ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಕ್ರೀಡಾ ಸಚಿವ : ವಿಡಿಯೋ ವೈರಲ್
Team Udayavani, Feb 5, 2022, 6:26 PM IST
ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಓಡಿ ಬಂದು ನಾಮಪತ್ರ ಸಲ್ಲಿಸಿದ ವೀಡಿಯೋ ಒಂದು ವೈರಲ್ ಆಗಿದೆ.
ತಿವಾರಿ ಅವರು ಬಲ್ಲಿಯಾ ಜಿಲ್ಲೆಯ ಫೆಫ್ನಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿದ್ದು . ಈ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದರು ಅದರಂತೆ ಕೇಸರಿ ಶಾಲು ಹಾಗೂ ಹಾರವನ್ನು ಧರಿಸಿ ಚುನಾವಣಾಧಿಕಾರಿಗಳ ಕಚೇರಿ ವರೆಗೆ ಓಡಿ ಬಂದು ನಾಮಪತ್ರ ಸಲ್ಲಿಸಿದ್ದಾರೆ ದೃಶ್ಯ ವೈರಲ್ ಆಗಿದೆ. ಫೆಫ್ನಾ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದೆ.
ಫೆ. 10ರಿಂದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇದನ್ನೂ ಓದಿ :‘ಮಿಸ್ಟರ್ ಮಮ್ಮಿ’ ಚಿತ್ರದಲ್ಲಿ ರಿಯಲ್ ಜೋಡಿ ರಿತೇಶ್, ಜೆನಿಲಿಯಾ
#WATCH | UP Sports Minister Upendra Tiwari sprinted to Collectorate Office in Ballia y’day as he was running late to file his nomination. Y’day nominations were scheduled to be filed by 3 pm & the minister was running late, nomination process still ongoing#UttarPradeshElections pic.twitter.com/99HSIPHwoA
— ANI UP/Uttarakhand (@ANINewsUP) February 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.