New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
ಶೇ. 5ರ ಪ್ರಮಾಣದಲ್ಲಿ ಪ್ರೋಟಿನ್ ಅಂಶ ಮಿಶ್ರಣ, 400 ಗ್ರಾಂಗೆ 40 ರೂ. ದರ ನಿಗದಿ
Team Udayavani, Dec 26, 2024, 7:10 AM IST
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಈಗಾಗಲೇ ಖ್ಯಾತಿ ಪಡೆದಿರುವ ರಾಜ್ಯದ ನಂದಿನಿ ಬ್ರಾಂಡ್ ಇದೇ ಮೊದಲ ಬಾರಿಗೆ ಗ್ರಾಹಕರಿಗೆ ಅನುಕೂಲವಾಗುವಂತೆ ಪ್ರೋಟಿನ್ ಆಧಾರಿತ ನಂದಿನಿ ಇಡ್ಲಿ/ದೋಸೆ ಹಿಟ್ಟನ್ನು ಪರಿಚಯಿಸಿದ್ದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಗ್ರಾಹಕರ ಅಭಿರುಚಿಗೆ ತಕ್ಕಂತೆ ಕಾಲ ಕಾಲಕ್ಕೆ ಅನುಗುಣವಾಗಿ ಕೆಎಂಎಫ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಹಾಗೂ ಇನ್ನಿತರೆ ಅಗತ್ಯ ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಅದರ ಭಾಗವಾಗಿ ಈಗ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಪರಿಚಯಿಸಲಾಗಿದೆ. ನಗರ ಪ್ರದೇಶಗಳಲ್ಲಿ ಕೆಲಸದ ಒತ್ತಡದಿಂದಾಗಿ ಬಹುತೇಕರು ನಿತ್ಯ ಆಹಾರವನ್ನು ಮನೆಯಲ್ಲೇ ತಯಾರಿಸಲು ಸಿದ್ಧ ಆಹಾರಗಳ ಮೊರೆ ಹೋಗುತ್ತಿದ್ದಾರೆ. ಇದನ್ನು ಗಮನದಲ್ಲಿರಿಸಿಕೊಂಡು ಕೆಎಂಎಫ್ ಅರೋಗ್ಯಕರ ಇಡ್ಲಿ, ದೋಸೆ ಹಿಟ್ಟನ್ನು ಗ್ರಾಹಕರಿಗೆ ಒದಗಿಸಲು ತೀರ್ಮಾನಿಸಿದೆ.
ಪ್ರಪ್ರಥಮ ಬಾರಿಗೆ ಇಡ್ಲಿ/ದೋಸೆ ಹಿಟ್ಟಿನಲ್ಲಿ ಪ್ರೋಟಿನ್ ಅಂಶವನ್ನು ಶೇ. 5ರ ಪ್ರಮಾಣದಲ್ಲಿ ಮಿಶ್ರಣಗೊಳಿಸಿ ವಿನೂತನ ಶೈಲಿಯ ವೇ ಪ್ರೋಟಿನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟನ್ನು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಿ ಮಾರಾಟ ಮಾಡಲು ಉದ್ದೇಶಿಸಲಾಗಿದೆ.
ಬೆಂಗಳೂರಲ್ಲಿ ಪ್ರಾಯೋಗಿಕ ಬಿಡುಗಡೆ
ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ನಂದಿನಿ ಬ್ರಾಂಡ್‌ನ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಎರಡು ವಿವಿಧ ಪ್ಯಾಕ್‌ಗಳಲ್ಲಿ ಅಂದರೆ 400 ಗ್ರಾಂಗೆ 40 ರೂ. ಹಾಗೂ 900 ಗ್ರಾಂಗೆ 80 ರೂ. ಗರಿಷ್ಠ ಮಾರಾಟ ದರ ನಿಗದಿಪಡಿಸಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬಳಿಕ ಮಾರುಕಟ್ಟೆಯಲ್ಲಿ ಗ್ರಾಹಕರ ಪ್ರತಿಕ್ರಿಯೆ ಅವಲೋಕಿಸಿ, ಉಳಿದ ನಗರಗಳಿಗೂ ವಿಸ್ತರಿಸುವ ಯೋಜನೆ ಹೊಂದಿದೆ.
ಉತ್ಪನ್ನಗಳ ಬಿಡುಗಡೆ ವೇಳೆ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪಶುಸಂಗೋಪನೆ ಸಚಿವ ವೆಂಕಟೇಶ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.