Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Team Udayavani, Nov 27, 2024, 3:23 AM IST
ಬೆಂಗಳೂರು: ಮಗು ಆರೈಕೆಗಾಗಿ ಶುಶ್ರೂಷಕಿಯೊಬ್ಬರಿಗೆ ಹೆಚ್ಚುವರಿಯಾಗಿ 120 ದಿನ ರಜೆ ಮಂಜೂರು ಮಾಡುವಂತೆ ರಾಷ್ಟ್ರೀಯ ಮಾನಸಿಕ ಮತ್ತು ನರವಿಜ್ಞಾನ ಸಂಸ್ಥೆಗೆ (ನಿಮ್ಹಾನ್ಸ್) ನಿರ್ದೇಶಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಾಧೀಕರಣದ (ಸಿಎಟಿ) ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ನಿಮ್ಹಾನ್ಸ್ನ ತುರ್ತು ನಿಗಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಶುಶ್ರೂಷಕಿ ಅನಿತಾ ಜೋಸೆಫ್ ಅವರಿಗೆ 120 ದಿನಗಳ ಹೆಚ್ಚುವರಿ “ಮಗು ಆರೈಕೆ ರಜೆ’ (ಸಿಸಿಎಲ್) ಮಂಜೂರು ಮಾಡಿದ್ದ ಸಿಎಟಿ ಆದೇಶ ರದ್ದುಪಡಿಸುವಂತೆ ಕೋರಿ ನಿಮ್ಹಾನ್ಸ್ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿಷ್ಠಿತ ಸಂಸ್ಥೆಯಾಗಿರುವ ನಿಮ್ಹಾನ್ಸ್ ಮಾದರಿ ಉದ್ಯೋಗದಾತನಂತೆ ಕಾರ್ಯನಿರ್ವಹಿಸಬೇಕು. ಮಹಿಳೆ ಮತ್ತು ಅವರ ಹಕ್ಕುಗಳನ್ನು ಗೌರವಿಸಬೇಕು ಎಂದೂ ಸಲಹೆ ನೀಡಿದೆ.
ಕೇರಳ ಮೂಲದ ಅನಿತಾ ಜೋಸೆಫ್ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾ ಗಿದ್ದಾರೆ. ಅವರಿಗೆ 180 ದಿನ ಹೆರಿಗೆ ರಜೆ ನೀಡಲಾಗಿತ್ತು. ಈ ರಜೆ ಪೂರ್ಣಗೊಳ್ಳುವ ಮುನ್ನವೇ ಅವರು ನಿಮ್ಹಾನ್ಸ್ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿ, ತನ್ನ ಕುಟುಂಬದ ಸದಸ್ಯರು ಕೇರಳ ರಾಜ್ಯದಲ್ಲಿ ನೆಲೆಸಿದ್ದಾರೆ. ಪತಿ ಖಾಸಗಿ ಕಂಪೆನಿಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಗುವಿನ ಆರೈಕೆಗಾಗಿ ಹೆಚ್ಚುವರಿಯಾಗಿ 120 ದಿನ ಸಿಸಿಎಲ್ (ಮಗು ಆರೈಕೆ ರಜೆ) ಮಂಜೂರು ಮಾಡುವಂತೆ ಕೋರಿದ್ದರು. ಈ ಮನವಿಯನ್ನು ಆಡಳಿತ ಮಂಡಳಿ ತಿರಸ್ಕರಿಸಿದ್ದರಿಂದ ಅನಿತಾ ಸಿಎಟಿ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.