ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ
Team Udayavani, Dec 4, 2024, 10:09 PM IST
ಬೆಂಗಳೂರು: ಶಾಲೆಗಳ ದತ್ತು ಕಾರ್ಯಕ್ರಮದ ಮಾದರಿಯಲ್ಲೇ ರಾಜ್ಯದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) “ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆ’ (ಸಿಎಸ್ಆರ್) ಅಡಿ ದತ್ತು ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ ಸಚಿವ ಡಾ| ಶರಣಪ್ರಕಾಶ ಪಾಟೀಲ್ ತಿಳಿಸಿದರು.
ನಗರದಲ್ಲಿ ಬುಧವಾರ ಕೌಶಲಾಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ಐಟಿಐ ಪ್ರಾಂಶುಪಾಲರ ಕಾರ್ಯಾಗಾರ ಹಾಗೂ ತರಬೇತಿ ಮತ್ತು ಉದ್ಯೋಗಾವಕಾಶಗಳಿಗೆ ಸಂಬಂಧಿಸಿದಂತೆ ವಿವಿಧ ಕಾರ್ಪೋರೆಟ್ ಸಂಸ್ಥೆಗಳೊಂದಿಗೆ ಒಡಂಬಡಿಕೆ ಸಹಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರಕಾರದಿಂದ ಐಟಿಐಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸಲು ಹಲವು ರೀತಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದರ ಜತೆಗೆ ಸ್ಥಳೀಯವಾಗಿ ಆಯಾ ಜಿಲ್ಲೆಗಳಲ್ಲಿ ಉತ್ತಮ ಕಾರ್ಪೋರೆಟ್ ಸಂಸ್ಥೆಗಳೊಂದಿಗೆ ಐಟಿಐ ಪ್ರಾಂಶುಪಾಲರು ಚರ್ಚೆ ನಡೆಸಿ, ಸಿಎಸ್ಆರ್ ಅಡಿ ದತ್ತು ಪಡೆಯಲು ಮನವೊಲಿಸಬೇಕು ಅಥವಾ ಸರಕಾರದ ಗಮನ ಸೆಳೆದರೆ, ನಾವೂ ಆ ಕಂಪೆನಿಗಳಿಗೆ ಪತ್ರ ಬರೆದು ಸರಕಾರಿ ಐಟಿಐಗಳನ್ನು ದತ್ತು ಪಡೆಯುವಂತೆ ಕೋರಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.