Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್ ವಿಧಿವಶ; ಗಣ್ಯರ ಸಂತಾಪ
Team Udayavani, Oct 9, 2024, 1:51 PM IST
ತಿರುವನಂತಪುರಂ: ಮಲಯಾಳಂ ಚಿತ್ರರಂಗದ (Veteran Malayalam) ಹಿರಿಯ ನಟ ಟಿಪಿ ಮಾಧವನ್ (88ವರ್ಷ) ಬುಧವಾರ (ಅ.09) ಕೊಲ್ಲಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಮೂಲಗಳು ತಿಳಿಸಿವೆ.
ನಟ ಮಾಧವನ್ ಮರೆಗುಳಿ ಕಾಯಿಲೆಯಿಂದ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಇಂದು ವಿಧಿವಶರಾಗಿದ್ದಾರೆಂದು ವರದಿ ತಿಳಿಸಿದೆ.
ನಟ ಮಾಧವನ್ ಅವರು ತಮ್ಮ 40ನೇ ವಯಸ್ಸಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಅವರು ಚಿತ್ರರಂಗ ಪ್ರವೇಶಿಸಿದ್ದರು. 1975ರಲ್ಲಿ ಬಿಡುಗಡೆಯಾಗಿದ್ದ ರಾಗಂ (Ragam) ಸಿನಿಮಾದಲ್ಲಿ ಮಾಧವನ್ ನಟಿಸುವ ಮೂಲಕ ಬೆಳ್ಳಿಪರದೆಯಲ್ಲಿ ಪಯಣ ಆರಂಭಿಸಿದ್ದರು.
ಮೊದಲ ಸಿನಿಮಾದಲ್ಲೇ ನಟ ಮಾಧವನ್ ಗೆ ತುಂಬಾ ಜನಪ್ರಿಯತೆ ತಂದುಕೊಟ್ಟಿತ್ತು. ಹಾಸ್ಯ ಮತ್ತು ಗಂಭೀರವಾದ ಪಾತ್ರಗಳಲ್ಲಿ ನಟಿಸುವ ಮೂಲಕ ಮಾಧವನ್ ಅವರು ಮಲಯಾಳಂ ಚಿತ್ರರಂಗದಲ್ಲಿ ಹೆಸರು ಗಳಿಸಿದ್ದರು. ಅನಾರೋಗ್ಯದಿಂದಾಗಿ ಮಾಧವನ್ ಅವರು 2016ರಲ್ಲೇ ನಟನೆಯಿಂದ ದೂರ ಉಳಿದುಬಿಟ್ಟಿದ್ದರು.
ಹಲವಾರು ಟಿವಿ ಸೀರಿಯಲ್ ಗಳಲ್ಲಿ ಮಾಧವನ್ ನಟಿಸಿದ್ದರು. ಇವರ ದಾಂಪತ್ಯ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ಇವರು ಪುತ್ರ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Kollywood: ಕಾರ್ತಿಕ್ ಸುಬ್ಬರಾಜ್ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್ ಆಗಿದೆ ಮಾಸ್
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.