![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 19, 2020, 9:24 AM IST
ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ಪೂರಕವಾಗಿ ಮಸೀದಿಗಳಲ್ಲಿ ಶುಕ್ರವಾರದ ವಿಶೇಷ ಪ್ರಾರ್ಥನೆಯ (ಜುಮಾ ನಮಾಜ್) ಸಮಯವನ್ನು ಕಡಿತಗೊಳಿಸಲು ಸೂಚಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬುಧವಾರ (ಮಾ.18) ರಂದು ಪ್ರಕಟಣೆ ಹೊರಡಿಸಿದೆ.
ಈ ಕುರಿತು ಕರ್ನಾಟಕದ ಅಮಿರೆ ಶರಿಯತ್ ಮೌಲಾನ ಸಗೀರ್ ಅಹ್ಮದ್ ರಶಾದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಧಾರ್ಮಿಕ ಮುಖಂಡರ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಡಾ. ಮಹ್ಮದ್ ಯೂಸುಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-ಶುಕ್ರವಾರದ ಪ್ರಾರ್ಥನೆಯನ್ನು ಮುಂದಿನ ಮೂರು ವಾರಗಳ ಕಾಲ 15 ನಿಮಿಷಕ್ಕೆ ಸಿಮೀತಗೊಳಿಸಬೇಕು. ಈ ವೇಳೆ ಸಾರ್ವಜನಿಕವಾಗಿ ಧ್ವನಿವರ್ಧಕಗಳನ್ನು ಬಳಸಬಾರದು.
– ಪ್ರತಿ ದಿನದ ಐದು ಹೊತ್ತಿನ ನಮಾಜ್ ವೇಳೆ ಮಸೀದಿಯಲ್ಲಿ ಶುಚಿತ್ವ ಕಾಪಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಾರ್ಥನೆಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಮುಗಿಸಬೇಕು. ಬಳಿಕ ಸಾಧ್ಯವಾದಷ್ಟು ಬೇಗ ಅಲ್ಲಿಂದ ತೆರಳಬೇಕು.
– ಮಸೀದಿ ಹಾಗೂ ದರ್ಗಾಗಳ ಆವರಣಗಳನ್ನು ಸ್ವಚ್ಚವಾಗಿಡಬೇಕು. ಹೆಚ್ಚು ಜನರು ಸೇರಲು ಅಥವಾ ತಂಗಲು ಅವಕಾಶ ಮಾಡಿಕೊಬಾರದು.
– ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಹೊರಡಿಸಿರುವ ಆದೇಶದಂತೆ ಮದರಸಾಗಳಿಗೆ ರಜೆ ನೀಡಬೇಕು.
– ಧಾರ್ಮಿಕ ಸಭೆ ಹಾಗೂ ಉರುಸ್ ಆಚರಣೆ ವೇಳೆ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಬೇಕು.
– ಉಸಿರಾಟದ ಸಮಸ್ಯೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಜನ ಮಸೀದಿ, ದರ್ಗಾ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಬರದಂತೆ ಮನವಿ ಮಾಡಲಾಗಿದೆ.
-ಕೋವಿಡ್ 19 ವೈರಸ್ ಸೋಂಕು ಗಂಡಾಂತರದಿಂದ ಪಾರು ಮಾಡುವಂತೆ ದೇವರಲ್ಲಿ ವಿಶೇಷ ದುವಾ (ಪ್ರಾರ್ಥನೆ) ಮಾಡುವಂತೆ ಮನವಿ ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.