ಊರಿನ ಸಮಸ್ಯೆ ಹೇಳಲು ಬಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ : ಶಾಸಕರ ನಡೆಗೆ ಭಾರೀ ಆಕ್ರೋಶ
Team Udayavani, Apr 20, 2022, 4:00 PM IST
ಪಾವಗಡ: ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮಂಗಳವಾರ ಯುವಕನೋರ್ವನಿಗೆ ಶಾಸಕ ವೆಂಕಟರಮಣಪ್ಪ ಅವರು ಕಪಾಳಕ್ಕೆ ಹೊಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ನರೇಂದ್ರ ಎಂಬ ಯುವಕ ತಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲ, ಬಸ್ ಸೌಕರ್ಯವಿಲ್ಲ, ಯಾರೊಬ್ಬ ಮುಖಂಡನೂ ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಗಮನಹರಿಸುತ್ತಿಲ್ಲ ಎಂದು ಬಗರ್ ಹುಕುಂ ಸಭೆ ಮುಗಿಸಿಕೊಂಡು ಹೊರ ಬರುತ್ತಿದ್ದ ಶಾಸಕ ವೆಂಕಟರಮಣಪ್ಪರನ್ನು ಪ್ರಶ್ನಿಸಿದ್ದಾನೆ.
ಪ್ರಶ್ನಿಸುವ ಭರದಲ್ಲಿ ಕೆಟ್ಟ ಪದಗಳನ್ನು ಬಳಸಿದ್ದರಿಂದ ಕೋಪಗೊಂಡ ಶಾಸಕ ವೆಂಕಟರಮಣಪ್ಪ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಶಾಸಕರು ಸಂಯಮದಿಂದ ವರ್ತಿಸಬೇಕು, ಒಂದು ವೇಳೆ ಯುವಕ ತಪ್ಪು ಮಾಡಿದ್ದರೂ ಬುದ್ದಿ ಹೇಳಬೇಕಿತ್ತು. ಸಾರ್ವಜನಿಕವಾಗಿ ಹೊಡೆಯಬಾರದಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತದೆ.
ಘಟನೆ ಮಂಗಳವಾರ ನಡೆದಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.
ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.