ವಜ್ರೋದ್ಯಮಿ ನೀರವ್ ಮೋದಿ ಭಾರತ ಹಸ್ತಾಂತರ ಇನ್ನಷ್ಟು ದೂರ
Team Udayavani, Aug 9, 2021, 9:00 PM IST
ಬ್ರಿಟನ್: ಭಾರತದಿಂದ ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬ್ರಿಟನ್ ಹೈಕೋರ್ಟ್ ನೀರವ್ ಪರ ವಕೀಲರಿಗೆ ಅನುಮತಿ ನೀಡಿದೆ.
ನೀರವ್ ಖನ್ನತೆಯಿಂದ ಬಳಲುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಈ ಅನುಮತಿ ನೀಡಲಾಗಿದೆ. ಅವರನ್ನು ಮುಂಬೈನ ಆರ್ಥರ್ ರಸ್ತೆಯ ಜೈಲಿನಲ್ಲಿ ಇರಿಸಲಾಗುವುದು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ನೀರವ್ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅವರಿಗೆ ಮೇಲ್ಮನವಿ ಸಲ್ಲಿಸಲು ನ್ಯಾಯಮೂರ್ತಿ ಮಾರ್ಟಿನ್ ಚೇಂಬರ್ಲೆನ್ ಅನುಮತಿ ನೀಡಿದ್ದಾರೆ.
ಈ ವರ್ಷ ಫೆಬ್ರವರಿಯಲ್ಲಿ ನೀರವ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತೀರ್ಪು ನೀಡಿದ್ದು, ಗೃಹ ಕಾರ್ಯದರ್ಶಿಯಿಂದ ಅನುಮೋದನೆಯೂ ಸಿಕ್ಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.