ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R.ಸಂತೋಷ್
Team Udayavani, Nov 30, 2020, 8:10 PM IST
ಬೆಂಗಳೂರು: ” ಬೇಕಾಗಿದ್ದ ಮಾತ್ರೆಯನ್ನು ಬಿಟ್ಟು ಬೇರೆ ಮಾತ್ರೆಯನ್ನು ಸೇವಿಸಿದ್ದರಿಂದ ಆಸ್ಪತ್ರೆಗೆ ಸೇರುವಂತಾಯಿತು. ನನಗೆ ಯಾವುದೇ ರಾಜಕೀಯ ಒತ್ತಡ ಇರಲಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸ್ಪಷ್ಟಪಡಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಸಂತೋಷ್ ಅವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮೂರು ದಿನಗಳ ಹಿಂದೆ ಮದುವೆಯಲ್ಲಿ ಊಟದ ವ್ಯತ್ಯಾಸವಾಗಿ ಅಜೀರ್ಣ ಉಂಟಾಗಿತ್ತು. ಹೀಗಾಗಿ ನಾನು ತೆಗೆದುಕೊಳ್ಳಬೇಕಾದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದರಿಂದ ಇಷ್ಟೆಲ್ಲ ಆಯಿತು. ಇದೊಂದು ಅಚಾತುರ್ಯ ಘಟನೆ. ಅದರಿಂದ ಗಾಬರಿಗೊಂಡು ಪತ್ನಿ ಆಸ್ಪತ್ರೆಗೆ ಸೇರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.
“ರಾಜಕೀಯ ಒತ್ತಡ ಕುರಿತು ಪ್ರಶ್ನಿಸಿದಾಗ ರಾಜಕೀಯ ಒತ್ತಡ ಸದಾ ಇರುತ್ತದೆ. ಇಲ್ಲದಿರುವ ದಿನಗಳೇ ಇಲ್ಲ. ಸದ್ಯ ನನಗೆ ಯಾವುದೇ ರಾಜಕೀಯ ಒತ್ತಡ ಇಲ್ಲ. ನನ್ನ ಸ್ಥಾನಕ್ಕೆ ಯಾರು ರಾಜೀನಾಮೆ ನೀಡುವಂತೆ ಯಾರೂ ಒತ್ತಡ ಹಾಕಿಲ್ಲ. ನಿದ್ದೆ ಮಾತ್ರೆ ಸೇವಿಸುವ ಸ್ವಾಭಾವ ನನ್ನದಲ್ಲ. ಆದರೆ, ಸಾಮಾನ್ಯವಾಗಿ ನಿದ್ದೆ ಬಾರದಿದ್ದಾಗ ಅರ್ಧ ಮಾತ್ರೆ ಮಾತ್ರ ಸೇವಿಸುತ್ತೇನೆ. ಮೂರು ದಿನಗಳ ಕೆಳೆಗೆ ನನ್ನ ತಪ್ಪಿನಿಂದ ಪೂರ್ಣ ಮಾತ್ರೆ ಸೇವಿಸಿದ್ದೆ. ಅದರಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ನನಗೆ ಇಚ್ಚಾಶಕ್ತಿ ಇದ್ದು, ಯಾವುದೇ ಒತ್ತಡ ಇಲ್ಲ. ನಾನು ಯಾರ ಗರಡಿಯಲ್ಲಿ ಬೆಳೆದಿದ್ದೇನೆ ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ’ ಎಂದು ಹೇಳಿದರು.
ಇದನ್ನೂ ಓದಿ:ಅರಬ್ಬಿ ಸಮುದ್ರದಲ್ಲಿ ಮಿಗ್-29 ವಿಮಾನದ ಭಗ್ನಾವಶೇಷ ಪತ್ತೆ
ಡಿಕೆಶಿಗೆ ಟಾಂಗ್
“ವಿವಾದಿತ ವಿಡಿಯೋ’ ಕುರಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಂತೋಷ್, “ಡಿ.ಕೆ.ಶಿವಕುಮಾರ್ ಅವರ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಆರೋಪಗಳನ್ನು ಮಾಡಿದ್ದಾರೆ. ಅವರ ಮನೆ ಮೇಲೆ ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ದಾಳಿ ನಡೆದಾಗಲೂ ನನ್ನ ಮೇಲೆ ಆರೋಪ ಮಾಡಿದ್ದರು. ಸಂತೋಷ್ ಬಳಿ ಡೈರಿ ಇದೆ. ಅದರ ಬಗ್ಗೆ ಏಕೆ ತನಿಖೆ ನಡೆಸುವುದಿಲ್ಲ ಎಂದು ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದರು’ ಎಂದರು.
“ಬಹುಶಃ ಈ ರೀತಿ ಮಾತನಾಡುವುದು ಶಿವಕುಮಾರ್ ಅವರಿಗೆ ಅಭ್ಯಾಸವಾಗಿದೆ. ಇತ್ತೀಚೆಗೆ ನಡೆದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸೋತು ಹತಾಶೆಯಿಂದ ಹೇಳಿಕೆ ನೀಡಿದ್ದಾರೆ. ಈ ಸೋಲಿನಿಂದ ಅವರು ಮತಿಗೆಟ್ಟಿರಬಹುದು. ಶಿವಕುಮಾರ್ ಅವರ ಬಳಿ ಮನವಿ ಮಾಡುತ್ತೇನೆ. 1989ರಿಂದ ಶಾಸಕರಾಗಿ ಆಯ್ಕೆಯಾಗಿ ಬರುತ್ತಿದ್ದು, ಹಲವು ಬಾರಿ ಸಚಿವರಾಗಿದ್ದೀರಾ. ಕೆಪಿಸಿಸಿ ಅಧ್ಯಕ್ಷರಾಗಿದ್ದಿರಾ. ಆ ಹಿಂದೆ ರಾಜಕೀಯದಲ್ಲಿದ್ದಾಗ ಮಾತನಾಡಿದಂತೆ ಮಾತನಾಡಬಾರದು. ರಾಜಕೀಯ ಹೇಳಿಕೆಗಳನ್ನು ಕೊಡುವ ಮೊದಲು ನಿಮ್ಮ ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ ಅವರನ್ನು ನೋಡಿ ಕಲಿಯಿರಿ,’ ಎಂದು ತಿರುಗೇಟು ನೀಡಿದರು.
ಬಿಎಸ್‌ವೈ ಬಗ್ಗೆ ಮಾತನಾಡಬೇಡಿ
“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಈ ರೀತಿ ಪದೇಪದೆ ಹೇಳಿಕೆ ನೀಡಿ ತಿರುಚುವ ಕೆಲಸ ಮಾಡಬೇಡಿ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಮುನ್ನ ಆಲೋಚನೆ ಮಾಡಿ ನಾಲಿಗೆ ಹೊರಳಿಸಿ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವುದು 200-300 ಮಂದಿಯನ್ನು ಮನೆ ಮುಂದೆ ನಿಲ್ಲಿಸಿಕೊಂಡು ದೊಂಬಾರಾಟ ಮಾಡಿದಂತೆ ಅಲ್ಲ. ಯಡಿಯೂರಪ್ಪ ಅವರ ಹೆಸರು ತೆಗೆದು ಮಾತನಾಡಿದರೆ ನಾಯಕರಾಗುತ್ತೇನೆ ಅಂದುಕೊಂಡಿದ್ದಾರೆ. ಅದು ಮುಟ್ಟಾಳುತನ. ರಾಜ್ಯದಲ್ಲಿ ನಾನು ಕರೆ ಕೊಟ್ಟರೂ ಲಕ್ಷಾಂತರ ರೂ. ಜನ ನಮ್ಮ ನಾಯಕರಾದ ಯಡಿಯೂರಪ್ಪ ಅವರ ಪರವಾಗಿ ನಿಂತುಕೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು.
“ನನಗೆ ಶಿವಕುಮಾರ್ ಅವರ ಬಗ್ಗೆ ಸಂತಾಪವಿದೆ. ನಾವು ರೋಗಿ ವಿರುದ್ಧ ಹೋರಾಟ ಮಾಡಲ್ಲ, ರೋಗದ ವಿರುದ್ಧ ಹೋರಾಟ ಮಾಡುತ್ತೇವೆ. ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಮನವಿ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷರಿಗೆ ಒಂದು ತಿಂಗಳು ರಜೆ ಕೊಟ್ಟು ಉತ್ತಮ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಲಿ’ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.