PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
Team Udayavani, Jul 4, 2024, 10:35 AM IST
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಗರ
ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಪವಿತ್ರಾಗೌಡ ದರ್ಶನ್‌ನ 2ನೇ ಪತ್ನಿಯಲ್ಲ. ಆಕೆ ಸ್ನೇಹಿತೆ ಅಷ್ಟೇ. ನಾನೇ ದರ್ಶನ್ ಧರ್ಮ ಪತ್ನಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
ಸಾಮಾಜಿಕ ಜಾಲತಾಣ ಹಾಗೂ ಕೆಲ ಪೊಲೀಸರು ನಟಿ ಪವಿತ್ರಾ ಗೌಡ ಅವರನ್ನು ದರ್ಶನ್ ಅವರು 2ನೇ ಪತ್ನಿ ಎಂದು ಹೇಳು ತ್ತಿದ್ದರು. ಈ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ವಿಜಯಲಕ್ಷ್ಮೀ ಅವರು ಬರೆದಿರುವ ಪತ್ರದಲ್ಲಿ, “ದರ್ಶನ್ ಮತ್ತು ನಾನು 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆ ಆಗಿದ್ದೇವೆ. ನಮಗೆ ಒಬ್ಬ ಮಗ ಇದ್ದಾನೆ ಎಂದು ತಿಳಿಸಿದ್ದಾರೆ.
ಪವಿತ್ರಾ ಗೌಡ ದರ್ಶನ್ ನ 2ನೇ ಪತ್ನಿ ಅಲ್ಲ. ಕೇವಲ ಸ್ನೇಹಿತೆ ಅಷ್ಟೇ. ಪವಿತ್ರಾ ಗೌಡಗೆ ಈಗಾಗಲೇ ಸಂಜಯ್ ಸಿಂಗ್ ಎಂಬವರ ಜತೆ ಮದುವೆಯಾಗಿದ್ದು, ಒಬ್ಬಳು ಮಗಳು ಕೂಡ ಇದ್ದಾಳೆ. ಕಾನೂನು ಪ್ರಕಾರ ನಾನು ಮಾತ್ರ ದರ್ಶನ್‌ನ ಏಕೈಕ ಪತ್ನಿ.
ಆದರೆ, ಪವಿತ್ರಾಗೌಡ ದರ್ಶನ್‌ನ 2ನೇ ಪತ್ನಿ ಎಂದು ಹೇಳುತ್ತಿರುವುದಕ್ಕೆ ನನಗೆ ನೋವಾಗಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.