Bangladesh ದಂಗೆ ಹಿಂದೆ ಪಾಕ್-ಚೀನ ಕುತಂತ್ರ?
ಪ್ರತಿಭಟನೆಗೆ ಐಎಸ್‌ಐ ಕುಮ್ಮಕ್ಕು?, ಬಾಂಗ್ಲಾ-ಭಾರತ ಸಂಬಂಧ ಬಿರುಕಿಗೆ ಕುತಂತ್ರ
Team Udayavani, Aug 6, 2024, 7:10 AM IST
ಢಾಕಾ: ಬಾಂಗ್ಲಾದಲ್ಲಿ ಸೃಷ್ಟಿಯಾಗಿರುವ ಅರಾಜಕತೆ ಹಿಂದೆ ಪಾಕ್ ಸೇನೆ ಹಾಗೂ ಐಎಸ್‌ಐ ಕೈವಾಡ ಇದೆ ಎಂಬ ಶಂಕೆ ಮೂಡಿದೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯಲ್ಲಿ ಮಧ್ಯಪ್ರವೇಶಿಸಿ ಅದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಪಾಕ್ ಸೇನೆ-ಐಎಸ್‌ಐ ಮಾಡಿದೆ ಎಂದು ಹೇಳಲಾಗುತ್ತಿದೆ.
ಹಿಂಸಾಚಾರ ಹೆಚ್ಚಿಸುವ ಮೂಲಕ ಹಸೀನಾರನ್ನು ಅಧಿಕಾರದಿಂದ ಇಳಿಸಿ, ವಿಪಕ್ಷ ಬಿಎನ್‌ಪಿಯನ್ನು ಅಧಿಕಾರಕ್ಕೆ ತರಲು ಪಾಕ್ ಕುತಂತ್ರ ನಡೆಸಿದೆ. ಬಾಂಗ್ಲಾ-ಭಾರತ ಸಂಬಂಧದಲ್ಲಿ ಬಿರುಕು ಮೂಡಿಸಬೇಕೆಂದರೆ ಹಸೀನಾ ಅಧಿಕಾರದಿಂದ ಕೆಳಗಿಳಿಯಬೇಕು ಎಂದರಿತ ಪಾಕ್ ಕುತಂತ್ರ ನಡೆಸಿ ದಂಗೆ ಸೃಷ್ಟಿಸಿ ಭಾರತ ವಿರೋಧಿ ಸರಕಾರ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.
ನಿಷೇಧಿತ ಸಂಘಟನೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಘಟಕ ಛಾತ್ರ ಶಿಬಿರ್, ಗುಪ್ತಚರ ಸಂಸ್ಥೆ ಐಎಸ್‌ಐ ಜತೆಗೆ ನಂಟು ಹೊಂದಿದೆ. ಮೊದಲು ಮೀಸ ಲಾತಿ ಪ್ರತಿ ಭಟನೆ ಆರಂಭಿಸಿದ್ದು ಇದೇ ಸಂಘಟನೆ. ಇದಲ್ಲದೇ ಚೀನ ಕೂಡ ಶೇಖ್ ಹಸೀ ನಾರನ್ನು ಆಡಳಿತದಿಂದ ಇಳಿಸಲು ಪಿತೂರಿ ನಡೆಸಿದೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ಹಸೀನಾ ಅವರು ಚೀನ ಪ್ರವಾಸ ಹೋಗಿದ್ದಾಗ, ಚೀನದಿಂದ ಆರ್ಥಿಕ ಸಹಾಯ ದೊರೆಯದ್ದಕ್ಕೆ ಬೇಸರ ವ್ಯಕ್ತಪಡಿಸಿ, ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸಾಗಿದ್ದರು. ಹೀಗಾಗಿ ದಂಗೆಯಲ್ಲಿ ಚೀನದ ಕುಮ್ಮಕ್ಕೂ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.