ದಕ್ಷಿಣಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ಈ ಹಿಂದಿನ ನಿಯಮಗಳೇ ಮುಂದುವರಿಕೆ : ಹೊಸ ನಿಯಮಗಳಿಲ್ಲ
Team Udayavani, Aug 14, 2021, 6:11 PM IST
ಬೆಂಗಳೂರು : ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣ ಸಂಬಂಧ ಕೋವಿಡ್ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಹೇಳಿದ್ದಾರೆ.
ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು ಅದೇ ನಿಯಮಗಳನ್ನು ಮುಂದಿನ ದಿನಗಳಿಗೂ ಮುಂದುವರೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು.
ಇದನ್ನೂ ಓದಿ :ಪೊಲೀಸ್ ಮೇಲೆಯೇ ಕಾರು ಚಲಾಯಿಸಿದ ಕಿರಾತಕ : ಭಯಾನಕ ವಿಡಿಯೋ ಇಲ್ಲಿದೆ ನೋಡಿ
ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ.
ಶಾಲೆ ಆರಂಭಿಸುವ ಬಗ್ಗೆ ಚರ್ಚೆಯನ್ನು ನಡೆಸಿದ್ದು ಪಾಸಿಟಿವಿಟಿ ದರ ಶೇ. 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು, ಆದರೆ ಪೋಷಕರು, ಶಿಕ್ಷಕರು, ಸಿಬ್ಬಂದಿಗಳು ಲಸಿಕೆ ಪಡೆದುಕೊಂಡಿರಬೇಕು, ಶಾಲೆ ಆರಂಭವಾದ ಬಳಿಕ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಾದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಬ್ಬದ ದಿನದಲ್ಲಿ ಹೆಚ್ಚು ಜನ ಒಂದೇ ಕಡೆ ಸೇರದಂತೆ ಎಚ್ಚರವಹಿಸಬೇಕು ಅಲ್ಲದೆ ಹಬ್ಬಗಳ ಆಚರಣೆ ಈ ಹಿಂದಿನ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎಂದರು, ರಾಜ್ಯದಲ್ಲಿ ಕೋವಿಡ್ ಪರೀಕ್ಷಾ ಸಂಖ್ಯೆಯನ್ನು ಹೆಚ್ಚು ಹೆಚ್ಚು ಮಾಡಿಸಬೇಕು ಜೊತೆಗೆ ಲಸಿಕೆ ವಿತರಣೆಗೂ ವೇಗ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.