Parliament: ವಾಕ್ಸಮರಗಳ ನಡುವೆ ಇಂದು ಭವ್ಯ ಸಂಸತ್ ಉದ್ಘಾಟನೆ
ಉದ್ಘಾಟನೆಗೆ ಹಾಜರಾಗುತ್ತೇನೆಂದ ಗುಲಾಮ್ ಆಜಾದ್, ಗೈರು ಎಂದ ನಿತೀಶ್ ಕುಮಾರ್
Team Udayavani, May 28, 2023, 7:03 AM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭವ್ಯವಾಗಿ ನಿರ್ಮಾಣಗೊಂಡಿರುವ ನೂತನ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ 140ನೇ ಜನ್ಮದಿನದಂದೇ ಈ ಭವನ ಲೋಕಾರ್ಪಣೆಗೊಳ್ಳುತ್ತಿದೆ.
ಈ ಅದ್ಧೂರಿ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡರೂ, ಉದ್ಘಾಟನೆಯನ್ನು ಯಾರು ಮಾಡಬೇಕು ಎಂಬ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ಯುದ್ಧ ಮಾತ್ರ ನಿಂತಿಲ್ಲ. ಶನಿವಾರವೂ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪ ಮುಂದುವರಿದಿತ್ತು.
ಬಹಿಷ್ಕರಿಸಲ್ಲ ಎಂದ ಆಜಾದ್
ಸಂಸತ್ ಭವನ ಉದ್ಘಾಟನೆಯಿಂದ ದೂರವುಳಿಯಲು 20 ಪ್ರತಿಪಕ್ಷಗಳು ನಿರ್ಧರಿಸಿರುವಂತೆಯೇ, ದಿ ಡೆಮೋಕ್ರಾಟಿಕ್ ಪ್ರೊಗ್ರೆಸ್ಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, ತಾವು ಕಾರ್ಯಕ್ರಮವನ್ನು ಬಹಿಷ್ಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ದಾಖಲೆ ಅವಧಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಎಲ್ಲ ಪಕ್ಷಗಳೂ ಬಿಜೆಪಿ ಸರ್ಕಾರವನ್ನು ಶ್ಲಾ ಸಬೇಕು. ಆದರೆ, ಪ್ರತಿಪಕ್ಷಗಳು ಕಾರ್ಯಕ್ರಮವನ್ನೇ ಬಹಿಷ್ಕರಿಸುವುದಾಗಿ ಹೇಳುತ್ತಿವೆ. ಇದನ್ನು ನಾನು ವಿರೋಧಿಸುತ್ತೇನೆ ಎಂದಿದ್ದಾರೆ.
ಪರಮೋಚ್ಚ ಹುದ್ದೆಗೆ ಅವಮಾನ
ಸಂವಿಧಾನದ 79ನೇ ವಿಧಿಯ ಪ್ರಕಾರ, ರಾಷ್ಟ್ರಪತಿಗಳು, ರಾಜ್ಯಸಭೆ ಮತ್ತು ಲೋಕಸಭೆ ಮೂರೂ ಸೇರಿ ಸಂಸತ್ ರೂಪುಗೊಂಡಿದೆ. ರಾಷ್ಟ್ರಪತಿಯು ದೇಶದ ಪ್ರಥಮ ಪ್ರಜೆ ಮತ್ತು ದೇಶದ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್. ಹೀಗಿರುವಾಗ ಸಂಸತ್ ಭವನ ಉದ್ಘಾಟನೆಯಿಂದ ರಾಷ್ಟ್ರಪತಿಯವರನ್ನು ಹೊರಗಿಟ್ಟಿರುವುದು ಭಾರತದ ಪರಮೋಚ್ಚ ಹುದ್ದೆಗೆ ಮಾಡುವ ಅವಮಾನ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ನಾವು ಪ್ರಧಾನಿ ಮೋದಿಯವರನ್ನು ವಿರೋಧಿಸುತ್ತಿಲ್ಲ. ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳ ಕಡೆಗಣನೆಯನ್ನು ವಿರೋಧಿಸುತ್ತಿದ್ದೇವೆ ಎಂದೂ ಸುಳೆ ಸ್ಪಷ್ಟಪಡಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, “ಹೊಸ ಸಂಸತ್ ಭವನದ ಅಗತ್ಯವೇನಿತ್ತು? ಹಿಂದಿನ ಕಟ್ಟಡವೇ ಐತಿಹಾಸಿಕವಾಗಿತ್ತು. ಅಧಿಕಾರದಲ್ಲಿರುವ ಜನರು ಈ ದೇಶದ ಇತಿಹಾಸವನ್ನು ಬದಲಿಸುತ್ತಾರೆ ಎಂದು ನಾನು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದೇನೆ’ ಎಂದಿದ್ದಾರೆ.
ರಾಜಕೀಯ ಮಾಡಲೂ ಮಿತಿ ಬೇಕು:
20 ಪ್ರತಿಪಕ್ಷಗಳು ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, ಇದೊಂದು ದುರದೃಷ್ಟಕರ ಸಂಗತಿ. ರಾಜಕೀಯ ಮಾಡುವುದಕ್ಕೂ ಮಿತಿ ಬೇಕು. ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಇಡೀ ದೇಶದ ಹಬ್ಬವೆಂಬಂತೆ ಆಚರಿಸಬೇಕು ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಕೆಲವು ವ್ಯಕ್ತಿಗಳಿಗೆ ಸಂಸತ್ ಭವನ ಪ್ರವೇಶಿಸುವುದಕ್ಕೆ ನಿರ್ಬಂಧವಿದೆ. ಈವರೆಗೆ ಇವರೆಲ್ಲ ಸದನಗಳ ಕಲಾಪ ಕೊಚ್ಚಿಹೋಗುವಂತೆ ಮಾಡಲು ನೆಪಗಳನ್ನು ಹುಡುಕುತ್ತಿದ್ದರು. ಈಗ ಸಂಸತ್ ಭವನ ಉದ್ಘಾಟನೆಯನ್ನೇ ಬಹಿಷ್ಕರಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಖರ್ಗೆ, ಕೇಜ್ರಿವಾಲ್ ವಿರುದ್ಧ ಎಫ್ಐಆರ್
ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯ ಬಗ್ಗೆ ಪ್ರಸ್ತಾಪಿಸಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ, ರಾಜಕೀಯ ಉದ್ದೇಶಕ್ಕಾಗಿ ಭಾರತ ಸರ್ಕಾರದ ಬಗ್ಗೆ ಅಪನಂಬಿಕೆ ಮೂಡಿಸುವ ಯತ್ನ ಆರೋಪವನ್ನು ಈ ನಾಯಕರ ವಿರುದ್ಧ ಹೊರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.