ಪಾಂಗಾಳ ಶರತ್ ಶೆಟ್ಟಿ ಪ್ರಕರಣ; ದುಷ್ಕರ್ಮಿಗಳ ಪತ್ತೆಗೆ ದೈವಕ್ಕೆ ದೂರು
Team Udayavani, Feb 13, 2023, 6:45 AM IST
ಕಾಪು: ಕಳೆದ ರವಿವಾರ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಪ್ರಕರಣದ ಆರೋಪಿಗಳನ್ನು ಶೀಘ್ರ ಪೊಲೀಸರ ಕೈಗೆ ಸಿಲುಕಿಸುವಂತೆ ಮೃತ ಶರತ್ ಶೆಟ್ಟಿ ಕುಟುಂಬದವರು ಶುಕ್ರವಾರ ರಾತ್ರಿ ದೈವದ ಮೊರೆ ಹೋಗಿದ್ದಾರೆ.
ಪಾಂಗಾಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲನಾಗಿರುತ್ತಿದ್ದ ಶರತ್ ಶೆಟ್ಟಿ ರವಿವಾರ ಪಾಂಗಾಳ ಪಡು³ವಿನ ಬಬ್ಬುಸ್ವಾಮಿ ದೈವಸ್ಥಾನ ದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆ ಗೆಂದು ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು.
ಮಾಹಿತಿ ಸಂಗ್ರಹ
ಶರತ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕೊಲೆಗೆ ಸಂಬಂಧಿಸಿ ಹತ್ಯೆಗೀಡಾದ ಶರತ್ ಮತ್ತು ಕೊಲೆ ನಡೆಸಿರುವ ಆರೋಪಿಗಳು ಮತ್ತು ಹತ್ಯೆಗೆ ಕಾರಣವೇನು ಎನ್ನುವುದರ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಪ್ರಮುಖ ಆರೋಪಿಗಳ ಬೆನ್ನತ್ತಿದ್ದಾರೆ.
ಕಠಿನ ಶಿಕ್ಷೆಯಾಗಲಿ
ಮೃತ ಶರತ್ ಶೆಟ್ಟಿ ಅವರ ಕುಟುಂಬಿಕರ ಮನೆಯಲ್ಲಿ ಶುಕ್ರವಾರ ರಾತ್ರಿ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಶರತ್ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿನ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಸಂಬಂಧಿಕರು ದೈವದ ಮೊರೆ ಹೋಗಿದ್ದಾರೆ.
ಪೊಲೀಸರು ತನಿಖೆ ಚುರುಕು ಗೊಳಿಸಿದ್ದು, ಆರೋಪಿಗಳ ಚಲನವಲನ ಕಂಡು ಬಂದಿರುವ ಪ್ರದೇಶಗಳಲ್ಲಿನ ಸಿಸಿ ಕೆಮರಾ ಫೂಟೇಜ್, ಫೂಟೇಜ್‌ನಲ್ಲಿ ಸಿಕ್ಕಿರುವ ಮಾಹಿತಿಯಂತೆ ಅವರು ಓಡಾಡಿರುವ ಪ್ರದೇಶಗಳಲ್ಲಿ ಶನಿವಾರ ಮತ್ತೊಂದು ಸುತ್ತಿನ ಓಡಾಟ ನಡೆಸಿದ್ದು, ಯಾವುದಾರೂ ಸೊತ್ತುಗಳು ಸಿಗುತ್ತವೆಯೇ ಎನ್ನುವುದನ್ನೂ ಪರಿಶೀ ಲನೆ ನಡೆಸಿದ್ದಾರೆ ಎಂದು ಸ್ಥಳೀಯರು ಉದಯವಾಣಿಗೆ ತಿಳಿಸಿದ್ದಾರೆ.
ದೈವದ ಅಭಯ
ಪಾಂಗಾಳದಲ್ಲಿ ಕಾರಣಿಕ ಮೆರೆಯುತ್ತಿರುವ ಪಾಂಗಾಳ ಪಡ್ಪು ಬಬ್ಬುಸ್ವಾಮಿಯ ನೇಮದ ದಿನದಂದೇ ಎಲ್ಲರಿಗೆ ಬೇಕಾದ ವ್ಯಕ್ತಿಯನ್ನು ಕೊಲೆಗೈದು, ಊರಿಗೆ ಕಳಂಕ ತಂದಿರುವ ಆರೋಪಿಗಳು ಯಾರೇ ಆಗಿರಲಿ, ಎಲ್ಲೇ ಅಡಗಿರಲಿ, ಅವರನ್ನು ಶೀಘ್ರ ಕಾನೂನಿನ ಬಲೆಗೆ ಸಿಲುಕಿಸುತ್ತೇನೆ. ಅವರು ಮಾಡಿದ ತಪ್ಪಿಗೆ ಸೂಕ್ತ ಶಿಕ್ಷೆ ಅನುಭವಿಸುತ್ತಾರೆ. ಕಾನೂನಿನ ಶಿಕ್ಷೆಯೊಂದಿಗೆ ದೈವಗಳ ಶಿಕ್ಷೆಯೂ ಅವರಿಗೆ ಕಾದಿದೆ. ಹತ್ತು ದಿನದೊಳಗೆ ಎಲ್ಲ ಆರೋಪಿಗಳೂ ಪೊಲೀಸರ ವಶದಲ್ಲಿರುವಂತೆ ನೋಡಿಕೊಳ್ಳುತ್ತೇವೆ ಎಂದು ಧೂಮಾವತಿ ದೈವವು ಕುಟುಂಬದವರಿಗೆ ಅಭಯ ನೀಡಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.