Israel War: ತಾಲಿಬಾನ್ ಗಳಿಗೆ ಹನುಮಂತನ ಗದೆಯೇ ಪರಿಹಾರ: ಸಿಎಂ ಯೋಗಿ ಆದಿತ್ಯನಾಥ್
Team Udayavani, Nov 2, 2023, 12:25 PM IST
ಅಲ್ವಾರ್(ರಾಜಸ್ಥಾನ್): ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಹಮಾಸ್ ಯುದ್ಧದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:World Cup: ಮ್ಯಾಕ್ಸವೆಲ್ ಬಳಿಕ ಮತ್ತೊಂದು ಆಘಾತ; ಆಸೀಸ್ ಗೆ ತೆರಳಿದ ಪ್ರಮುಖ ಆಲ್ ರೌಂಡರ್
ರಾಜಸ್ಥಾನದ ಅಲ್ವಾರ್ ನಲ್ಲಿ Rallyಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಗಾಜಾದಲ್ಲಿ ತಾಲಿಬಾನಿ ಮನಸ್ಥಿತಿಯ ಜನರನ್ನು ಹೇಗೆ ಕೊನೆಗಾಣಿಸಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ಅವರ ಅಡಗುತಾಣಗಳನ್ನು ಕರಾರುವಕ್ಕಾಗಿ ಹುಡುಕಿ ನಾಶಮಾಡಲಾಗುತ್ತಿದೆ. ಅದೇ ರೀತಿ ತಾಲಿಬಾನಿಗಳನ್ನು ಮಟ್ಟಹಾಕಲು ಹನುಮಂತನ ಗದೆಯೇ ಪರಿಹಾರವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಯೋಗಿ, ಗೂಂಡಾಗಿರಿ, ಅರಾಜಕತೆ ಮತ್ತು ಭಯೋತ್ಪಾದನೆ ಸಮಾಜಕ್ಕೆ ದೊಡ್ಡ ಶಾಪವಾಗಿದೆ. ಇದರೊಳಗೆ ರಾಜಕೀಯ ಬೆರೆತುಕೊಂಡಾಗ ಇದರಿಂದ ನಾಗರಿಕ ಸಮಾಜದ ಮೇಲೆ ದುಷ್ಪರಿಣಾಮ ಬೀರಲು ಕಾರಣವಾಗುತ್ತದೆ ಎಂದು ಹೇಳಿದರು.
ಕಾಶ್ಮೀರ ಸಮಸ್ಯೆಗೆ ಕಾಂಗ್ರೆಸ್ ಕಾರಣ:
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಭಾಗವಾಗಿ ಮಾಡಿದ್ದರು. ಆದರೆ ಕಾಂಗ್ರೆಸ್ ಮುಖಂಡ ಜವಾಹರಲಾಲ್ ನೆಹರು ಅವರ ನಿರ್ಧಾರದಿಂದಾಗಿ ಭಯೋತ್ಪಾದನೆ ಹರಡಲು ಕೊಡುಗೆ ನೀಡಿದಂತಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಶಕ್ತಿಮೀರಿ ದುಡಿದಿದ್ದು, ಭಯೋತ್ಪಾದನೆಯನ್ನು ಕೊನೆಗಾಣಿಸಲು ಶ್ರಮಿಸಿರುವುದಾಗಿ ಹೇಳಿದರು.
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ:
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗುತ್ತಿರುವುದಾಗಿ ಆರೋಪಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮನಸ್ಥಿತಿಯಿಂದಾಗಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೊಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.