ಜೈಲಿನ ಹಕ್ಕಿಗಳಿಗೂ ರೇಡಿಯೋ ಜಾಕಿ ಭಾಗ್ಯ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮುದಾಯ ರೇಡಿಯೋ
Team Udayavani, Oct 10, 2019, 6:15 AM IST
ಬೆಂಗಳೂರು,: ಜೈಲು ಹಕ್ಕಿಗಳಿಗೂ ರೇಡಿಯೋ ಜಾಕಿ (ಆರ್‌ಜೆ) ಭಾಗ್ಯ!ಕೊಲೆ, ದರೋಡೆ, ಸುಲಿಗೆ ಹೀಗೆ ಹಲವು ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಕೈದಿಗಳ ಮನಃಪರಿವರ್ತನೆಗಾಗಿ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕಾರಾಗೃಹ ಇಲಾಖೆ, ಇದೇ ಮೊದಲ ಬಾರಿಗೆ ಶಿಕ್ಷಾಬಂದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರತ್ಯೇಕ ಸಮುದಾಯ ಬಾನುಲಿ (ಕಮ್ಯೂನಿಟಿ ರೇಡಿಯೋ) ಆರಂಭಿಸಲು ಸಿದ್ದತೆ ನಡೆಸಿದೆ. ಈ ಮೂಲಕ ಕೈದಿಗಳು ಕೂಡ ರೇಡಿಯೋ ಜಾಕಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 1,500 ಸಜಾಬಂದಿಗಳು, 3,600 ವಿಚಾರಣಾಧೀನ ಕೈದಿಗಳು ಸೇರಿ ಐದು ಸಾವಿರಕ್ಕೂ ಅಧಿಕ ಕೈದಿಗಳಿದ್ದಾರೆ. ಎಲ್ಲರಿಗೂ ವಾರಾಂತ್ಯದಲ್ಲಿ ಎನ್‌ಜಿಒಗಳ ಕಡೆಯಿಂದ ಯೋಗ, ಧ್ಯಾನ ಇನ್ನಿತರ ಕಾರ್ಯಕ್ರಮಗಳ ಮೂಲಕ ಮನಃಪರಿವರ್ತನೆ ಮಾಡಲಾಗುತ್ತಿದೆ. ಈ ವೇಳೆ ಕೆಲವು ಕೈದಿಗಳಲ್ಲಿ ಕಂಡು ಬಂದ ಸುಪ್ತಪ್ರತಿಭೆಗಳನ್ನು ಕಂಡು ಅಚ್ಚರಿಗೊಂಡ ಕಾರಾಗೃಹ ಇಲಾಖೆ ಅಧಿಕಾರಿಗಳು ಈ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.
20 ಮಂದಿ ಆಯ್ಕೆ
ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಸಾಕಷ್ಟು ವಿದ್ಯಾವಂತರು, ಪದವೀಧರರು, ಎಂಜಿನಿಯರ್‌ಗಳು ಜೈಲು ಸೇರಿದ್ದಾರೆ. ಅವರಲ್ಲಿರುವ ಭಾಷಾಜ್ಞಾನ, ಆಸಕ್ತಿ, ವಿದ್ಯಾರ್ಹತೆ, ಭಾಷಣಕಾರರು, ಹಾಡುಗಾರರು, ವಾಕ್ಚಾತುರ್ಯ ಉಳ್ಳ ಅರ್ಹ ಕೈದಿಗಳಿಗೆ ನಾನಾ ಹಂತದಲ್ಲಿ ಪರೀಕ್ಷೆಗಳನ್ನು ನಡೆಸಿ ಈ ಮೂಲಕ ಆರು ಮಂದಿ ಮಹಿಳೆಯರು ಸೇರಿ 20 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ರೇಡಿಯೋದಲ್ಲಿ ಏನೆಲ್ಲ ಇರುತ್ತೆ?
ಒಂದು ವರ್ಷದ ಯೋಜನೆಯನ್ನು ಈಗ ಕಾರ್ಯರೂಪಕ್ಕೆ ತರಲಾಗಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಸಮುದಾಯ ರೇಡಿಯೋ ಸಂಪೂರ್ಣವಾಗಿ ಕಾರ್ಯಾರಂಭ ಮಾಡಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ನಿರಂತರವಾಗಿ ವಿವಿಧ ಕಾರ್ಯಕ್ರಮಗಳು ಪ್ರಸಾರವಾಗಲಿವೆ.
ಕಾರ್ಯನಿರ್ವಹಣೆ ಹೇಗೆ?
ಕಾರಾಗೃಹ ವ್ಯಾಪ್ತಿಯಲ್ಲಿ ಸಮುದಾಯ ರೇಡಿಯೋ ಕಾರ್ಯನಿರ್ವಹಿಸಲಿದ್ದು, 16 ಬ್ಯಾರಕ್‌ಗಳಲ್ಲಿಯೂ ಧ್ವನಿವರ್ಧಕ ಅಳವಡಿಸಲಾಗಿದೆ. ಕಾರಾಗೃಹದ ಆಡಳಿತ ಕಚೇರಿ ಪಕ್ಕದಲ್ಲೇ ರೇಡಿಯೋ ಸ್ಟೇಷನ್ ನಿರ್ಮಾಣ ಮಾಡಲಾಗುತ್ತದೆ. ಕೈದಿಗಳು ಅಲ್ಲಿ ಆರ್‌ಜೆ ಜತೆ ಮಾತನಾಡಬಹುದು.
- ಮೋಹನ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.