Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡಲು ಜನರಿಗೆ ಉತ್ತಮ ಅವಕಾಶ ಇದೆ..
Team Udayavani, Sep 19, 2024, 1:11 PM IST
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರ(Jammu and Kashmir) ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಭಾರತದ ಆಡಳಿತದ ವಿಚಾರದಲ್ಲಿ ಮೂಗುತೂರಿಸಿದೆ.
ಜಮ್ಮು-ಕಾಶ್ಮೀರದ ಕಲಂ 370 ಅನ್ನು ಪುನರ್ ಜಾರಿಗೊಳಿಸುವ ಬಗ್ಗೆ ಪಾಕ್ ಸರ್ಕಾರ ಮತ್ತು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಒಂದೇ ನಿಲುವು ಹೊಂದಿರುವುದಾಗಿ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಅಸೀಫ್ ಸಂದರ್ಶನವೊಂದರಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ನಡೆದ ನಂತರ ಖ್ವಾಜಾ ಅಸೀಫ್ ಈ ಹೇಳಿಕೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.
ಜಿಯೋ(Geo News) ನ್ಯೂಸ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಖ್ವಾಜಾ, ಕಣಿವೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಬಲಿಷ್ಠವಾಗಿದ್ದು, ಜಮ್ಮು-ಕಾಶ್ಮೀರದ ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡಲು ಜನರಿಗೆ ಉತ್ತಮ ಅವಕಾಶ ಇದೆ ಎಂದು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ 370ನೇ ವಿಧಿ ಮತ್ತು 35ಎ ಅನ್ನು ಪುನರ್ ಜಾರಿಗೊಳಿಸುವ ವಿಚಾರದಲ್ಲಿ ಪಾಕಿಸ್ತಾನ ಹಾಗೂ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಒಂದೇ ನಿಲುವು ಹೊಂದಿರುವುದಾಗಿ ಸಚಿವ ಖ್ವಾಜಾ ಬೆಂಬಲ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಸೆ.18ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.59ರಷ್ಟು ಮತದಾನವಾಗಿತ್ತು. ಕಿಸ್ತ್ವಾರ್ ನಲ್ಲಿ ಶೇ.77ರಷ್ಟು, ಪುಲ್ವಾಮಾದಲ್ಲಿ ಕಡಿಮೆ (ಶೇ.46) ಮತದಾನವಾಗಿರುವುದಾಗಿ ವರದಿ ವಿವರಿಸಿದೆ.
ಸೆಪ್ಟೆಂಬರ್ 25ರಂದು ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ ಹಾಗೂ ಅಕ್ಟೋಬರ್ 1ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.