Nipah virus; ನಿಫಾ ಸೋಂಕಿಗೆ 14 ವರ್ಷದ ಕೇರಳ ಬಾಲಕ ಮೃತ್ಯು
ಆರೋಗ್ಯ ಸಚಿವೆ ವೀಣಾ ಜಾರ್ಜ್ ಘೋಷಣೆ, ಕರ್ನಾಟಕದ ಗಡಿ ಜಿಲ್ಲೆಯಲ್ಲೂ ಹೈ ಅಲರ್ಟ್
Team Udayavani, Jul 21, 2024, 5:19 PM IST
ಮಲಪ್ಪುರಂ : ನಿಫಾ ವೈರಸ್ (Nipah virus) ಸೋಂಕಿಗೆ ಒಳಗಾಗಿದ್ದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಹೃದಯಸ್ತಂಭನ (cardiac arrest) ದಿಂದ ಮೃತಪಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಸಚಿವೆ ವೀಣಾ ಮಾತನಾಡಿ ಬಾಲಕ ಭಾನುವಾರ ಬೆಳಗ್ಗೆ ಮಂಜೇರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಳಗ್ಗೆ 11:30ರ ಸಮಯದಲ್ಲಿ ಕೊನೆಯುಸಿರೆಳೆದಿರುವುದು ಗೊತ್ತಾಗಿದೆ. ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನ ನಿವಾಸಿಯಾದ ಆ ಹುಡುಗನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿತ್ತು.
‘ಆ ಬಾಲಕ ವೆಂಟಿಲೇಟರ್ನಲ್ಲಿದ್ದ. ಭಾನುವಾರ ಬೆಳಗ್ಗೆ ಆತನ ಮೂತ್ರ ವಿಸರ್ಜನೆ ಪ್ರಮಾಣ ಕಡಿಮೆ ಆಗಿತ್ತು. 10:50ರಲ್ಲಿ ತೀವ್ರವಾಗಿ ಹೃದಯ ಸ್ತಂಭನ ಉಂಟಾಯಿತು. ಆ ಬಳಿಕ ಪುನಶ್ಚೇತನಗೊಳಿಸಲು ಮಾಡಿದ ಪ್ರಯತ್ನಗಳು ವಿಫಲವಾದವು. ಬೆಳಗ್ಗೆ 11:30ಕ್ಕೆ ಮೃತಪಟ್ಟ. ಅಂತಾರಾಷ್ಟ್ರೀಯ ನಿಯಮಗಳ ಅನುಸಾರವಾಗಿ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುವುದು,’ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ:
ನಿಫಾ ವೈರಸ್ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿ “ಕೆಲವು ವರ್ಷಗಳ ಹಿಂದೆ ಕೇರಳಕ್ಕೆ ನಿಫಾ ವೈರಸ್ ಬಾಧಿಸಿತ್ತು, ಅದಕ್ಕೆ ಕೇರಳ ರಾಜ್ಯವು ಆಗ ತ್ವರಿತ ಕ್ರಮ ಕೈಗೊಂಡಿತ್ತು. ಆದ್ದರಿಂದ ಈ ಬಾರಿಯು ಸರ್ಕಾರ ಮತ್ತು ಅಧಿಕಾರಿಗಳು, ವಿಶೇಷವಾಗಿ ವೈದ್ಯಕೀಯ ಪರಿಣತರು ಪರಿಸ್ಥಿತಿ ನಿಯಂತ್ರಣಕ್ಕೆ ತರುತ್ತಾರೆ ಎಂಬ ಭರವಸೆ ಇಟ್ಟುಕೊಂಡಿದ್ದೇನೆ ಎಂದರು.
ನಿಫಾ ವೈರಸ್ ಸೋಂಕಿಗೆ ಮದ್ದು ಇಲ್ಲ:
ನಿಫಾ ವೈರಸ್ ಕೇರಳಕ್ಕೆ ಆಗಾಗ್ಗೆ ಬಾಧಿಸುತ್ತಿರುತ್ತದೆ. ಬಾವುಲಿ ಮತ್ತು ಹಂದಿಗಳ ಮೈನಲ್ಲಿರುವ ದ್ರವದ ಮೂಲಕ ಮನುಷ್ಯರಿಗೆ ನಿಫಾ ವೈರಸ್ ಹರಡುತ್ತದೆ. ಇದು ಮನುಷ್ಯರಿಂದ ಮನುಷ್ಯರಿಗೂ ಹರಡುವ ಸೋಂಕು ರೋಗವಾಗಿದೆ. ಕೋವಿಡ್ ಸೋಂಕಿನಂತೆ ಈ ನಿಫಾ ವೈರಸ್ ಸೋಂಕು ಗುಣಪಡಿಸಲು ಯಾವ ಚಿಕಿತ್ಸೆ ಇಲ್ಲ. ಮರಣ ಪ್ರಮಾಣ ಶೇ. 70ರಷ್ಟಿದೆ. ಅಂದರೆ ಸೋಂಕಿತರಲ್ಲಿ ಶೇ. 70ರಷ್ಟು ಜನರು ಬದುಕುವುದಿಲ್ಲ. ಇದರ ಬೆನ್ನಲ್ಲೇ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲೂ ಕೂಡ ಹೈ ಅಲರ್ಟ್ ಘೋಷಿಸಲಾಗಿದೆ.
ನಿಫಾ ವೈರಸ್ ಸೋಂಕಿನ ಲಕ್ಷಣಗಳೇನು?
ನಿಫಾ ವೈರಸ್ ಸೋಂಕು ತಗುಲಿದ ವ್ಯಕ್ತಿಗೆ ಮೊದಲು ಜ್ವರ ಬರುತ್ತದೆ. ತಲೆನೋವು, ವಾಂತಿ, ಉಸಿರಾಟ ತೊಂದರೆ ಕಾಣಿಸುತ್ತದೆ. ಮಿದುಳು ಉರಿಯೂತ, ಸ್ನಾಯು ಸೆಳೆತ ಇತ್ಯಾದಿ ಬಾಧೆ ಬರಬಹುದು. ರೋಗಿ ಕೋಮಾ ಸ್ಥಿತಿಗೆ ಜಾರಿ, ಮೃತಪಡಬಹುದು ಎಂದು ವೈದ್ಯರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.