ಮತ್ತೆ ಆಪರೇಷನ್ ಕಮಲ ಸದ್ದು
ರಾಜೀನಾಮೆ ಸುಳಿವು ನೀಡಿದ ರಮೇಶ್ ಜಾರಕಿಹೊಳಿ
Team Udayavani, Apr 24, 2019, 6:09 AM IST
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಆಪರೇಷನ್ ಕಮಲದ ಸದ್ದು ರಿಂಗಣಿಸಿದ್ದು, ಕರ್ನಾಟಕದಲ್ಲಿ ಮತ್ತೂಂದು ಹೈಡ್ರಾಮಾ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.
ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್‌ನಲ್ಲಿ ಮತದಾನ ಮಾಡಿದ ಅನಂತರ, “ತಾಂತ್ರಿಕವಾಗಷ್ಟೇ ಕಾಂಗ್ರೆಸ್‌ನಲ್ಲಿದ್ದೇನೆ’ ಎಂದು ಹೇಳುವ ಮೂಲಕ ರಾಜೀನಾಮೆ ಸುಳಿವು ನೀಡಿರುವುದು ಆಪರೇಷನ್ ಶುರುವಾಗಿದೆ ಎಂಬುದಕ್ಕೆ ಪುಷ್ಟಿ ನೀಡಿದೆ. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೂ ರಮೇಶ್ ಜತೆ ನಾಗೇಂದ್ರ, ಮಹೇಶ್ ಕುಮಠಳ್ಳಿ ಸೇರಿ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದಿರುವುದೂ ಸರಕಾರದ ಆತಂಕಕ್ಕೆ ಕಾರಣವಾಗಿದೆ.
ಆದರೆ ಈ ಆಪರೇಷನ್ ಈಗಲೇ ನಡೆಯುತ್ತದೆಯೋ ಅಥವಾ ಮೇ 23ರ ಫಲಿತಾಂಶದ ಬಳಿಕ ನಡೆಯಲಿದೆಯೋ ಎಂಬ ಬಗ್ಗೆ ಗೊಂದಲಗಳಿವೆ. ಜತೆಗೆ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಇರುವುದರಿಂದ ಇವೆಲ್ಲ ಮುಗಿದ ಬಳಿಕ ಬಿಜೆಪಿ ಮತ್ತೂಂದು ಸುತ್ತಿನ ಆಪರೇಷನ್ ನಡೆಸಬಹುದು ಎಂದು ಬಿಜೆಪಿ ಆಂತರಿಕ ಮೂಲಗಳು ಹೇಳಿವೆ.
ಮತ್ತೂಂದೆಡೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಹೋದರ ಸತೀಶ್ ಜಾರಕಿಹೊಳಿ ಅವರು, ರಮೇಶ್ ಪಕ್ಷ ಬಿಟ್ಟುಹೋಗಲಿ ಪರವಾಗಿಲ್ಲ.
ಗೊಂದಲದಲ್ಲಿ ಸರಕಾರ ನಡೆಸುವುದು ಬೇಡ ಎಂಬ ಚಿಂತನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಪರಮೇಶ್ವರ್ ಮತ್ತು ಡಿ.ಕೆ.ಶಿ. ಅವರು ರಮೇಶ್ ಮನವೊಲಿಸುವ ಪ್ರಯತ್ನಯಲ್ಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕರಿಗೆ ಗಾಳ?
ಬಿಜೆಪಿ ಒಂದು ವೇಳೆ ಸರಕಾರ ಅಸ್ಥಿರಗೊಳಿಸಲು ಮುಂದಾದರೆ ಬಿಜೆಪಿಯ ಐವರು ಶಾಸಕರನ್ನು ತಮ್ಮತ್ತ ಸೆಳೆಯಲು ಸಿಎಂ ಕುಮಾರಸ್ವಾಮಿ ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದ ಐವರು ಶಾಸಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕಾಗಿಯೇ ಉಡುಪಿಯಲ್ಲಿ ವಿಶ್ರಾಂತಿಯಲ್ಲಿದ್ದ ಸಿಎಂ ದಿಢೀರನೇ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಈ ಬಗ್ಗೆ ದೇವೇಗೌಡ ಬಳಿಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.