ವಿಪಕ್ಷ ನಾಯಕ: ಪೈಪೋಟಿ; ಸಿದ್ದರಾಮಯ್ಯ-ಎಚ್‌ಕೆಪಿ ನಡುವೆ ತೀವ್ರ ಸ್ಪರ್ಧೆ
Team Udayavani, Oct 4, 2019, 6:30 AM IST
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್‌ನಲ್ಲಿ ಮತ್ತೆ ವಿಪಕ್ಷ ನಾಯಕನ ಸ್ಥಾನಕ್ಕೆ ಕಸರತ್ತು ಆರಂಭವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಎಚ್.ಕೆ.ಪಾಟೀಲ್ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಇವರಿಬ್ಬರ ಜತೆಯಲ್ಲಿ ಪರಮೇಶ್ವರ್ ಹೆಸರೂ ಕೇಳಿಬರುತ್ತಿದೆ.
ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡುವ ಬಗ್ಗೆ ಮೂಲ ಕಾಂಗ್ರೆಸಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಪ್ರತಿಯಾಗಿ ತನ್ನನ್ನು ಪರಿಗಣಿಸ ದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆ ತಾಳುವ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಿಪಕ್ಷ ನಾಯಕನ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ಸಿಲುಕಿದೆ.
ಅ. 10ರಿಂದ ವಿಧಾನ ಮಂಡಲ ಅಧಿವೇಶನ ಶುರು ವಾಗ ಲಿದ್ದು, ಅಷ್ಟರೊಳಗೆ ಹೈಕಮಾಂಡ್ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ಆಶಾಭಾವ. ಈ ಕುರಿತಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ತನ್ನ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದ್ದು, ಎಂ.ಬಿ. ಪಾಟೀಲ್, ಜಮೀರ್ ಅಹಮದ್, ಚೆಲುವ ರಾಯಸ್ವಾಮಿ, ಎಚ್.ಸಿ. ಬಾಲಕೃಷ್ಣ, ಸಿ.ಎಂ.ಇಬ್ರಾಹಿಂ, ಬೈರತಿ ಸುರೇಶ್, ಎಲ್. ಹನುಮಂತಯ್ಯ ಪಾಲ್ಗೊಂಡಿದ್ದರು.
ಎಚ್‌ಕೆಪಿ ಪರ ಭಾರೀ ಲಾಬಿ
ಮಾಜಿ ಸಚಿವ ಹಾಗೂ ಹಿರಿಯ ನಾಯಕರಾಗಿರುವ ಎಚ್.ಕೆ. ಪಾಟೀಲ್ ವಿಪಕ್ಷ ನಾಯಕನ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಮುಖವಾಗಿ ಮೂಲ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ , ಎಂ. ವೀರಪ್ಪ ಮೊಲಿ, ಬಿ.ಕೆ. ಹರಿಪ್ರಸಾದ್ ಸಹಿತ ರಾಜ್ಯಸಭೆ ಸದಸ್ಯರು ಎಚ್.ಕೆ. ಪಾಟೀಲ್ ಪರವಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ
ಬಡ ದಂಪತಿಗೆ ಮಾಜಿ ಮೇಯರ್ ಸುಧೀರ್ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ
Drone: ಪುರಿ ದೇಗುಲದ ಮೇಲೆ ಡ್ರೋನ್ ಹಾರಾಟ: ಪೊಲೀಸರಿಂದ ತನಿಖೆ
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Govt.,: ಖಾಸಗಿ ಚಾಟ್ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.