ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೂ ಕೋವಿಡ್ ಆತಂಕ
Team Udayavani, Apr 22, 2020, 10:40 AM IST
ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ವೈರಸ್ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನೂ ಆತಂಕಕ್ಕೆ ಸಿಲುಕಿಸಿದೆ. ಪಾಕಿಸ್ಥಾನದ ಖ್ಯಾತ ಸಮಾಜ ಸೇವಕ, ಇಧಿ ಪ್ರತಿಷ್ಠಾನದ ಮುಖ್ಯಸ್ಥ ಅಬ್ದುಲ್ ಸತ್ತಾರ್ ಇಧಿ ಅವರ ಪುತ್ರ ಫೈಸಲ್ ಇಧಿಗೆ ಕೋವಿಡ್ ಸೋಂಕು ತಗುಲಿರುವ ಬೆನ್ನಲ್ಲೇ ಪಾಕ್ ಪ್ರಧಾನಿಯೂ ಕೋವಿಡ್ ಪರೀಕ್ಷೆಗೆ ಒಳಪಡುವ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕಿಸ್ಥಾನ ಪ್ರಧಾನ ಪ್ರಧಾನಿಯರ ಆಪ್ತ ವೈದ್ಯ ಡಾ| ಫೈಸಲ್ ಸುಲ್ತಾನ್ ಶೀಘ್ರವೇ ಇಮ್ರಾನ್ ಖಾನ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರಿಗೆ ಸೂಕ್ತ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಇರುವ ಬಗ್ಗೆ ಸೂಚಿಸುವುದಾಗಿ ಹೇಳಿದ್ದಾರೆ. ಹೀಗಾಗಿ, ಖಾನ್ ಕ್ವಾರಂಟೈನ್ನಲ್ಲಿ ಇರಲಿದ್ದಾರೆಯೇ, ಅಧಿಕೃತ ನಿವಾಸದಿಂದಲೇ ಸರಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆಯೇ ಎಂಬ ವಿಚಾರ ಆಪ್ತ ವೈದ್ಯ ತಪಾಸಣೆ ನಡೆಸಿದ ಬಳಿಕ ಗೊತ್ತಾಗಲಿದೆ. ಸದ್ಯ ಅವರು ಎಂದಿನಂತೆಯೇ ಕಾರ್ಯನಿರ್ವಹಿಸಿದ್ದಾರೆ ಮತ್ತು ಸಂಪುಟ ಸಭೆಯನ್ನೂ ನಡೆಸಿದ್ದಾರೆ. ಪಾಕಿಸ್ಥಾನದಲ್ಲಿ ಸೋಂಕಿನಿಂದಾಗಿ 192ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ ಮತ್ತು 9 ಸಾವಿರಕ್ಕೂ ಅಧಿಕ ಮಂದಿಗೆ ಪ್ರಕರಣ ದೃಢಪಟ್ಟಿದೆ. ಕಳೆದ ವಾರ, ಪೈಸಲ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಕೋವಿಡ್ ಸಂತ್ರಸ್ತರ ಪರಿಹಾರ ನಿಧಿಗೆ ದೇಣಿಗೆ ನೀಡಿ ಬಂದಿದ್ದರು. ಈ ಬೆನ್ನಲ್ಲೇ ಅಸ್ವಸ್ಥರಾಗಿದ್ದ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಇದೇ ವೇಳೆ ರಂಜಾನ್ ವೇಳೆ ಮಸೀದಿಗಳಿಗೆ 50 ವರ್ಷ ಮೇಲ್ಪಟ್ಟವರು, ಅಪ್ರಾಪ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇಂಥ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.