24 ತಾಸುಗಳಲ್ಲಿ ಒಂಬತ್ತು ಖಾತೆ ಅದಲು ಬದಲು
Team Udayavani, Feb 12, 2020, 6:45 AM IST
ಕೃಷಿ ಪಡೆದ ಬಿ.ಸಿ. ಪಾಟೀಲ್, ಗೋಪಾಲಯ್ಯಗೆ ಆಹಾರ
ಆನಂದ್ ಸಿಂಗ್ ಅವರಿಗೆ ಅರಣ್ಯ, ಜೀವಿಶಾಸ್ತ್ರ -ಪರಿಸರ ಖಾತೆ
ಬೆಂಗಳೂರು: ಖಾತೆ ಹಂಚಿಕೆಯಾದ 24 ತಾಸುಗಳಲ್ಲೇ ಒಂಬತ್ತು ಸಚಿವರ ಖಾತೆಗಳು ಅದಲು
ಬದಲಾಗಿವೆ! ಖಾತೆ ಹಂಚಿಕೆಯ ಅನಂತರ ಬಹಿರಂಗವಾಗಿ ಬೇಸರ ವ್ಯಕ್ತಪಡಿಸದ ಸಚಿವರು ರಾತೋ ರಾತ್ರಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಭಾವಿ ಖಾತೆಗಳಿಗೆ ಪಟ್ಟುಹಿಡಿದುದೇ ದಿಢೀರ್ ಬದಲಾವಣೆಗೆ ಕಾರಣ.
ಕೃಷಿ ಖಾತೆ ಪಡೆಯುವಲ್ಲಿ ಬಿ.ಸಿ. ಪಾಟೀಲ್ ಯಶಸ್ವಿಯಾಗಿದ್ದರೆ, ಕೆ. ಗೋಪಾಲಯ್ಯ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆನಂದ್ ಸಿಂಗ್ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಪಡೆದಿದ್ದಾರೆ.
ಕೆಲವು ಸಚಿವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಬೈರತಿ ಬಸವರಾಜು ಅವರಿಗೆ ನಗರಾಭಿವೃದ್ಧಿ ಖಾತೆ ಜತೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದ ಹೊಣೆಗಾರಿಕೆ ನೀಡಲಾಗಿದೆ. ಶಿವರಾಮ ಹೆಬ್ಟಾರ್ ಅವರಿಗೆ ಕಾರ್ಮಿಕ ಖಾತೆ ಜತೆಗೆ ಸಕ್ಕರೆ ಖಾತೆ ವಹಿಸಲಾಗಿದೆ. ಶ್ರೀಮಂತ ಪಾಟೀಲ್ ಅವರಿಗೆ ಜವುಳಿ ಖಾತೆ ಸೇರಿದಂತೆ ಕೈಮಗ್ಗ, ಅಲ್ಪಸಂಖ್ಯಾಕರ ಕಲ್ಯಾಣ ಖಾತೆ ವಹಿಸಲಾಗಿದೆ. ನೂತನ ಸಚಿವ ಎಸ್.ಟಿ. ಸೋಮಶೇಖರ್ ಸಹಕಾರ ಖಾತೆ ಜತೆಗೆ ಎಪಿಎಂಸಿ ಖಾತೆಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾತೋರಾತ್ರಿ ಒತ್ತಡ- ಬದಲಾವಣೆ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಖಾತೆ ಹಂಚಿಕೆ ಮಾಡಿದ ಬಗ್ಗೆ ಡಾ| ಕೆ. ಸುಧಾಕರ್ ಮಾತ್ರ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಉಳಿದಂತೆ ಯಾರೂ ಬೇಸರವನ್ನು ಬಹಿರಂಗವಾಗಿ ತೋರ್ಪಡಿಸಿರಲಿಲ್ಲ. ಆದರೆ ಸೋಮವಾರ ರಾತ್ರಿ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಪ್ರಭಾವಿ ಖಾತೆಗೆ ಒತ್ತಡ ಹೇರಿದ್ದಾರೆ.
ಬಿ.ಸಿ. ಪಾಟೀಲ್, ಆನಂದ್ ಸಿಂಗ್ ಮತ್ತು ಕೆ. ಗೋಪಾಲಯ್ಯ ಸೋಮವಾರ ರಾತ್ರಿ ಯಡಿಯೂರಪ್ಪ ಅವರ ಡಾಲರ್ ಕಾಲನಿ ನಿವಾಸಕ್ಕೆ ದೌಡಾಯಿಸಿ ಈಗಿರುವ ಖಾತೆಗಿಂತ ಉತ್ತಮ ಖಾತೆ ನೀಡಬೇಕು ಎಂದು ಪಟ್ಟುಹಿಡಿದರು. ಹೀಗಾಗಿ ಯಡಿಯೂರಪ್ಪ ಸಚಿವರ ಮನವಿಗೆ ಮಣಿಯಬೇಕಾಯಿತು. ಸಚಿವ ಶಿವರಾಮ ಹೆಬ್ಟಾರ್ ಮಂಗಳವಾರ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚುವರಿ ಜವಾಬ್ದಾರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ.
ಪ್ರಥಮ ದರ್ಜೆ ಸಚಿವ
ತಮಗೆ ವಹಿಸಿರುವ ಖಾತೆ ಬಗ್ಗೆ ಬಿ.ಸಿ. ಪಾಟೀಲ್ ಟ್ವಿಟರ್‌ನಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸಮರ್ಪಣ ದಿನ ಫೆ. 11, ಅಪ್ರತಿಮ ದೇಶಭಕ್ತ, ವಿದ್ವಾಂಸ, ಸಂಘಟನ ಕಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು, ನನ್ನ ಗೌರವ ನಮನಗಳು ಎಂದು ಸಚಿವ ಬಿ.ಸಿ. ಪಾಟೀಲ್ ಮಂಗಳವಾರ ಬೆಳಗ್ಗೆ 10.45ಕ್ಕೆ ಟ್ವೀಟ್ ಮಾಡಿದ್ದರು.
ಈ ಸಂಬಂಧ ಪೋಸ್ಟ್ ಹಾಕಿರುವ ಬಿ.ಸಿ.ಪಾಟೀಲ್, ತಮ್ಮ ಹೆಸರಿನ ಕೆಳಗೆ ಪ್ರಥಮ ದರ್ಜೆ ಸಚಿವರು ಎಂಬುದಾಗಿ ನಮೂದಿಸಿದ್ದರು. ತಮಗೆ ಹಂಚಿಕೆಯಾಗಿದ್ದ ಅರಣ್ಯ ಖಾತೆ ಹೆಸರು ಉಲ್ಲೇಖೀಸದೆ ಪ್ರಥಮ ದರ್ಜೆ ಸಚಿವ ಎಂಬುದಾಗಿ ಪೋಸ್ಟ್ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಖಾತೆ ಪುನರ್ ಹಂಚಿಕೆ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ್, ಕೃಷಿ ಖಾತೆ ಸಿಕ್ಕಿದ್ದರಿಂದ ರೈತರ ಜತೆಗೆ ಇರುತ್ತೇನೆ. ಈ ಖಾತೆ ಸಿಗದೆ ಇರುತ್ತಿದ್ದರೆ ಪ್ರಾಣಿಗಳ ಜತೆ ಇರುತ್ತಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದರೆ ಇನ್ನು ಕೆಲವು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ. ಆ ಮೂಲಕ ಖಾತೆ ಹಂಚಿಕೆ ಬಗ್ಗೆ ಅಪಸ್ವರ ಮುಂದುವರಿಯದಂತೆ ತಡೆಯುವ ನಿಟ್ಟಿನಲ್ಲಿ ಆರಂಭದಲ್ಲೇ ಕ್ರಮ ಕೈಗೊಂಡಿದ್ದಾರೆ. ಯಡಿಯೂರಪ್ಪ ಅವರ ಶಿಫಾರಸಿನಂತೆ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ.
ಬೇಸರ ವ್ಯಕ್ತಪಡಿಸಿದ್ದವರು ಮೌನ
ಸಚಿವ ಡಾ| ಕೆ. ಸುಧಾಕರ್ ಸೋಮವಾರ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು. ಅನಂತರ ಅವರು ಅಪಸ್ವರ ತೆಗೆದಂತಿಲ್ಲ. ಆದರೆ ಖಾತೆ ಹಂಚಿಕೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸದವರೇ ರಾತೋರಾತ್ರಿ ಸಿಎಂ ಮೇಲೆ ಒತ್ತಡ ಹೇರಿ ಪ್ರಭಾವಿ ಖಾತೆ ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮೂಲ ಬಿಜೆಪಿಗರಲ್ಲಿ ಬೇಸರ
ಮುಖ್ಯಮಂತ್ರಿಗಳು ತಮ್ಮ ಪರಮಾಧಿಕಾರ ಬಳಸಿ ಮಾಡಿರುವ ಖಾತೆ ಹಂಚಿಕೆ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿರುವುದು ಮೂಲ ಬಿಜೆಪಿಗರಲ್ಲಿ ಬೇಸರಕ್ಕೆ ಕಾರಣವಾಗಿದೆ. ಸಚಿವ ಸ್ಥಾನಕ್ಕೆ ಒತ್ತಡ ಹೇರಿ ಬಳಿಕ ಖಾತೆ ಹಂಚಿಕೆಯಾದ 24 ತಾಸುಗಳೊಳಗೆ ಬದಲಾವಣೆ ಮಾಡಿಸಿಕೊಳ್ಳುವುದು ಉತ್ತಮ ಸಂಪ್ರದಾಯವಲ್ಲ. ಇದರಿಂದ ಒತ್ತಡ ತಂತ್ರಗಳಿಗೆ ಮಣೆ ಹಾಕಿದಂತಾಗಲಿದ್ದು, ಆಡಳಿತದ ಮೇಲೆ ಪರಿಣಾಮ ಬೀರುವ ಅಪಾಯವಿದೆ ಎಂಬ ಆತಂಕ ಪಕ್ಷದ ವಲಯದಿಂದ ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.