ಲಸಿಕೆ ನೀಡಿಕೆಗೆ ಕಾಲ ಮಿತಿ ಇಲ್ಲ : ವರ್ಷಾಂತ್ಯಕ್ಕೆ ಪೂರ್ತಿಗೊಳ್ಳುವ ವಿಶ್ವಾಸ
Team Udayavani, Jul 24, 2021, 8:30 AM IST
ಹೊಸದಿಲ್ಲಿ: ಹದಿನೆಂಟು ವರ್ಷಕ್ಕಿಂತ ಮೇಲ್ಪಟ್ಟ ವರಿಗೆ ಲಸಿಕೆ ನೀಡಿ, ಮುಕ್ತಾಯಗೊಳಿಸುವುದಕ್ಕೆ ನಿಗದಿತ ಕಾಲಮಿತಿ ಹಾಕಿಕೊಳ್ಳಲಾಗಿಲ್ಲ. ಆದರೆ ವರ್ಷಾಂತ್ಯದ ಒಳಗಾಗಿ ಎಲ್ಲರಿಗೂ ಲಸಿಕೆ ನೀಡುವ ಗುರಿಯನ್ನು ತಲಪುವ ವಿಶ್ವಾಸವನ್ನು ಸರಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಡಾ|ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ವಯನಾಡ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಟಿಎಂಸಿಯ ಸಂಸದೆ ಮಾಲಾ ರಾಯ್ ಕೇಳಿದ್ದ ಪ್ರಶ್ನೆಗೆ ಸಚಿವೆ ಈ ಮಾಹಿತಿ ನೀಡಿದ್ದಾರೆ.
ಕೊರೊನಾದ ಬದಲಾಗುತ್ತಿರುವ ಪರಿಸ್ಥಿತಿಯಿಂದಾಗಿ ಲಸಿಕೆ ನೀಡಿ ಪೂರ್ತಿಗೊಳಿಸುವುದಕ್ಕೆ ಕಾಲಮಿತಿ ಹಾಕಿಕೊಳ್ಳಲಾಗದು. ಸದ್ಯ ಕೇಂದ್ರ ಗುರಿ ಹಾಕಿಕೊಂಡಿರುವ ಪ್ರಕಾರ ವರ್ಷಾಂತ್ಯಕ್ಕೆ ಮುಕ್ತಾಯವಾಗಲಿದೆ ಎಂದು ಪವಾರ್ ಹೇಳಿದ್ದಾರೆ.
9,725 ಕೋಟಿ: ಲಸಿಕೆ ಖರೀದಿ, ಉತ್ಪಾದನೆ ಮತ್ತು ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವತಿಯಿಂದ ಇದುವರೆಗೆ 9,725.15 ಕೋಟಿ ರೂ. ಖರ್ಚು ಮಾಡ ಲಾಗಿದೆ. ವರ್ಷಾಂತ್ಯದ ವರೆಗೆ 135 ಕೋಟಿ ಡೋಸ್ ಲಸಿಕೆ ಬೇಕಾಗುತ್ತದೆ. 43.87 ಕೋಟಿ ಡೋಸ್ ಲಸಿಕೆಯನ್ನು ಇದುವರೆಗೆ ನೀಡಲಾಗಿದೆ ಎಂದು ಸಚಿವೆ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಲಸಿಕೆ ಖರೀದಿಸುವಲ್ಲಿ ವಿಳಂಬ ವಾಗುತ್ತಿಲ್ಲ ಎಂದರು. ದೇಶದಲ್ಲಿನ ಒಟ್ಟು ಪ್ರಕರಣಗಳ ಪೈಕಿ ಶೇ.11ರಷ್ಟು 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರದ್ದು ಎಂದೂ ಹೇಳಿದ್ದಾರೆ.
ಇದೇ ವೇಳೆ, ಮೇ 1ರಿಂದ ಜೂ.20ರ ಅವಧಿಯಲ್ಲಿ ದೇಶದಲ್ಲಿ ಲಸಿಕೆ ಹಾಕುವ ಪ್ರಮಾಣ ಇಳಿಮುಖವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. ಎಪ್ರಿಲ್ನಲ್ಲಿ 8.99 ಕೋಟಿ ಡೋಸ್ ಇದ್ದದ್ದು ಮೇ ನಲ್ಲಿ 6.10 ಕೋಟಿಗೆ ಇಳಿಕೆಯಾಗಿದೆ ಎಂದರು.
ಪ್ರಯೋಜನವಾಗಿಲ್ಲ
ಕೇಂದ್ರ ಸರಕಾರ ಎಲ್ಲರಿಗೂ ಉಚಿತ ಲಸಿಕೆ ಎಂದು ಘೋಷಣೆ ಮಾಡುವ ಮುನ್ನ ವಿವಿಧ ರಾಜ್ಯಗಳು ಅದಕ್ಕಾಗಿ ಜಾಗತಿಕ ಟೆಂಡರ್ ಕರೆದಿದ್ದವು. ಅದಕ್ಕೆ ಸೂಕ್ತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಮಾಂಡವೀಯಾ ಹೇಳಿದರು. ಸೋಂಕಿ ನಿಂದಾಗಿ ರೈಲ್ವೇಯ 2,903 ಮಂದಿ ಉದ್ಯೋಗಿಗಳು ಅಸುನೀಗಿದ್ದಾರೆ. ಇದೇ ವೇಳೆ, ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ 35,342 ಹೊಸ ಪ್ರಕರಣ ಮತ್ತು 483 ಮಂದಿ ಅಸುನೀಗಿದ್ದಾರೆ. ಸಕ್ರಿಯ ಸೋಂಕು ಸಂಖ್ಯೆ 4,19,470ಕ್ಕೆ ಇಳಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.97.36ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.