Maharashtra: ಕುಡಿಯುವ ನೀರಿಗೆ ಅಮಲು ಭರಿಸುವ ಔಷಧ ಸೇರಿಸಿ ನರ್ಸ್ ಮೇಲೆ ಅತ್ಯಾ*ಚಾರ
ಕಳೆದ ರಾತ್ರಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ, ಆರೋಪಿ ಚಾಲಕನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ
Team Udayavani, Aug 27, 2024, 12:04 PM IST
ಮುಂಬೈ: ಕೋಲ್ಕತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು, ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19ವರ್ಷದ ಟ್ರೈನಿ ನರ್ಸ್ ಮೇಲೆ ಆಟೋ ಚಾಲಕ ಅತ್ಯಾ*ಚಾರ ಎಸಗಿರುವ ಘಟನೆ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರೈನಿ ನರ್ಸ್ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಚಾಲಕ ನೀರು ಬೇಕೆಂದು ಕೇಳಿದ್ದ, ಆಕೆ ನೀರು ಕುಡಿದ ಮೇಲೆ ಪ್ರಜ್ಞೆ ಕಳೆದುಕೊಂಡಿದ್ದಳು. ಆಟೋ ಚಾಲಕ ನೀರಿಗೆ ಮತ್ತು ಬರಿಸುವ ಪದಾರ್ಥ ಸೇರಿಸಿರುವುದಾಗಿ ತಿಳಿಸಿದೆ.
ಪ್ರಜ್ಞೆ ತಪ್ಪಿದ ನರ್ಸ್ ಅನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ*ಚಾರ ನಡೆಸಿರುವುದಾಗಿ ವರದಿ ವಿವರಿಸಿದೆ. ಪ್ರಜ್ಞೆ ಬಂದ ನಂತರ ಆಕೆ ಮನೆಯವರಿಗೆ ಮಾಹಿತಿ ನೀಡಿ, ನಂತರ ದೂರು ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ನರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.
ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಳೆದ ರಾತ್ರಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ, ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬದ್ಲಾಪುರ್ ನಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಭಾರೀ ಪ್ರತಿಭಟನೆಗೆ ಎಡೆಮಾಡಿಕೊಟ್ಟಿತ್ತು. ಪ್ರಕರಣದ ಸಂಬಂಧ ಪೊಲೀಸರು ಶಾಲೆಯ ಅಟೆಂಡರ್ ನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.