Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ
ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಪೇಜರ್‌ಗಳ ಸ್ಫೋಟ
Team Udayavani, Sep 17, 2024, 10:50 PM IST
ಬೈರುತ್: ಲೆಬನಾನ್ ಮೂಲದ ಉಗ್ರಗಾಮಿ ಗುಂಪು ಹೆಜ್ಬುಲಾದೊಂದಿಗೆ ಸಂಪರ್ಕ ಹೊಂದಿದ್ದ ಸಂವಹನ ವಾಹಕ ‘ಪೇಜರ್’ಗಳು ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿದ್ದು, ಸುಮಾರು 2,700ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಈ ಘಟನೆಯಲ್ಲಿ ಲೆಬನಾನ್ ಪರ ಹೋರಾಟಗಾರರು ಮತ್ತು ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಸಂವಹನ ಮಾಡಲು ಬಳಸುತ್ತಿದ್ದ ಪೇಜರ್‌ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡಿವೆ. ಇಸ್ರೇಲ್ ಮತ್ತಿ ಹಮಾಸ್ ನಡುವೆ ನಡೆಯುತ್ತಿರುವ ಯುದ್ಧವು ಭುಗಿಲೆದ್ದ ನಂತರ ನಡೆದ ಅತಿದೊಡ್ಡ ‘ಭದ್ರತಾ ಉಲ್ಲಂಘನೆ’ ಇದು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಪೇಜರ್‌ಗಳ ಸ್ಫೋಟ ಮಾಡಲಾಗಿದ್ದು, ಸ್ಫೋಟ ನಡೆದ ತಕ್ಷಣ ನೂರಾರು ಮಂದಿ ಗಾಯಗೊಂಡಿದ್ದಾರೆ. ನಂತರ ಗಾಯಗೊಂಡ ಜನರನ್ನು ರಾಜಧಾನಿ ಬೈರುತ್‌ನ ದಕ್ಷಿಣ ಉಪನಗರಗಳ ಮೂಲಕ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿ ಮಾಡಿದೆ.
Hundreds of #Hezbollah members wounded in #Lebanon as pagers explode.
Over a thousand people have been injured in Lebanon in a synchronised detonation of pagers targeting US-designated terror group Hezbollah. pic.twitter.com/rWCytXp4VG
— The Bharat Current (@thbharatcurrent) September 17, 2024
ಈ ಭೀಕರ ಘಟನೆಯಲ್ಲಿ ಇರಾನ್ ರಾಯಭಾರಿ ಮೊಜಿತ್ಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಇಸ್ರೇಲ್‌ನ ಚಿತಾವಣೆಯಿಂದಲೇ ಏಕಕಾಲದಲ್ಲಿ ಇಂಥ ಘಟನೆ ನಡೆದಿದೆ ಎಂದು ಹೆಜ್ಬುಲಾ ಆರೋಪಿಸಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಉಗ್ರ ಸಂಘಟನೆ ಮೊಬೈಲ್ ಬಳಸುವುದು ಬಿಟ್ಟು ಪೇಜರ್‌ಗಳ ಮೂಲಕ ಸಂದೇಶ ರವಾನಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.