North Delhi: ಮನೆಯೊಳಗೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು
ಅರಣ್ಯ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ
Team Udayavani, Apr 1, 2024, 11:25 AM IST
ನವದೆಹಲಿ: ಹಾಡಹಗಲೇ ಚಿರತೆಯೊಂದು ದೆಹಲಿಯ ರೂಪ್ ನಗರ್ ಪ್ರದೇಶದಲ್ಲಿನ ಮನೆಯೊಂದಕ್ಕೆ ನುಗ್ಗಿ ಐವರ ಮೇಲೆ ದಾಳಿ ನಡೆಸಿರುವ ಘಟನೆ ಸೋಮವಾರ (ಏಪ್ರಿಲ್ ೦1) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Lost Control: ಬೀಚ್ ಬದಿ ಕಾರು ಚಲಾಯಿಸಿ ಹುಚ್ಚು ಸಾಹಸ ಮಾಡಲು ಹೋಗಿ ಏನಾಯ್ತು ನೋಡಿ…
ದೆಹಲಿ ಅಗ್ನಿ ಶಾಮಕ ದಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಬೆಳಗ್ಗೆ 6.30ರ ಹೊತ್ತಿಗೆ ಚಿರತೆ ಮನೆಯೊಳಗೆ ನುಗ್ಗಿರುವ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ ದೆಹಲಿಯ ವಝಿರಾಬಾದ್ ನ ಜಗತ್ ಪುರ್ ಗ್ರಾಮಕ್ಕೆ ಎರಡು ಅಗ್ನಿಶಾಮಕ ದಳವನ್ನು ಕಳುಹಿಸಿಕೊಡಲಾಗಿತ್ತು ಎಂದು ತಿಳಿಸಿದ್ದಾರೆ.
ಸ್ಥಳೀಯ ಜನರ ನೆರವಿನೊಂದಿಗೆ ಚಿರತೆಯನ್ನು ಸೆರೆಹಿಡಿಯಲಾಯಿತು. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ಹೇಳಿದರು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.