ಕರಾವಳಿಯಾದ್ಯಂತ ಶ್ರದ್ಧಾಭಕ್ತಿಯ ಗರಿಗಳ ರವಿವಾರ ಆಚರಣೆ
Team Udayavani, Apr 11, 2022, 6:23 AM IST
ಮಂಗಳೂರು/ ಉಡುಪಿ: ಕ್ರೈಸ್ತರು ಎ. 10ರಂದು ಗರಿಗಳ ರವಿವಾರ (ಪಾಮ್ ಸಂಡೇ) ಆಚರಿಸುವುದರೊಂದಿಗೆ ಪವಿತ್ರ ಸಪ್ತಾಹ ಆರಂಭಗೊಂಡಿದೆ.
ಎರಡು ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರನ್ನು ಬಂಧಿಸಿ ಶಿಲುಬೆಗೇರಿಸುವ ಮುನ್ನ ಅವರು ಜರುಸಲೇಂ ನಗರ ಪ್ರವೇಶಿಸಿದ ಸಂದರ್ಭದಲ್ಲಿ ಅಲ್ಲಿನ ಜನರು ಪ್ರೀತ್ಯಾದರಗಳಿಂದ ಸ್ವಾಗತ ಕೋರಿದ್ದನ್ನು ಸ್ಮರಿಸಿ ಈ ದಿನವನ್ನು ಆಚರಿಸಲಾಗುತ್ತದೆ.
ಮಂಗಳೂರಿನ ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ರೊಜಾರಿಯೊ ಕೆಥೆಡ್ರಲ್‌ನಲ್ಲಿ ಹಾಗೂ ಉಡುಪಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ಬಾರ್ಕೂರಿನ ಸಂತ ಪೀಟರ್ ಚರ್ಚ್‌ನಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳ ನೇತೃತ್ವ ವಹಿಸಿ ಸಂದೇಶ ನೀಡಿದರು.
ರೊಜಾರಿಯೊ ಕೆಥೆಡ್ರಲ್‌ನಲ್ಲಿ ಸ್ಥಳೀಯ ರೆಕ್ಟರ್ ವಂ| ಆಲ್ಫೆ†ಡ್ ಜೆ. ಪಿಂಟೊ, ಸಹಾಯಕ ಗುರು ವಂ| ವಿನೋದ್ ಲೋಬೊ, ವಂ| ವಿಕ್ಟರ್ ಡಿ’ಸೋಜಾ ಮತ್ತು ಇತರ ಗುರುಗಳು ಉಪಸ್ಥಿತರಿದ್ದರು. ಬಾರ್ಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರು ವಂ| ಫಿಲಿಪ್ ನೆರಿ ಅರಾನ್ಹಾ, ಅತಿಥಿಗಳಾಗಿ ಧರ್ಮಗುರು ವಂ| ಚಾರ್ಲ್ಸ್
ಸಲ್ಡಾನ್ಹಾ ಉಪಸ್ಥಿತರಿದ್ದರು.
ಉಡುಪಿ ಧರ್ಮಪ್ರಾಂತದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ದೇವಾಲಯದ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೋನ್ಸಾ ಪಾಮ್ ಸಂಡೇಯ ಧಾರ್ಮಿಕ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ಶಿರ್ವ ಆರೋಗ್ಯ ಮಾತಾ ಚರ್ಚ್‌ನಲ್ಲಿ ಪ್ರಧಾನ ಧರ್ಮಗುರು ವಂ| ಡೆನಿಸ್ ಡೆಸಾ, ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ವಂ| ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ವಂ| ಸ್ಟಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದಲ್ಲಿ ವಂ| ಆಲ್ಬನ್ ಡಿ’ಸೋಜಾ ಧಾರ್ಮಿಕ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು.
ಗರಿಗಳ ರವಿವಾರದ ಹಿನ್ನೆಲೆ
2,000 ವರ್ಷಗಳ ಹಿಂದೆ ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಈವಾಗ ಇಲ್ಲಿ ಒಲಿವ್ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಹಿಂದಿನ ಘಟನೆಯನ್ನು ಸ್ಮರಿಸುತ್ತಾರೆ.
ಗರಿಗಳ ರವಿವಾರದೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ, ಶುಭ ಶುಕ್ರವಾರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ, ಶನಿವಾರ ರಾತ್ರಿ ಈಸ್ಟರ್ ಹಬ್ಬದ ಜಾಗರಣೆ ಹಾಗೂ ರವಿವಾರ ಯೇಸು ಕ್ರಿಸ್ತರ ಪುನರುತ್ಥಾನದ ದಿನದ ಹಬ್ಬವನ್ನು ಆಚರಿಸಲಾಗುತ್ತಿದೆ.
ಬೆಳ್ತಂಗಡಿ ಧರ್ಮಪ್ರಾಂತ್ಯ
ಬೆಳ್ತಂಗಡಿ: ಇಲ್ಲಿನ ಸಂತ ಲಾರೆನ್ಸ್ ಅವರ ಪ್ರಧಾನ ದೇವಾಲಯದಲ್ಲಿ ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನ ಯಾಚಕರಾಗಿ ಪವಿತ್ರ ಗರಿಗಳನ್ನು ಆಶೀರ್ವದಿಸಿ ಬಲಿ ಪೂಜೆ ಅರ್ಪಿಸಿ ಸಂದೇಶ ನೀಡಿದರು. ವಂ| ಥಾಮಸ್ ಕಣ್ಣಾಂಗಳ್, ಜ್ಞಾನನಿಲಯ ನಿರ್ದೇಶಕರಾದ ಜೋಸೆಫ್ ಮಟ್ಟಂ, ಪ್ರಧಾನ ಜುಡಿಶೀಯಲ್ ವಿರ್ಕಾ ವಂ| ಕುರಿಯಕೋಸ್ ವೆಟ್ಟುವಾಯಿ, ಪ್ರೊಕ್ಯುರೇರ್ಟ ವಂ| ಅಬ್ರಹಾಂ ಫಟ್ಟೇರಿಲ್, ಬೆಳ್ತಂಗಡಿ ಧರ್ಮಪ್ರಾಂತದ ಛಾನ್ಸಿಲರ್ ವಂ| ಲಾರೆನ್ಸ್ ಪುನೋಳಿಲ್ ಬಲಿಪೂಜೆಯಲ್ಲಿ ಪಾಲ್ಗೊಂಡರು. ಬೆಳ್ತಂಗಡಿ ಧರ್ಮಪ್ರಾಂತಕ್ಕೆ ಸಂಬಂಧಿಸಿದಂತೆ ಒಟ್ಟು 55 ಧರ್ಮಕೇಂದ್ರಗಳಲ್ಲಿ ಪವಿತ್ರ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.