Patanjali: ಬಾಬಾ ರಾಮ್ ದೇವ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಸುಪ್ರೀಂ
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (IMA) ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
Team Udayavani, Aug 13, 2024, 1:02 PM IST
ನವದೆಹಲಿ: ಪತಂಜಲಿ(Patanjali) ಆಯುರ್ವೇದ ಉತ್ಪನ್ನಗಳಿಗೆ ಸಂಬಂಧಿಸಿದಂತೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಕ್ಷಮೆಯಾಚಿಸಿರುವ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್(Supreme court) ಮಂಗಳವಾರ (ಆಗಸ್ಟ್ 13) ಆದೇಶ ನೀಡಿದೆ.
ನ್ಯಾಯಾಂಗ ನಿಂದನೆ ಕೈಬಿಟ್ಟಿರುವ ಸುಪ್ರೀಂಕೋರ್ಟ್, ಒಂದು ವೇಳೆ ಆದೇಶ ಉಲ್ಲಂಘಿಸಿ ಯಾವುದೇ ನಿರ್ಧಾರ ಕೈಗೊಂಡರೇ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಂಗ ನಿಂದನೆ ಕುರಿತು ಮೇ 14ರಂದು ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಅಸಾದುದ್ದೀನ್ ಅಮಾನುಲ್ಲಾ ಆದೇಶವನ್ನು ಕಾಯ್ದಿರಿಸಿದ್ದರು.
ಆಧುನಿಕ ವೈದ್ಯ ಪದ್ಧತಿ ಮತ್ತು ಕೋವಿಡ್ ಲಸಿಕೆ ವಿರುದ್ಧ ಪತಂಜಲಿ ಆಕ್ಷೇಪಾರ್ಹ ಪ್ರಚಾರ ಕೈಗೊಂಡಿತ್ತು. ಇದರ ವಿರುದ್ಧ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (IMA) ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
2023ರ ನವೆಂಬರ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಬಾಬಾ ರಾಮ್ ದೇವ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಇಂತಹ ಜಾಹೀರಾತು ನೀಡುವುದನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು.
ಆದರೆ ಪತಂಜಲಿ ಸಂಸ್ಥೆ ಫೆಬ್ರವರಿಯಲ್ಲಿ ಹಾದಿತಪ್ಪಿಸುವ ಜಾಹೀರಾತು ನೀಡುವುದನ್ನು ಮುಂದುವರಿಸಿರುವುದನ್ನು ಗಮನಿಸಿ ಪತಂಜಲಿ ಕಂಪನಿ ಮತ್ತು ಆಡಳಿತ ನಿರ್ದೇಶಕ ಬಾಲಕೃಷ್ಣ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.