ಮಂಗಳೂರು: ಪೊಲೀಸ್ ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ: ಸಿಎಂ ಯಡಿಯೂರಪ್ಪ
ಮೃತರ ಕುಟುಂಬಕ್ಕೆ ಪರಿಹಾರ ನೀಡುವುದು ಅಪರಾಧವಾಗುತ್ತದೆ. ಹೀಗಾಗಿ ತನಿಖೆಯ ನಂತರವೇ ಪರಿಹಾರ
Team Udayavani, Dec 25, 2019, 11:40 AM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ, ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದ ಇಬ್ಬರಿಗೆ ಪರಿಹಾರ ನೀಡುವ ಬಗ್ಗೆ ತನಿಖೆಯ ನಂತರವೇ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬುಧವಾರ ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂಸಾಚಾರ ಪ್ರಕರಣದಲ್ಲಿ ಮೃತರು ತಪ್ಪಿತಸ್ಥರು ಎಂದು ಸಾಬೀತಾದರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವುದು ಅಪರಾಧವಾಗುತ್ತದೆ. ಹೀಗಾಗಿ ತನಿಖೆಯ ನಂತರವೇ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.
ಈಗಾಗಲೇ ಮಂಗಳೂರು ಹಿಂಸಾಚಾರ ಪ್ರಕರಣದಲ್ಲಿ ಪೊಲೀಸರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದ ಇಬ್ಬರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಈ ಬಗ್ಗೆ ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.