ಕೃಷಿ ಕ್ಷೇತ್ರದಲ್ಲಿ ಪರಿಸರಸ್ನೇಹಿ ಅವಿಷ್ಕಾರಗಳು ನಡೆಯುತ್ತಿರಬೇಕು : ಸಚಿವ ಸದಾನಂದ ಗೌಡ


Team Udayavani, Oct 17, 2020, 9:07 PM IST

ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು: ಸಚಿವ ಸದಾನಂದ ಗೌಡ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು. ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಎಗ್ರೋ ಹಾಗೂ ಫೂಡ್‌ ಟೆಕ್‌ 2020” ವರ್ಚವಲ್‌ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಸಚಿವ ಸದಾನಂದ ಗೌಡ ಅವರು ದೀರ್ಘಕಾಲದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂದರು.

ರೈತರಿಗೆ ಬೇಸಾಯ ಮಾಡುವಲ್ಲಿ ಬೇಕಾದ ಬೀಜ, ಗೊಬ್ಬರ ನೀರು ಮುಂತಾದ ಮೂಲಸಾಮಗ್ರಿಗಳು ಹಾಗೂ ಬೇಸಾಯವನ್ನು ಸುಲಭಗೊಳಿಸುವ ತಂತ್ರಜ್ಞಾನನ್ನು ಒದಗಿಸುವಲ್ಲಿ ಸರ್ಕಾರದೊಂದಿಗೆ ಖಾಸಗಿ ಕಂಪನಿಗಳು ಸಕ್ರೀಯವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ. ಕೃಷಿಗೆ ಪೂರಕ ವಾತಾವರಣ ಮೂಡಿಸುವ ಹೊಣೆಗಾರಿಕೆ ಸರ್ಕಾರ ಹಾಗೂ ಖಾಸಗಿ ವಲಯಗಳೆರಡರ ಮೇಲೂ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ನೆರೆ ಹಾವಳಿಯಿಂದ ಕರ್ನಾಟಕ ನಲುಗಿ ಹೋದರೂ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ: ಸಿದ್ದು

ಎಲ್ಲ ಅನಾನುಕೂಲ ವಾತಾವರಣಗಳ ಮಧ್ಯೆಯೂ ಕೃಷಿ ವಲಯಯವು ಉತ್ತಮ ಪ್ರಗತಿ ಸಾಧಿಸುತ್ತಿದೆ. ಈ ಬಾರಿ, ಸಕಾಲದಲ್ಲಿ ಬಂದ ಉತ್ತಮ ಮಳೆಯಿಂದ ಬಿತ್ತನೆ ಪ್ರದೇಶ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆಯಲ್ಲೂ ಹೆಚ್ಚಾಗಿದೆ. ಆದರೆ ನಮ್ಮ ಇಲಾಖೆಯು ಉತ್ಪಾದನೆ, ಸಾಗಣೆಗೆ ಸಂಬಂಧಿಸಿದಂತೆ ಸಕಾಲದಲ್ಲಿ ಕೈಗೊಂಡ ಕ್ರಮಗಳಿಂದಾಗಿ ದೇಶಾದ್ಯಂತ ಅತ್ಯಂತ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ನಡೆಯಿತು ಎಂದು ಅವರು ತಿಳಿಸಿದರು.

ಪ್ರಧಾನಿಯವರ ಆಶಯದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾಲಂಬನೆ ಗಳಿಸುವಲ್ಲಿ ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೊಟಾಷ್‌ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ ಶೇಕಡಾ ೮೦ರಷ್ಟು ಯೂರಿಯಾ ಸ್ವದೇಶದಲ್ಲಿಯೇ ಉತ್ಪಾದನೆ ಮಾಡುತ್ತಿದ್ದೇವೆ. ಪೊಸ್ಫೆಟಿಕ್‌ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ. ರಸಗೊಬ್ಬರಕ್ಕೆ ಅಗತ್ಯವಾದ ಕಚ್ಚಾವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸಲಾಗುತ್ತಿದೆ. ವಿದೇಶೀ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವ ಸದಾನಂದ ಗೌಡ ವಿವರಿಸಿದರು.

ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲು

ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ರೈತರಿಗೆ ದೊರೆಯುವ ರಿಯಾಯತಿ ಸೋರಿಕೆಯಾಗದಂತೆ ತಡೆಯಲು ನೇರ ನೆರವು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳವಡಿಸಿಕೊಳ್ಳಲಾಗಿದೆ. ಮೇಲಿಂದಮೇಲೆ ಈ ತಂತ್ರಾಂಶ/ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು “ಗವರ್ನನ್ಸ್‌ ಡಿಜಿಟಲ್‌ ಟ್ರಾನ್ಸಫೊರ್ಮೇಶನ್‌ ಅವಾರ್ಡ್‌” ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.

ಸಿಐಐ ಟೆಕ್‌ ಮೇಳದ ಅಧ್ಯಕ್ಷ ಶ್ರೀ ಅಜಯ್‌ ಎಸ್‌ ಶ್ರೀರಾಮ್‌, ಸಮ್ಮೇಳನದ ಸಂಚಾಲಕ ಡಾ, ಅರವಿಂದ್ ಕಪೂರ್‌, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್‌ ಮುಂತಾದವರು ಪಾಲ್ಗೊಂಡರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.