ಉಡುಪಿಗೆ ಆಮ್ಲಜನಕ ಪೂರೈಕೆ ಬೆಡ್‌, ಲ್ಯಾಬ್‌: ಬೊಮ್ಮಾಯಿ


Team Udayavani, Apr 24, 2020, 6:00 AM IST

ಉಡುಪಿಗೆ ಆಮ್ಲಜನಕ ಪೂರೈಕೆ ಬೆಡ್‌, ಲ್ಯಾಬ್‌: ಬೊಮ್ಮಾಯಿ

ಉಡುಪಿ: ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ಅತೀ ಅಗತ್ಯವಾದ ಕೇಂದ್ರೀಕೃತ ಆಮ್ಲಜನಕ ಪೂರೈಕೆ ಬೆಡ್‌ಗಳನ್ನು ಅಳವಡಿಸಲು ಮತ್ತು ಸೋಂಕು ರೋಗ ಪತ್ತೆ ಪ್ರಯೋಗಾಲಯವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಜಿಲ್ಲಾಸ್ಪತ್ರೆಯಲ್ಲಿ ಅಂತಹ 50 ಬೆಡ್‌ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 5ರಿಂದ 10 ಬೆಡ್‌ಗಳನ್ನು ಅಳವಡಿಸಲಾಗುವುದು ಎಂದು ರಾಜ್ಯದ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಭೆಯ ನಿರ್ಣಯಗಳನ್ನು ಪ್ರಕಟಿಸಿದರು.

ಕೋವಿಡ್ 19 ಆರಂಭಕ್ಕೆ ಮೊದಲು ರಾಜ್ಯದಲ್ಲಿ ಎರಡೇ ಪ್ರಯೋಗಾಲಯಗಳಿದ್ದವು. ಮತ್ತೆ 17 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. 10 ಹೊಸ ಪ್ರಯೋಗಾಲಯಗಳ ಸ್ಥಾಪನೆಯಾಗಲಿದೆ. ಎ. 30ರೊಳಗೆ ರಾಜ್ಯದಲ್ಲಿ 27 ಕೇಂದ್ರಗಳು ಆಗಲಿವೆ ಎಂದರು.

ಪಿಪಿಇ ಕಿಟ್‌
3,500 ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ) ಕಿಟ್‌ಗಳನ್ನು ಪೂರೈಸಲಾಗುತ್ತಿದೆ. ಇದಕ್ಕೆ ಡ್ರಗ್‌ ಕಂಟ್ರೋಲ್‌ನಿರ್ದೇಶಕರ ಜತೆ ಜಿಲ್ಲಾಧಿಕಾರಿಗಳು ಮಾತನಾಡು ತ್ತಾರೆ. ನಾನೂ ಮಾತನಾಡುತ್ತೇನೆ ಎಂದರು.

ಅಧ್ಯಾದೇಶ ಜಾರಿ
ಕೋವಿಡ್ 19 ವಾರಿಯರ್ ಮೇಲಿನ ಹಲ್ಲೆಕೋರರ ಮೇಲೆ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಧ್ಯಾದೇಶ ಹೊರಡಿಸಿವೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೊದಲು ರಾಜ್ಯ ಸರಕಾರ ಅಧ್ಯಾದೇಶ ಹೊರಡಿಸಿದ ಬಳಿಕ ಕೇಂದ್ರ ಸರಕಾರ ಕಠಿನ ಕ್ರಮದ ಅಧಿಸೂಚನೆ ಹೊರಡಿಸಿದೆ.

ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಕೇಂದ್ರದ್ದೇ ಮುಖ್ಯವಾಗುತ್ತದೆ. ಅದರ ಬಗ್ಗೆ ಇನ್ನಷ್ಟು ಸ್ಪಷ್ಟತೆ ದೊರೆಯಬೇಕಾಗಿದೆ. ಪಾದರಾಯನ ಪುರದ ಘಟನೆಯ ಪ್ರಮುಖ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಮತ್ತು ಅಧ್ಯಾದೇಶವನ್ನು ಈ ಪ್ರಕರಣಕ್ಕೂ ಅನ್ವಯಿಸುವ ಸಾಧ್ಯತೆ ಇದೆ ಎಂದರು.

ಉಚ್ಚಿಲದ ಪ್ರಕರಣದ ಬಗ್ಗೆ ಕೇಳಿದಾಗ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಎಸಿ ಕೊಠಡಿಯಲ್ಲಿ ಸಭೆ
ಕೋವಿಡ್ 19 ನಿಯಂತ್ರಣ ಸಭೆಯು ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆದಿದೆ.ಪತ್ರಿಕಾಗೋಷ್ಠಿ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರಾದ ಕೆ. ರಘುಪತಿ ಭಟ್‌, ಸುನಿಲ್‌ ಕುಮಾರ್‌, ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಎಸ್‌ಪಿ ವಿಷ್ಣುವರ್ಧನ್‌, ಜಿ.ಪಂ. ಸಿಇಒ ಪ್ರೀತಿ ಗೆಹೊÉàತ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.

ಸಭೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಮೆಂಡನ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಐಜಿಪಿ ದೇವಜ್ಯೋತಿ ರೇ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿಗೆ 3 ವೆಂಟಿಲೇಟರ್‌
ಉಡುಪಿ: ಬಳ್ಳಾರಿಯ ಕಿಮ್ಸ್‌ಗೆ 28 ವೆಂಟಿಲೇಟರ್‌ಗಳು ಬಂದಿದ್ದು ಅದರಲ್ಲಿ ಮೂರನ್ನು ಉಡುಪಿ ಜಿಲ್ಲೆಗೆ ಕಳುಹಿಸಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.ಮದುವೆ ಸಮಾರಂಭಗಳಿಗೆ ಸೀಮಿತ ಸಂಖ್ಯೆಯಲ್ಲಿ ಅವಕಾಶ ಕೊಡಬಹುದೇ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕೇಳಿದಾಗ, ಮೇ 3ರ ಬಳಿಕ ನೋಡೋಣ ಎಂದರು.

ಮೇ 3ರ ಬಳಿಕವೂ ಲಾಕ್‌ಡೌನ್‌ ಮುಂದುವರಿಸಿದರೆ ಬಹಳ ಕಷ್ಟವಾದೀತು; ಜನರೂ ಸಹಿಸುವುದು ಕಷ್ಟ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದಾಗ ನಿಮ್ಮ ಭಾವನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ತಿಳಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಹಸಿರು ವಲಯ ಘೋಷಣೆ ಬಳಿಕ
ಹೊರಜಿಲ್ಲೆಯವರಿಗೆ ಉಡುಪಿಗೆ ಆಗಮಿಸಲು ಅವಕಾಶ ಇರುವುದು ವೈದ್ಯಕೀಯ ಮತ್ತು ಮರಣದ ಕಾರಣಕ್ಕೆ ಮಾತ್ರ. ಆಗಲೂ ಐದಕ್ಕಿಂತ ಹೆಚ್ಚು ಜನ ಬರುವುದನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಜಿಲ್ಲೆಯು ಹಸಿರು ವಲಯವಾಗಿ ಘೋಷಣೆಯಾದರೆ ಬಳಿಕ ರಾಜ್ಯದ ಈಗಾಗಲೇ ಇರುವ 11 ಹಸಿರು ವಲಯದ ಜಿಲ್ಲೆಗಳಲ್ಲಿ ಏನೇನು ಅವಕಾಶಗಳಿವೆಯೋ ಅವುಗಳನ್ನು ರಾಜ್ಯ ಸರಕಾರದ ಅನುಮತಿಯೊಂದಿಗೆ ನೀಡಲಾಗುವುದು ಎಂದರು.

ವಲಸೆ ಕಾರ್ಮಿಕರಿಗೆ ಈಗ ನೀಡುತ್ತಿರುವ ಸೇವೆ ಉತ್ತಮವಾಗಿದೆ. ಹಸಿರು ವಲಯ ಘೋಷಣೆಯಾದ ಬಳಿಕ ಜಲ್ಲಿ, ಸಿಮೆಂಟ್‌, ಕಲ್ಲು, ಮರಳು ಇತ್ಯಾದಿ ಜನಸಾಮಾನ್ಯರಿಗೆ ದೊರೆಯುವಂತೆ ಮಾಡಲು ಯೋಜನೆ ರೂಪಿಸಿಕೊಳ್ಳಿ. ಕಾರ್ಮಿಕರು ಒಂದೂರಿನಿಂದ ಇನ್ನೊಂದೂರಿಗೆ ಹೋಗುವ ಸಂದರ್ಭವನ್ನು ಹೇಗೆ ನಿಭಾಯಿಸ ಬೇಕೆಂದು ನೀಲನಕಾಶೆ ಸಿದ್ಧಪಡಿಸಿಕೊಳ್ಳಿ. ಅಂಗಡಿಗಳನ್ನು ತೆರೆಯುವಾಗ ಜನ ಸಂದಣಿ ತಪ್ಪಿಸಲು ಬೇರೆ ಬೇರೆ ತರಹದ ವ್ಯವಹಾರಗಳಿಗೆ ಬೇರೆ ಬೇರೆ ಸಮಯವನ್ನು ನಿಗದಿಪಡಿಸಿ ಎಂದು ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕೈಗಾರಿಕೆಗಳ ಕುರಿತು ಮಾತನಾಡಿದ ಸಚಿವರು,ಗೇರು, ತೆಂಗಿನ ಕಾಯಿ ಉದ್ಯಮಕ್ಕೆಅವಕಾಶ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಗೇರು ಉದ್ಯಮವನ್ನು ಶೇ. 25 ಸಿಬಂದಿ ಸಾಮರ್ಥ್ಯದಲ್ಲಿ ನಡೆಸುವುದಾಗಿ ಗೇರು ಉದ್ಯಮದವರೇ ತಿಳಿಸಿದ್ದಾರೆಂದರು.

ಯಥಾಸ್ಥಿತಿ ಮುಂದುವರಿಕೆ
ಕೇಂದ್ರ ಸರಕಾರ ಆರ್ಥಿಕ ಚಟುವಟಿಕೆಗಳನ್ನು ಆರಂಭಿ ಸಲು ಅನುಕೂಲವಾಗುವಂತೆ ಲಾಕ್‌ಡೌನ್‌ ತೆರವುಗೊಳಿಸಿದೆ. ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ 11ರ ವರೆಗೆ ಮಾತ್ರ ದಿನಸಿ ಅಂಗಡಿ ತೆರೆಯ ಲಾಗುತ್ತಿದ್ದು, ಇನ್ನೊಂದು ಆದೇಶ ಬರುವ ವರೆಗೆ ಹಿಂದಿನ ಆದೇಶವೇ ಜಾರಿಯಲ್ಲಿರುತ್ತದೆ ಎಂದರು.

ನರೇಗಾ ಆರಂಭ
ಸ್ಥಳೀಯ ಕಸುಬು, ಮೀನುಗಾರಿಕೆ, ನರೇಗಾ ಯೋಜನೆ ಆರಂಭಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ ವೈಯಕ್ತಿಕ ಫ‌ಲಾನುಭವಿಗಳಿಗೆ ಅವಕಾಶ ನೀಡಿದಾಗ ಸಾಮಾಜಿಕ ಅಂತರದ ಸಮಸ್ಯೆ ಬರುವುದಿಲ್ಲ ಎಂದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.