ಕಾನೂನು ಬಾಹಿರ ಚಟುವಟಿಕೆ ಮಾಡವವರ ಜೊತೆ ರಾಜಿಯಿಲ್ಲ: ಸಿಎಂ
Team Udayavani, Aug 10, 2021, 9:00 PM IST
ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಹತೋಟಿಯಲ್ಲಿರುತ್ತದೆ. ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು, ಸುವ್ಯವಸ್ಥೆ ಕಾಪಾಸುವುದು ಸರ್ಕಾರದ ಪ್ರಥಮ ಆದ್ಯತೆ. ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು. ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು ಎಂದು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 1338 ಪಾಸಿಟಿವ್ ಪ್ರಕರಣ: 31 ಜನರು ಸಾವು
ಪೊಲೀಸ್ ಅಧಿಕಾರಿಗಳು ಹೊಸ ಸರ್ಕಾರದಲ್ಲಿ ಯಾವ ರೀತಿ ಕೆಲಸ ಮಾಡಬೇಕು ಅಂತ ಹೇಳಿದ್ದೇವೆ. ದಕ್ಷತೆ, ಪ್ರಾಮಾಣಿಕತೆ ಇನ್ನು ಹೆಚ್ಚಾಗಬೇಕು. ಜನಸ್ನೇಹಿ ಆಗಿ ಕೆಲಸ ಮಾಡಬೇಕು. ಅಪರಾಧಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಕೋವಿಡ್ ನಿರ್ವಹಣೆ ಸಂದರ್ಭದಲ್ಲಿ ಏನೇನು ಸವಾಲು ಇದೆ ಎನ್ನುವುದನ್ನು ಹೇಳಿದ್ದೇನೆ. ಪೊಲೀಸ್ ಮೂಲ ಸೌಕರ್ಯ ಅಭಿವೃದ್ಧಿಗೆ ಯೋಜನೆ ಏನೆನಿದೆ ಅದನ್ನು ಮುಂದುವರೆಸುವ ಭರವಸೆ ನೀಡಿದ್ದೇನೆ. ಭೂಮಾಫಿಯಾ ಜೊತೆ ಪೋಲಿಸರು ಕೈಜೋಡಿಸುವುದನ್ನು ಸಹಿಸೋದಿಲ್ಲ ಈ ಬಗ್ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು.
ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.