Padubidri: ಸ್ಥಳೀಯರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ರಾಜಿ ಇಲ್ಲ: ಡಿಸಿ

ಕೈಗಾರಿಕಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಶಾಸಕ, ಅಧಿಕಾರಿಗಳೊಂದಿಗೆ ಭೇಟಿ

Team Udayavani, Jul 30, 2024, 6:21 AM IST

Udupi-Dc

ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಜಿಲ್ಲಾ ಕೈಗಾರಿಕೆ ಇಲಾಖೆ, ಪರಿಸರ ಇಲಾಖೆ ಅಧಿಕಾರಿಗಳು, ಕುಂದಾಪುರದ ಸಹಾಯಕ ಕಮಿಶನರ್‌ ಮಹೇಶ್‌ಚಂದ್ರ, ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ, ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಮತ್ತಿತರೊಂದಿಗೆ ನಂದಿಕೂರಿನ ಎಂ. 11 ಜೈವಿಕ ಡೀಸೆಲ್‌ ಉತ್ಪಾದನ ಘಟಕಕ್ಕೆ ಸ್ಥಳೀಯರ ದೂರಿನನ್ವಯ ಸೋಮವಾರ ಭೇಟಿ ನೀಡಿದರು.

ಸ್ಥಳೀಯರು, ಅಧಿಕಾರಿಗಳ, ಎಂ 11 ಆಡಳಿತ ನಿರ್ದೇಶಕ ಸುಬಾನ್‌ ಖಾನ್‌ ಜತೆಗೆ ಸಭೆ ನಡೆಸಿದ ಅವರು, ಸರಕಾರದ ಅನುಮತಿಯೊಂದಿಗೆ ಕೈಗಾರಿಕೆಯನ್ನು ಆರಂಭಿಸಿದ್ದೀರಿ. ಪರಿಸರ ಸಮಸ್ಯೆಗಳು ಉಳಿದುಕೊಂಡಿವೆ. ಜಲಮಾಲಿನ್ಯ ಆಗುವಂತಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡುವ ವಿಷಯದಲ್ಲಿ ರಾಜಿ ಇಲ್ಲ ಎಂದರು.

ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ನಾಗರಾಜ್‌ ಅವರು ಎಂ. 11 ಘಟಕವು ಉದ್ಯೋಗಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಸರಿಯಾಗಿ ನೀಡಿಲ್ಲ. 74 ಉದ್ಯೋಗಿಗಳಲ್ಲಿ 31 ಮಂದಿ ಉಡುಪಿಯವರಿದ್ದರೂ, 21 ಮಂದಿಯನ್ನು ತತ್‌ಕ್ಷಣದಿಂದಲೇ ಉದ್ಯೋಗದಿಂದ ತೆಗೆಯಲಾಗಿದೆ. ಇದು ಸರಿಯಲ್ಲ ಎಂದರು.

ಜಿಲ್ಲಾ ಪರಿಸರ ಇಲಾಖಾ ಅಧಿಕಾರಿ ಕೀರ್ತಿಕುಮಾರ್‌ಗೆ ಡಿಸಿ ನಿರ್ದೇಶನ ನೀಡಿ, ಪರಿಸರದಲ್ಲಿ ನೀರು ಮಾಲಿನ್ಯವಾಗಿರುವುದನ್ನು ಹಾಗೂ ಘಟಕದಿಂದ ಕೆಟ್ಟ ವಾಸನೆ ಹೊರ ಬರುವುದನ್ನು ಎನ್‌ಐಟಿಕೆ ಅಥವಾ ಐಐಟಿಯ ಹಿರಿಯ ತಜ್ಞರ ಸಮಕ್ಷಮದಲ್ಲಿ ಪರಿಶೀಲಿಸಿ ವರದಿ ತರಿಸಿಕೊಳ್ಳಬೇಕು ಎಂದರು.

ಶಾಸಕ ಸುರೇಶ್‌ ಶೆಟ್ಟಿ ಅವರೂ ಎಲ್ಲ ಉಪಕ್ರಮಗಳನ್ನು ಕೈಗೊಂಡು ಕೈಗಾರಿಕೆಯನ್ನು ಮುನ್ನಡೆಸಿ ಎಂದರು.
ಕಾಪು ತಾ. ಪಂ. ಮುಖ್ಯ ಇಒ ಜೇಮ್ಸ್‌ ಡಿ’ ಸಿಲ್ವ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಪಿಎಸ್‌ಐ ಪ್ರಸನ್ನ, ಕಂದಾಯ ಪರಿವೀಕ್ಷಕ ಸಾಹಿಲ್‌, ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರಿದ್ದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.