಿಂತನೆ ನಡೆಸಲಾಗುತ್ತದೆ. ಉಡುಪಿ ಜಿಲ್ಲೆಯ ಮೂಳೂರಿನಲ್ಲಿ 250 ಎಕರೆ ಮತ್ತು ದ.ಕ.ಜಿಲ್ಲೆಯ ಬಳ್ಕುಂಜೆಯಲ್ಲಿ 800 ಎಕರೆ ಸೇರಿದಂತೆ ವಿವಿಧೆಡೆ 1,050 ಎಕರೆ ಜಮೀನು ಸ್ವಾಧೀನಪಡಿಸಿ ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸೋಮವಾರ ಬೆಳಪು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ಉಡುಪಿ ಜಿಲ್ಲೆಯ ಮೊದಲ ಆಮ್ಲಜನಕ ಉತ್ಪಾದನ ಘಟಕ ಮತ್ತು ಕೈಗಾರಿಕಾ ಪ್ರದೇಶದ ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಇದಕ್ಕೆ ಮುನ್ನ ನಂದಿಕೂರಿನ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳು, ಗ್ರಾ.ಪಂ. ಅಧ್ಯಕ್ಷ ರೊಂದಿಗೆ ಸಂವಹನ ನಡೆಸಿದರು.
ಬೆಂಗಳೂರಿನಾಚೆ ಕೈಗಾರಿಕೆಗಳನ್ನು ಬೆಳೆಸಲು ಸರಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ.
ಗ್ರಾ.ಪಂ. ತೆರಿಗೆ ಬಾಕಿ ಶೀಘ್ರ ಪರಿಹಾರ
ಪಡುಬಿದ್ರಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಸ್ಥಳೀಯ ಗ್ರಾ.ಪಂ.ಗಳಿಗೆ ಆಯಾ ಕೈಗಾರಿಕಾ ಪ್ರದೇಶಗಳಲ್ಲಿರುವ ಘಟಕಗಳಿಂದ ತೆರಿಗೆ ಬಾಕಿ ಇರುವ ಸಮಸ್ಯೆ ರಾಜ್ಯವ್ಯಾಪಿಯಾಗಿ ಇದೆ. ಈ ಬಗ್ಗೆ ಏಕರೂಪದ ಪರಿಹಾರ ರೂಪಿಸಲು ಶೀಘ್ರದಲ್ಲೇ ಕೈಗಾರಿಕಾ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮಟ್ಟದಲ್ಲಿ ಜಂಟಿ ಸಭೆ ನಡೆಸಿ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಸ್ಥಳೀಯರಿಗೆ ಉದ್ಯೋಗ: ಸರಕಾರ ಬದ್ಧ
ಬೃಹತ್ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸಿ ಕೊಡಲು ಸರಕಾರ ಬದ್ಧವಾಗಿದೆ. ಉದ್ದಿಮೆಗೆ ಪರವಾನಿಗೆ ನೀಡುವಾಗ ಸ್ತರ -1, ಸ್ತರ-2 ಉದ್ಯೋಗಗಳಲ್ಲಿ ಶೇ. 80ರಷ್ಟು ಮತ್ತು ಸ್ತರ -3, ಸ್ತರ-4 ಉದ್ಯೋಗಗಳಲ್ಲಿ ಶೇ. 100ರಷ್ಟು ಸ್ಥಳೀಯರಿಗೆ ನೀಡಲು ಒಪ್ಪಂದದಲ್ಲಿಯೇ ಸೂಚನೆ ನೀಡಲಾಗುತ್ತಿದೆ. ಇದನ್ನು ಉಲ್ಲಂ ಸುವ ಉದ್ದಿಮೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.