Padubidri: ಬ್ಲೂ ಫ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತ
Team Udayavani, Jul 29, 2024, 6:20 AM IST
ಪಡುಬಿದ್ರಿ: ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಎಂಡ್ ಪಾಯಿಂಟ್‌ನ ಬ್ಲೂ ಫ್ಲ್ಯಾಗ್ ಬೀಚ್ ಸಂಪರ್ಕದ ಪಡುಬಿದ್ರಿ ನಡಿಪಟ್ಣ ಪ್ರದೇಶದ ಕಾಂಕ್ರೀಟ್ ರಸ್ತೆ ರವಿವಾರ ಕುಸಿದಿದೆ. ಬೀಚ್‌ಗೆ ಪಡುಬಿದ್ರಿ ಮೂಲಕ ಸಂಪರ್ಕಿಸುವ ಏಕೈಕ ರಸ್ತೆ ಇದಾಗಿತ್ತು.
ಶನಿವಾರ ಸಚಿವ ಮಂಕಾಳ ವೈದ್ಯ ಅವರು ನಡಿಪಟ್ಣ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಕಾಂಕ್ರೀಟ್ ರಸ್ತೆಯ ಅಡಿಭಾಗದ ಮರಳು ಕೊಚ್ಚಿ ಹೋಗಿರುವುದನ್ನು ಗಮನಿಸಿದ್ದರು. ಬಳಿಕ ತುರ್ತು ಕಾಮಗಾರಿಗೆ ಶಾಸಕ ಸುರೇಶ್ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಥಳದಲ್ಲೇ ಗುತ್ತಿಗೆದಾರರಿಗೆ ಆದೇಶಿಸಿದ್ದರು.
ಸಂಪೂರ್ಣ ಹಾನಿಗೀಡಾಗಿರುವ ಕಾಂಕ್ರೀಟ್ ರಸ್ತೆಯ ಪುನರ್ ನಿರ್ಮಾಣ ಆಗಬೇಕಿದೆ. ಇದರ ಕುರಿತಾಗಿ ತಾನು ವಿಧಾನಸಭಾ ಅಧಿವೇಶನದಲ್ಲಿ ಕೇಳಿರುವ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಉತ್ತರಿಸಿ, ಕಾಪು ಮತ್ತು ಪಡುಬಿದ್ರಿ ಬೀಚ್‌ಗಳ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಸಚಿವ ರನ್ನು ಮುಖತಃ ಭೇಟಿಯಾಗಿ ಮಾತನಾಡುವುದಾಗಿಯೂ ಕಾಪು ಶಾಸಕ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಜು. 31ರ ವರೆಗೆ ಬ್ಲೂ ಫ್ಲ್ಯಾಗ್ ಬೀಚ್ ಪ್ರವೇಶಕ್ಕೆ ನಿಷೇಧ
ನಡಿಪಟ್ಣದ ಶ್ರೀ ವಿಷ್ಣು ಭಜನ ಮಂದಿರದ ಬಳಿ ಬ್ಯಾರಿಕೇಡ್ ಅಳವಡಿಸಿ ಪ್ರವಾಸಿಗರನ್ನು ತಡೆ ಯಲಾಗುತ್ತಿದೆ. ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಾರ್ವಜನಿಕರ ಪ್ರವೇಶವನ್ನು ಜು. 31ರ ವರೆಗೆ ನಿರ್ಬಂಧಿಸಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಆದೇಶಿಸಿರುವುದಾಗಿ ಬೀಚ್‌ನ ಪ್ರಬಂಧಕ ವಿಜಯ್ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಬಿತ್ತನೆ ಬೀಜ ಕೊರತೆ: ಗಮನ ಸೆಳೆದ ಶಾಸಕ ಗುರ್ಮೆ
ಕಾಪು: ಉಡುಪಿ ಜಿಲ್ಲೆಯನ್ನು ಕಾಡಿದ ಎಂಒ4 ಭತ್ತದ ಬೀಜದ ಕೊರತೆ ಕುರಿತಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿ ಸರಕಾರದ ಗಮನ ಸೆಳೆದರು.
ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಉತ್ತರಿಸಿದ್ದು, ಕಳೆದ ಸಾಲಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಎಂ.ಒ.4 ಭತ್ತದ ಬೀಜ ಉತ್ಪಾದನೆಯಲ್ಲಿ ಕೊರತೆ ಉಂಟಾಗಿತ್ತು. ಆದರೆ ರೈತರಿಗೆ ತೊಂದರೆ ಆಗದಂತೆ ಬದಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ 249.50 ಕ್ವಿಂಟಾಲ್ ಎಂಒ-4 ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ. ಎಂಒ4 ತಳಿಗೆ ಪರ್ಯಾಯವಾಗಿ ಸಹ್ಯಾದ್ರಿ ಕೆಂಪು ಮುಕ್ತಿ ಭತ್ತ 440 ಕ್ವಿಂಟಾಲ್, ಉಮಾ 196.50 ಕ್ವಿಂಟಾಲ್ ಮತ್ತು ಜ್ಯೋತಿ 79.50 ಕ್ವಿಂಟಾಲ್ ಬಿತ್ತನೆ ಬೀಜವನ್ನು ಸರಬರಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಾರಿ ಎಂಒ4 ಭತ್ತದ ಬೀಜ ಕೊರತೆಯಾಗಿರುವ ಕುರಿತಂತೆ ಉದಯವಾಣಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.