Paris Olympics: ಹಾಕಿ ವೀರರಿಗೆ ಸಿಎಂ ಭಗವಂತ್ ಮಾನ್ ಸಮ್ಮಾನ
Team Udayavani, Aug 19, 2024, 12:11 AM IST
ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್‌ನ ಹಾಕಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ತಂಡ ಪಂಜಾಬ್ ರಾಜ್ಯದ ಆಟಗಾರರಿಗೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಲಾ ಒಂದು ಕೋಟಿ ರೂ. ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಅವರು ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತಂದ ಈ ಮಣ್ಣಿನ ಪುತ್ರರನ್ನು ಸಮ್ಮಾನಿಸುತ್ತಿರುವುದು ಐತಿಹಾಸಿಕ ಸಂದರ್ಭವಾಗಿದೆ ಎಂದರು. ರಾಜ್ಯದ ಎಂಟು ಹಾಕಿ ಆಟಗಾರರಿಗೆ ತಲಾ 1 ಕೋಟಿ ರೂ. ಮತ್ತು ರಾಜ್ಯದಿಂದ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾಗವಹಿಸಿದ 11 ಮಂದಿಗೆ ತಲಾ 15 ಲಕ್ಷ ರೂ.ಗಳ ಚೆಕ್ ಅನ್ನು ಅವರು ವಿತರಿಸಿದರು.
ಭಾರತ ತಂಡದ ಪ್ರತಿಯೊಂದು ಹಾಕಿ ಪಂದ್ಯವನ್ನು ತಾನು ವೀಕ್ಷಿಸಿದ್ದೇನೆ ಮತ್ತು ಈ ಆಟಗಾರರ ಅದ್ಭುತ ಪ್ರದರ್ಶನ ಎಲ್ಲರಿಗೂ ಹೆಮ್ಮೆ ತಂದಿದೆ ಎಂದು ಮಾನ್ ಹೇಳಿದರು. ಪದಕ ಗೆಲ್ಲುವುದು ಪ್ರತಿಯೊಬ್ಬ ಸ್ಪರ್ಧಿಯ ಕನಸು ಆಗಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಮುಂಚೂಣಿಯಲ್ಲಿ ನಿಂತು ತಂಡವನ್ನು ಮುನ್ನಡೆಸಿದ ರೀತಿ ಅದ್ಭುತವಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.