ಅತೃಪ್ತಿಯ ವಿಸ್ತರಣೆ
ಸಮ್ಮಿಶ್ರ ಸಂಪುಟಕ್ಕೆ ಆರ್.ಶಂಕರ್, ಎಚ್.ನಾಗೇಶ್ ಸೇರ್ಪಡೆ
Team Udayavani, Jun 15, 2019, 6:00 AM IST
ಎಚ್.ನಾಗೇಶ್, ಆರ್.ಶಂಕರ್
ಬೆಂಗಳೂರು: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನ ಕಸರತ್ತಿನ ಭಾಗವಾಗಿ ನಿರೀಕ್ಷೆಯಂತೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್.ನಾಗೇಶ್ ಸಂಪುಟ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವಾಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ. ಅತೃಪ್ತರಿಗೆ ನಿಗಮ ಮಂಡಳಿ ಸ್ಥಾನಮಾನ ನೀಡಿ ಸಮಾಧಾನಪಡಿಸುವ ಪ್ರಯತ್ನವೂ ನಡೆದಿದೆ.
ರಾಜಭವನದ ಗಾಜಿನ ಮನೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ರಾಣೆಬೆನ್ನೂರು ಶಾಸಕ ಆರ್.ಶಂಕರ್ ಹಾಗೂ ಮುಳಬಾಗಿಲು ಶಾಸಕ ಎಚ್. ನಾಗೇಶ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಜೆಡಿಎಸ್‌ನಿಂದ ಅಲ್ಪಸಂಖ್ಯಾತರ ಕೋಟಾದಡಿ ಬಿ.ಎಂ.ಫಾರೂಕ್ ಸಚಿವರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ, ಸಂಪುಟ ವಿಸ್ತರಣೆಗೆ ಮುನ್ನ ಸಿಎಂ ಕುಮಾರಸ್ವಾಮಿಯವರು ಫಾರೂಕ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತನಾಡಿ ಮುಂದೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.
ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾದರೆ, ಆಪರೇಷನ್ ಕಮಲ ಕಾರ್ಯಾಚರಣೆ ಮತ್ತೆ ಆರಂಭವಾದರೆ ಎಂಬ ತುರ್ತು ಸಂದರ್ಭಕ್ಕೆ ಇರಲಿ ಎಂದು ಜೆಡಿಎಸ್ ಒಂದು ಸ್ಥಾನ ಹಾಗೇ ಉಳಿಸಿಕೊಂಡಿದೆ. ಇದರಿಂದ ಅತೃಪ್ತರಿಗೆ ‘ನಿಮಗಾಗಿಯೇ ಆ ಸ್ಥಾನ’ ಎಂದು ಭರವಸೆ ನೀಡಿ ವಿಶ್ವಾಸಗಳಿಸಬಹುದು ಎಂಬ ಉದ್ದೇಶ ಎಂದು ಹೇಳಲಾಗಿದೆ.
ಇಬ್ಬರು ಪಕ್ಷೇತರರ ಸೇರ್ಪಡೆಯಿಂದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದ ಒಟ್ಟು 33 ಸ್ಥಾನಗಳಲ್ಲಿ 32 ಭರ್ತಿಯಾದಂತಾಗಿದ್ದು, ಜೆಡಿಎಸ್‌ನ ಇನ್ನೊಂದು ಕೋಟಾ ಮಾತ್ರ ಉಳಿದಿದೆ.
ಪ್ರಮಾಣದ ನಂತರ ಶಂಕರ್, ಸಿದ್ದರಾಮಯ್ಯ ಕಾಲಿಗೆ, ನಾಗೇಶ್, ಸಿಎಂ ಕಾಲಿಗೆ ನಮಸ್ಕರಿಸಿದರು.
ಅತೃಪ್ತರ ಗೈರು: ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಬಂಡೆಪ್ಪ ಕಾಶೆಂಪೂರ್, ಕೃಷ್ಣ ಬೈರೇಗೌಡ, ಮಾಜಿ ಸಚಿವ ಎಚ್.ಆಂಜನೇಯ, ಸಂಸದ ಡಿ.ಕೆ.ಸುರೇಶ್, ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಕೆಪಿಸಿಸಿ ಆಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್‌ನ ಎಚ್.ವಿಶ್ವನಾಥ್ , ಇತ್ತೀಚೆಗೆ ಕಾಂಗ್ರೆಸ್ ಭಿನ್ನಮತದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್, ರಾಮಲಿಂಗಾರೆಡ್ಡಿ ಸೇರಿ ಹಲವರು ಗೈರು ಹಾಜರಾಗಿದ್ದರು.
ವಿಸ್ತರಣೆಗೆ ಕಾರಣಗಳೇನು?
•ಸರ್ಕಾರ ಉಳಿಸಿಕೊಳ್ಳಲು ಪಕ್ಷೇತರರಿಗೆ ಅವಕಾಶ, ಉಳಿದವರಿಗಿಲ್ಲ ಎಂದು ಅತೃಪ್ತಿ ಶಮನಗೊಳಿಸುವ ತಂತ್ರ
ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ಸ್ವೀಕರಿಸಿರುವ ಆರ್.ಶಂಕರ್‌ಗೆ ಪೌರಾಡಳಿತ, ಎಚ್.ನಾಗೇಶ್‌ಗೆ ಜವಳಿ ಖಾತೆ ನೀಡುವ ಸಾಧ್ಯತೆಯಿದೆ. ಸಿ.ಎಸ್.ಶಿವಳ್ಳಿ ಅವರ ಬಳಿಯಿದ್ದ ಪೌರಾಡಳಿತ ಶಂಕರ್‌ಗೆ ನೀಡುವುದಾದರೆ, ಎನ್.ಮಹೇಶ್ ಅವರ ಬಳಿಯಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನನಗೆ ಬೇಕು ಎಂದು ನಾಗೇಶ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಅಂತಿಮವಾಗಿ ಸಿಎಂ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್‌ನ ರಾಜ್ಯ ನಾಯಕರ ಈ ನಿರ್ಧಾರದ ಬಗ್ಗೆ ಪಕ್ಷದ ಹಿರಿಯ ಶಾಸಕರಿಂದ ಹಿಡಿದ ಬಹುತೇಕರು ಅಸಮಾಧಾನ ಹೊಂದಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ತಕ್ಷಣವೇ ಯಾರ ವಿರುದ್ಧವೂ ಬಹಿರಂಗವಾಗಿ ಆಕ್ರೋಶ ಹೊರ ಹಾಕದೇ ನಾಯಕರ ಮೇಲಿನ ಸಿಟ್ಟು, ಆಕ್ರೋಶ, ಅಸಹಾಯಕತೆಯನ್ನು ಅದುಮಿಟ್ಟುಕೊಂಡಿದ್ದು, ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.
-ಆರ್.ಶಂಕರ್, ನೂತನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.